
ಕೋವಿಡ್-19 ಲಾಕ್ ಡೌನ್ ಸಂದರ್ಭದಲ್ಲಿ ತೊಂದರೆಗೊಳಗಾದ ಕ್ಷೌರಿಕರು, ಅಗಸರು, ಕಟ್ಟಡ ಕಾರ್ಮಿಕರು, ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣ ಕೆಲಸ ಮಾಡಿದ ಕಾರ್ಮಿಕರಿಗೆ ಹಾಗೂ ಜೋಳ ಬೆಳೆಗಾರರಿಗೆ ಮುಖ್ಯ ಮಂತ್ರಿ ಬಿಡುಗಡೆ ಮಾಡಿರುವ ಅನುದಾನ ಪ್ಯಾಕೇಜ್‍ಗಳನ್ನು ಫಲಾನುಭವಿಗಳಿಗೆ ಶೀಘ್ರವಾಗಿ ತಲುಪಿಸುವಂತೆ ಕಾರ್ಮಿಕ ಹಾಗೂ ಸಕ್ಕರೆ ಸಚಿವ ಅರಬೈಲ್ ಶಿವರಾಮ ಹೆಬ್ಬಾರ ತಿಳಿಸಿದ್ದ

ಹಾಸನ: ಕೋವಿಡ್-19 ಲಾಕ್ ಡೌನ್ ಸಂದರ್ಭದಲ್ಲಿ ತೊಂದರೆಗೊಳಗಾದ ಕ್ಷೌರಿಕರು, ಅಗಸರು, ಕಟ್ಟಡ ಕಾರ್ಮಿಕರು, ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣ ಕೆಲಸ ಮಾಡಿದ ಕಾರ್ಮಿಕರಿಗೆ ಹಾಗೂ ಜೋಳ ಬೆಳೆಗಾರರಿಗೆ ಮುಖ್ಯ ಮಂತ್ರಿ ಬಿಡುಗಡೆ ಮಾಡಿರುವ ಅನುದಾನ ಪ್ಯಾಕೇಜ್‍ಗಳನ್ನು ಫಲಾನುಭವಿಗಳಿಗೆ ಶೀಘ್ರವಾಗಿ ತಲುಪಿಸುವಂತೆ ಕಾರ್ಮಿಕ ಹಾಗೂ ಸಕ್ಕರೆ ಸಚಿವ ಅರಬೈಲ್ ಶಿವರಾಮ ಹೆಬ್ಬಾರ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್-19 ತಡೆಗಟ್ಟಲು ಯಾವುದೇ ಕೊರತೆಯಾಗದಂತೆ ಎಲ್ಲಾ ಇ.ಎಸ್.ಐ. ಆಸ್ಪತ್ರೆ ಹಾಗೂ ವಿವಿಧ ಆಸ್ಪತ್ರೆಗಳಿಗೆ ಔಷಧಗಳನ್ನು ಪೂರೈಸಲಾಗಿದೆ ಎಂದರು.
ಮುಖ್ಯಮಂತ್ರಿಯವರು ಕಟ್ಟಡ ಕಾರ್ಮಿಕರಿಗೆ ತಲಾ 5,000ರೂ. ನಂತೆ 14 ಲಕ್ಷ ಕಟ್ಟಡ ಕಾರ್ಮಿಕರಿಗೆ 800 ಕೋಟಿ ರೂ.ಗಳ ಅನುದಾನ ವಿತರಿಸಲಾಗಿದೆ.2.40 ಲಕ್ಷ ಕ್ಷೌರಿಕರು ಹಾಗೂ 70 ಸಾವಿರ ಅಗಸರು ಒಟ್ಟಾರೆ 3 ಲಕ್ಷ ಫಲಾನುಭವಿಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ್ದು,ಹಲವರ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಹಾಗೂ ಐ.ಎಫ್.ಎಸ್.ಸಿ. ಕೋಡ್ ದೊರೆಯದಿರುವ ಕಾರಣ ಡಿ.ಬಿ.ಟಿ. ಮೂಲಕ ವರ್ಗಾವಣೆ ಮಾಡಲಾಗಿಲ್ಲ ಎಂದರು.
ಈ ಎರಡು ಸಮುದಾಯಗಳಿಗೆ ಹಣ ದೊರೆಯುವುದು ಸ್ವಲ್ಪ ವಿಳಂಬವಾಗಿದ್ದು, ಒಂದು ವಾರದೊಳಗೆ ಈ ಎಲ್ಲಾ ಫಲಾನುಭವಿಗಳಿಗೆ ಹಣ ದೊರೆಯುವಂತೆ ಮಾಡಲಾಗುತ್ತದೆ ಎಂದು ಕಾರ್ಮಿಕ ಹಾಗೂ ಸಕ್ಕರೆ ಸಚಿವರು ತಿಳಿಸಿದರು.
