

ಇಂದು ಉತ್ತರ ಕನ್ನಡದಲ್ಲಿ ಕರೋನಾಘಾತವಾಗಲಿದ್ದು ಭಟ್ಕಳದ 40 ಕ್ಕಿಂತಲೂ ಹೆಚ್ಚು ಪ್ರಕರಣಗಳು ಸೇರಿ ಇಂದು ಉತ್ತರ ಕನ್ನಡದಲ್ಲಿ 80 ಕ್ಕಿಂತ ಹೆಚ್ಚು ಜನರಲ್ಲಿ ಕೋವಿಡ್ ದೃಢವಾಗಲಿದೆ ಎನ್ನಲಾಗಿದೆ.
ಈ ತಿಂಗಳ ಪ್ರಾರಂಭದಿಂದ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕರೋನಾ ಸೋಂಕಿತರ ಪ್ರಮಾಣ ಮತ್ತು ಕೋವಿಡ್ ಸೋಂಕಿತರೊಂದಿಗೆ ಸಂಬಂಧ-ಸಂಪರ್ಕ
ಇಲ್ಲದವರಲ್ಲೂ ಕೋವಿಡ್ ಸೋಂಕು ಕಾಣಿಸಿಕೊಳ್ಳುತ್ತಿರುವುದು ಕರೋನಾ ಗಾಳಿಯಲ್ಲಿ ಹರಡುತ್ತಿದೆಯಾ? ಭಟ್ಕಳ ಸೇರಿದಂತೆ ಜಿಲ್ಲೆಯ ಕೆಲವೆಡೆ ಸಾಮೂದಾಯಿಕ ವಾಗುತ್ತಿದೆಯಾ ಎನ್ನುವ ಅನುಮಾನಕ್ಕೆ ಆಸ್ಪದ ಮಾಡುವಂತಿದೆ.
ಸ್ಫೋಟಕ ಮಾಹಿತಿ ಹೊರ ಹಾಕಿದ ವಿಜ್ಞಾನಿಗಳು-ಗಾಳಿಯಿಂದಲೂ ಹರಡುತ್ತೆ ಮಾರಕ ಕೊರೋನಾ ವೈರಸ್
Kanneshwar Naik — July 6, 2020 0 comment
ಜಗತ್ತಿನ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗಾಳಿಯಿಂದಲೂ ಹರಡುತ್ತದೆ ಎಂಬ ಭಯಾನಕ ಮಾಹಿತಿಯನ್ನು ವಿಜ್ಞಾನಿಗಳು ಹೊರ ಹಾಕಿದ್ದಾರೆ.

ನವದೆಹಲಿ: ಜಗತ್ತಿನ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗಾಳಿಯಿಂದಲೂ ಹರಡುತ್ತದೆ ಎಂಬ ಭಯಾನಕ ಮಾಹಿತಿಯನ್ನು ವಿಜ್ಞಾನಿಗಳು ಹೊರ ಹಾಕಿದ್ದಾರೆ.
ಹೌದು.. ಇಷ್ಟು ದಿನ ಕೊರೋನಾ ವೈರಸ್ ಸೋಂಕಿತ ವ್ಯಕ್ತಿಯ ಸೀನುವಿಕೆಯಿಂದ ಬರುವ ಡ್ರಾಪ್ ಲೆಟ್ಸ್, ಸ್ಪರ್ಶ ಮತ್ತು ಆತ ಮುಟ್ಟಿದ ವಸ್ತುಗಳಿಂದ ಹರಡುತ್ತದೆ ಎಂದೇ ನಂಬಲಾಗಿತ್ತು. ಆದರೆ ಇದೀಗ ಜಗತ್ತಿನ ಸುಮಾರು 239 ವಿಜ್ಞಾನಿಗಳು ಕೊರೋನಾ ವೈರಸ್ ಗಾಳಿಯಿಂದಲೂ ಹರಡುತ್ತದೆ ಎಂಬ ಸ್ಫೋಟಕ ಮಾಹಿತಿ ಹೊರ ಹಾಕಿದ್ದಾರೆ.
ಕೊರೋನಾ ವೈರಸ್ ಮೇಲೆ ನಿರಂತರವಾಗಿ ಸಂಶೋಧನೆ ನಡೆಸಿರುವ ವಿವಿಧ ದೇಶಗಳ ಸುಮಾರು 239 ವೈದ್ಯರು, ‘ಸೋಂಕಿತ ವ್ಯಕ್ತಿಯೊಬ್ಬರು ಸೀನಿದ ನಂತರ ಗಾಳಿಯ ಮೂಲಕ ವೈರಸ್ ಕಣಗಳು ಬೇರೆಡೆಗೆ ಹರಡುತ್ತವೆ. ಗಾಳಿಯಲ್ಲಿರುವ ಕಣಗಳು ಉಸಿರಾಟದ ಮೂಲಕ ಮತ್ತೊಬ್ಬ ವ್ಯಕ್ತಿಯ ದೇಹವನ್ನು ಸೇರುತ್ತವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. (kcp)
