ಎದೆ ಎಕ್ಸ್ರೇಯಿಂದಲೇ ಕೋವಿಡ್ ಪತ್ತೆ: 6 ಹೊಸ ಉತ್ಪನ್ನ ಬಿಡುಗಡೆ ಮಾಡಿದ ಅಶ್ವತ್ಥ್ ನಾರಾಯಣ್

ವಿದೇಶಗಳಿಂದ ಮಾತ್ರ ಆಮದು ಮಾಡಿಕೊಂಡು ಕೋವಿಡ್- 19 ಸೋಂಕು ಪತ್ತೆ ಮಾಡುವ ಅತ್ಯಾಧುನಿಕ ಎದೆ ಎಕ್ಸರೆ ಸೇರಿ ಆರು ಪ್ರಮುಖ ಉತ್ಪನ್ನಗಳನ್ನು ಇದೀಗ ದೇಶಿಯವಾಗಿ, ಬೆಂಗಳೂರಿನ ಕನ್ನಡದ ವಿಜ್ಞಾನಿಗಳು ಮತ್ತು ಸಂಶೋಧಕರು ಅಭಿವೃದ್ಧಿಪಡಿಸಿದ್ದಾರೆ. ಇದರೊಂದಿಗೆ ಕೋವಿಡ್ ವಿರುದ್ಧದ ಸಮರದಲ್ಲಿ ರಾಜ್ಯಕ್ಕೆ ಮಹತ್ವದ ಮುನ್ನಡೆ ಸಿಕ್ಕಿದಂತಾಗಿದೆ. 

DCM Ashwath Narayan

ಬೆಂಗಳೂರು: ವಿದೇಶಗಳಿಂದ ಮಾತ್ರ ಆಮದು ಮಾಡಿಕೊಂಡು ಕೋವಿಡ್- 19 ಸೋಂಕು ಪತ್ತೆ ಮಾಡುವ ಅತ್ಯಾಧುನಿಕ ಎದೆ ಎಕ್ಸರೆ ಸೇರಿ ಆರು ಪ್ರಮುಖ ಉತ್ಪನ್ನಗಳನ್ನು ಇದೀಗ ದೇಶಿಯವಾಗಿ, ಬೆಂಗಳೂರಿನ ಕನ್ನಡದ ವಿಜ್ಞಾನಿಗಳು ಮತ್ತು ಸಂಶೋಧಕರು ಅಭಿವೃದ್ಧಿಪಡಿಸಿದ್ದಾರೆ. ಇದರೊಂದಿಗೆ ಕೋವಿಡ್ ವಿರುದ್ಧದ ಸಮರದಲ್ಲಿ ರಾಜ್ಯಕ್ಕೆ ಮಹತ್ವದ ಮುನ್ನಡೆ ಸಿಕ್ಕಿದಂತಾಗಿದೆ. 

ರಾಜ್ಯದ ಐಟಿ- ಬಿಟಿ ಇಲಾಖೆ ವ್ಯಾಪ್ತಿಯ ಬೆಂಗಳೂರು ಬಯೋ ಇನ್ನೋವೇಷನ್ ಕೇಂದ್ರದ ಅಡಿಯಲ್ಲಿ ಸಂಶೋಧನೆಯಲ್ಲಿ ನಿರತವಾಗಿರುವ ವಿವಿಧ ಸ್ಟಾರ್ಟ್ಅಪ್ ಗಳು ಈ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿವೆ. ಇದರಿಂದಾಗಿ ನಾವು ಬಹುತೇಕ ವಿದೇಶಿ ಅವಲಂಬನೆಯನ್ನು ತಗ್ಗಿಸಬಹುದಾಗಿದ್ದು, ಜತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆತ್ಮನಿರ್ಭರ್ ಭಾರತ ಪರಿಕಲ್ಪನೆಯ ಸ್ಫೂರ್ತಿಗೆ ಮನ್ನಣೆ ದೊರೆತಂತಾಗಿದೆ ಎಂದು ಐಟಿ-ಬಿಟಿ ಇಲಾಖೆಯ ಜವಾಬ್ದಾರಿ ಹೊತ್ತಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. 

