

ಜಗತ್ತಿನ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗಾಳಿಯಿಂದಲೂ ಹರಡುತ್ತದೆ ಎಂಬ ಭಯಾನಕ ಮಾಹಿತಿಯನ್ನು ವಿಜ್ಞಾನಿಗಳು ಹೊರ ಹಾಕಿದ್ದಾರೆ.

ನವದೆಹಲಿ: ಜಗತ್ತಿನ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗಾಳಿಯಿಂದಲೂ ಹರಡುತ್ತದೆ ಎಂಬ ಭಯಾನಕ ಮಾಹಿತಿಯನ್ನು ವಿಜ್ಞಾನಿಗಳು ಹೊರ ಹಾಕಿದ್ದಾರೆ.
ಹೌದು.. ಇಷ್ಟು ದಿನ ಕೊರೋನಾ ವೈರಸ್ ಸೋಂಕಿತ ವ್ಯಕ್ತಿಯ ಸೀನುವಿಕೆಯಿಂದ ಬರುವ ಡ್ರಾಪ್ ಲೆಟ್ಸ್, ಸ್ಪರ್ಶ ಮತ್ತು ಆತ ಮುಟ್ಟಿದ ವಸ್ತುಗಳಿಂದ ಹರಡುತ್ತದೆ ಎಂದೇ ನಂಬಲಾಗಿತ್ತು. ಆದರೆ ಇದೀಗ ಜಗತ್ತಿನ ಸುಮಾರು 239 ವಿಜ್ಞಾನಿಗಳು ಕೊರೋನಾ ವೈರಸ್ ಗಾಳಿಯಿಂದಲೂ ಹರಡುತ್ತದೆ ಎಂಬ ಸ್ಫೋಟಕ ಮಾಹಿತಿ ಹೊರ ಹಾಕಿದ್ದಾರೆ.
ಕೊರೋನಾ ವೈರಸ್ ಮೇಲೆ ನಿರಂತರವಾಗಿ ಸಂಶೋಧನೆ ನಡೆಸಿರುವ ವಿವಿಧ ದೇಶಗಳ ಸುಮಾರು 239 ವೈದ್ಯರು, ‘ಸೋಂಕಿತ ವ್ಯಕ್ತಿಯೊಬ್ಬರು ಸೀನಿದ ನಂತರ ಗಾಳಿಯ ಮೂಲಕ ವೈರಸ್ ಕಣಗಳು ಬೇರೆಡೆಗೆ ಹರಡುತ್ತವೆ. ಗಾಳಿಯಲ್ಲಿರುವ ಕಣಗಳು ಉಸಿರಾಟದ ಮೂಲಕ ಮತ್ತೊಬ್ಬ ವ್ಯಕ್ತಿಯ ದೇಹವನ್ನು ಸೇರುತ್ತವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. (kcp)

1 Comment