ನವೋದ್ಯಮಗಳು ಅಭಿವೃದ್ಧಿಪಡಿಸಿರುವ ಆರು ಉತ್ಪನ್ನಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಇವುಗಳಿಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ – ಐಸಿಎಂಆರ್ ಮಾನ್ಯತೆ ಸಿಕ್ಕಿದೆ. ಈ ಕ್ಷಣದಿಂದಲೇ ಇವು ಬಳಕೆ, ಖರೀದಿ ಮಾಡಬಹುದು. ಜತೆಗೆ ಸರಕಾರವು ಈ ಉತ್ಪನ್ನಗಳಿಗೆ ಎಲ್ಲ ರೀತಿಯ ಪ್ರೋತ್ಸಾಹ ನೀಡಲಿದೆ ಎಂದರು.
 
ಅತ್ಯಂತ ಅಲ್ಪಾವಧಿಯಲ್ಲಿಯೇ ನಮ್ಮ ಯುವ ಸಂಶೋಧಕರು, ವಿಜ್ಞಾನಿಗಳು ಈ ಉತ್ಪನ್ನಗಳನ್ನು ತಯಾರಿಸಿದ್ದಾರೆ. ಇವು ವಿದೇಶಗಳಿಂದ ನಾವು ಆಮದು ಮಾಡಿಕೊಳ್ಳುತ್ತಿದ್ದ ಉತ್ಪನ್ನಗಳಿಗಿಂತ ಉತ್ತಮ ಗುಣಮಟ್ಟದಿಂದ ಕೂಡಿದ್ದು, ಆಧುನಿಕ ತಂತ್ರಜ್ಞಾನ ಒಳಗೊಂಡಿವೆ. ಕರ್ನಾಟಕ ಮಾತ್ರವಲ್ಲದೆ, ಭಾರತ ನಡೆಸುತ್ತಿರುವ ಕೋವಿಡ್ ವಿರುದ್ಧದ ಹೋರಾಟಕ್ಕೆ ಇದರಿಂದ ದೊಡ್ಡ ಬಲ ಬಂದಂತಾಗಿದೆ ಎಂದರು. 

ಆರು ಉತ್ಪನ್ನಗಳ ವಿಶೇಷ
ಕೋವಿಡ್ 19 ವೈರಾಣುಗಳನ್ನು ಪರಿಣಾಮಕಾರಿಯಾಗಿ ನಿರ್ಮೂಲನೆ ಮಾಡುವ ಸಾಧನವಿದು. ಇದು ಮೈಕ್ರೋವೇವ್ ಬಾಕ್ಸ್ ರೀತಿಯಲ್ಲಿ ವಿವಿಧ ಗಾತ್ರಗಳಲ್ಲಿ ಇರುತ್ತದೆ. ಇದರಲ್ಲಿ ಅಲ್ಟ್ರಾವೈಲೇಟ್ ರೇಸ್ ಇರಲಿದ್ದು, ಈ ರೇಸ್ ಬಿದ್ದಾಗ ವೈರಸ್ ಕೇವಲ 15 ಸೆಕೆಂಡುಗಳಲ್ಲಿ ಸಾಯುತ್ತದೆ. ನಮಗೆ ಯಾವುದೇ ವಸ್ತುವಿನ ಉದಾಹರಣೆಗೆ ಪರ್ಸ್, ಮೊಬೈಲ್, ಪೆನ್ನು ಮೇಲೆ ವೃರಸ್ ಇದೆ ಎಂಬ ಅನುಮಾನವಿದ್ದರೆ ಈ ಬಾಕ್ಸ್ ನಲ್ಲಿ ಆ ವಸ್ತುವನ್ನು ಹಾಕಿ ಆನ್ ಮಾಡಿದರೆ ವೈರಸ್ ಸಾಯುತ್ತದೆ. ಈ ಉತ್ಪನ್ನವನ್ನು ಬಯೋ ಫೀ ಕಂಪನಿಯ ರವಿಕುಮಾರ್ ಸಂಶೋಧಿಸಿ ತಯಾರಿಸಿದ್ದಾರೆ.

ಫ್ಲೋರೋಸೆನ್ಸ್ ಪ್ರೋಬ್ಸ್:
ಇದು ಕೋವಿಡ್ ಕಿಟ್ ನಲ್ಲಿ ಇರಬಹುದಾದ ಪ್ರಮುಖ ಅಂಗ. ಇದು ಇಲ್ಲದಿದ್ದರೆ ವೈರಸ್ ಅನ್ನು ಪತ್ತೆ ಮಾಡಲು ಸಾಧ್ಯವಿಲ್ಲ. ಆರ್ಟಿ-ಪಿಸಿಆರ್ ಪರೀಕ್ಷೆಯಲ್ಲಿ ಫ್ಲೋರೋಸೆನ್ಸ್ ಪ್ರೋಬ್ಸ್ ಅನ್ನು ಬಳಸಲಾಗುತ್ತದೆ. ಭಾರತದಲ್ಲಿ ಕೋವಿಡ್ ಕಿಟ್ ತಯಾರಿಸುವ ಕಂಪನಿಗಳಿಗೆ ಈ ಸಂಶೋಧನೆ ವರದಾನವಾಗಿದೆ. ಇದು ಹೊರಬಂದ ಕಾರಣ ಕಿಟ್ ತಯಾರಿಸುವುದು ಸುಲಭವಾಗಲಿದೆ. ಇದನ್ನು ವಿಎನ್ ಐಆರ್ ಸಂಸ್ಥೆಯ ಡಾ. ಗೋವಿಂದರಾಜು ಮತ್ತು ಡಾ. ಮೆಹರ್ ಪ್ರಕಾಶ್ ಅಭಿವೃದ್ಧಿಪಡಿಸಿದ್ದಾರೆ. ಜಾಗತಿಕ ಮಾರುಕಟ್ಟೆಯಲ್ಲಿ ಈ ಉತ್ಪನ್ನವೂ ಬಹಳ ದುಬಾರಿ ಮತ್ತು ಅಷ್ಟೇ ಸೂಕ್ಷ್ಮವೂ ಹೌದು. ಇದನ್ನು ವಿವಿಧ ದೇಶಗಳಿಂದ, ಮುಖ್ಯವಾಗಿ ಚೀನಾದಿಂದ ಆಮದು ಮಾಡಿಕೊಳ್ಳಲಾಗುತ್ತಿತ್ತು. 

ಭ್ರೂಣ ನಿಗಾ ಯಂತ್ರ (ಫೀಟೆಲ್ ಮಾನಿಟರಿಂಗ್ ಡಿವೈಸ್): 
ಕೋವಿಡ್ ಇದ್ದಾಗ ಗರ್ಭಿಣಿಯರು ನೇರವಾಗಿ ವೈದ್ಯರನ್ನು ಭೇಟಿಯಾಗಲು ಸಾಧ್ಯವಿಲ್ಲ. ಪಟ್ಟಿಯಾಕಾರಾದ ಈ ಉಪಕರಣದ ಮೂಲಕ ಭ್ರೂಣದ ಹೃದಯ ಬಡಿತವನ್ನೂ ವೈದ್ಯರು ತಿಳಿಯಬಹುದು. ಗರ್ಭಿಣಿಯರು ಈ ಉಪಕರಣವನ್ನು ತಮ್ಮ ಹೊಟ್ಟೆ ಮೇಲಿಟ್ಟುಕೊಂಡರೆ ವೈದ್ಯರಿಗೆ ಎಲ್ಲ ಮಾಹಿತಿಯೂ ತಿಳಿಯುತ್ತದೆ. ಗರ್ಭಣಿಯರು ಮನೆಯಲ್ಲಿದ್ದೇ ಚಿಕಿತ್ಸೆ ಪಡೆಯಬಹುದು. ವರ್ಚುವಲ್ ಮೂಲಕವೇ ಚಿಕಿತ್ಸೆ ಪಡೆಯಲು ಸಹಕಾರಿಯಾಗಲಿದೆ. ಈ ಯಂತ್ರವನ್ನು ʼದಕ್ಷ್’ ಎಂದು ಕರೆಯಲಾಗುತ್ತದೆ. ಜೆನಿತ್ರೀ ಕಂಪನಿಯ ಡಾ. ಅರುಣ್ ಅಗರವಾಲ್ ಇದರ ಜನಕರು. 

ವಿಟಿಎಂ (ವೈರಲ್ ಟ್ರಾನ್ಸ್ ಪೋರ್ಟ್ ಮೀಡಿಯಾ)
’ಡೇಕೊಂತೋ’ ಎಂಬ ಹೆಸರಿನ ಈ ಉತ್ಪನ್ನವನ್ನು ಡಿನೋವೋ ಬಯೋಲ್ಯಾಬ್ಸ್ ನ ಐಬಿಎಬಿಯ ಮಂಜುನಾಥ್ ಹಾಗೂ ದಿನೇಶ್ ಅವರು ಸಂಶೋಧಿಸಿದ್ದಾರೆ. ಇದು ಸದ್ಯದ ಸ್ಥಿತಿಯಲ್ಲಿ ಅತ್ಯಂತ ಮಹತ್ವದ ಸಂಶೋಧನೆಯಾಗಿದೆ. ಸೋಂಕಿತರಿಂದ ಗಂಟಲು ದ್ರವ ಮತ್ತಿತರೆ ಸ್ಯಾಂಪಲ್ ಗಳನ್ನು ಪಡೆದು ಟಿಸ್ಟಿಂಗ್ ಲ್ಯಾಬ್ ಗೆ ಕಳಿಸುವ ಪ್ರಕ್ರಿಯೆಯಲ್ಲಿ ಈ ಉಪಕರಣ ಅತ್ಯಗತ್ಯವಾಗಿ ಬೇಕಿತ್ತು. ಏಕೆಂದರೆ, ಇದು ಜೀವಂತ ವೈರಸ್ ಅನ್ನು ಸಾಗಿಸುತ್ತದೆ. ಜೀವಂತ ವೈರಸ್ ಅನ್ನು ಒಂದು ಕಡೆಯಿಂದ ಇನ್ನೊಂದಡೆಗೆ ಸಾಗಿಸುವುದು ಅತ್ಯಂತ ಸವಾಲಿನದ್ದು, ಅಪಾಯಕಾರಿ ಕೂಡ.

ಕೋವ್-ಆಸ್ತ್ರ: 
ಈ ಸಂಶೋಧನೆ ಬಹಳ ವಿಶೇಷವಾಗಿದೆ. ಇದುವರೆಗೂ ನಾವು ಗಂಟಲು ದ್ರವ ಮತ್ತಿತರ ಮಾದರಿಗಳನ್ನು ಪಡೆದು ಕೋವಿಡ್ ಪತ್ತೆ ಮಾಡುತ್ತಿದ್ದೆವು. ಈಗ ಕೋವ್ – ಅಸ್ತ್ರದ ಮೂಲಕ ಕೇವಲ ರೋಗಿಯ ಎದೆಯ ಭಾಗದ ಎಕ್ಸ್ ರೇ ತೆಗೆದು ವೈರಸ್ ಇದೆಯೇ ಇಲ್ಲವೇ ಎಂಬುದನ್ನು ಪತ್ತೆ ಹಚ್ಚಬಹುದು. ಸುಮಾರು 4 ರಿಂದ 5 ಸಾವಿರ ರೂಪಾಯಿ ವೆಚ್ಚವನ್ನು ಕಡಿಮೆ ಮಾಡಿ ಕೇವಲ 150ರಿಂದ 200 ರೂಪಾಯಿ ಎಕ್ಸ್ ರೇ ಯಿಂದ ಸೋಂಕು ಪತ್ತೆ ಮಾಡಬಹುದು. ಇದಕ್ಕಾಗಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಕೆ ಮಾಡಲಾಗುತ್ತದೆ. ಈ ಮೂಲಕ ವ್ಯಕ್ತಿಗೆ ಕೋವಿಡ್ ಪಾಸಿಟೀವ್ ಇದೆಯೇ ಇಲ್ಲವೇ ಎಂಬುದನ್ನು ಸುಲಭ, ಸರಳವಾಗಿ ತಿಳಿಯಬಹುದು. ಇದನ್ನು ಅಯಿಂದ್ರ ಕಂಪನಿಯ ಆದರ್ಶ್ ನಟರಾಜನ್ ಸಂಶೋಧಿಸಿ ಅಭಿವೃದ್ಧಿಪಡಿಸಿದ್ದಾರೆ. 

ಆಂಟಿ ಮೈಕ್ರೋಬಿಯಲ್ ಫೇಸ್ ವಾಶ್ 
ಮುಖದ ಮೇಲೆ ಕೂರುವ ಕೋವಿಡ್ ವೈರಸ್ ಜತೆಗೆ ಬೇರೆ ಯಾವುದೇ ವೈರಾಣುವನ್ನು ಸೆಕೆಂಡುಗಳಲ್ಲಿ ನಾಶ ಮಾಡುವ ಫೇಸ್ ವಾಶ್ ಇದಾಗಿದೆ. ಇದನ್ನು ಗಿಡಮೂಲಿಕೆಗಳಿಂದ ತಯಾರಿಸಲಾಗಿದೆ. ಕೋವಿಡ್ ನಂತಹ ಸೂಕ್ಷ್ಮ ಸಂದರ್ಭಗಳಲ್ಲಿ ಇದು ಬಹಳ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಇದನ್ನು ಆಟ್ರಿಮ್ಡ್ ಕಂಪನಿಯ ಡಾ. ಲತಾ ಡ್ಯಾಮಲ್ ಅವರು ಸಂಶೋಧಿಸಿ ಅಭಿವೃದ್ಧಿಪಡಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *