ಮುಖ್ಯಮಂತ್ರಿಗಳಿಗೆ ಮನವಿ, ಆಶಾ ಕಾರ್ಯಕರ್ತೆಯರಿಗೆ ಗೌರವಧನದ ಸನ್ಮಾನ

ಈ ವಾರ ಉತ್ತರ ಕನ್ನಡ-01-

ನಿನ್ನೆ ಕೋಲಾರ ಬಂಗಾರಪೇಟೆಯಲ್ಲಿ ನಡೆದ ತಹಸಿಲ್ಧಾರರ ಹತ್ಯೆಗೆ ರಾಜ್ಯದಾದ್ಯಂತ ತೀವೃ ವಿರೋಧ ವ್ಯಕ್ತವಾಗಿದೆ. ಇಂದು ಶಿರಸಿ-ಸಿದ್ಧಾಪುರಗಳಲ್ಲಿ ಮನವಿ ನೀಡಿದ ರಾಜ್ಯ ನೌಕರರ ಸಂಘ ಮತ್ತು ಕಂದಾಯ ಇಲಾಖೆ ನೌಕರರು ಈ ಪ್ರಕರಣದ ಸೂಕ್ತ ತನಿಖೆ ಮಾಡಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಲು ಮತ್ತು ಸರ್ಕಾರಿ ನೌಕರರಿಗೆ ಸೂಕ್ತ ಭದ್ರತೆಗೆ ಆಗ್ರಹಿಸಿ ತಹಸಿಲ್ಧಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಸಿದ್ಧಾಪುರ ಸೋಮುವಾರದಿಂದ ಮಧ್ಯಾಹ್ನ 2 ಗಂಟೆಗೆ ಕ್ಲೋಜ್-
ಉತ್ತರ ಕನ್ನಡ ದಲ್ಲಿ ಬಹುತೇಕ ತಾಲೂಕುಗಳಲ್ಲಿ ಅರ್ಧದಿನದ ಲಾಕ್ ಡೌನ್ ನಡೆಯುತ್ತಿದೆ. ಇದೇ ರೀತಿ ಸಿದ್ಧಾಪುರದಲ್ಲಿ ಕೂಡಾ ಜುಲೈ13 ರ ಸೋಮವಾರದಿಂದ ಮಧ್ಯಾಹ್ನ 2 ರ ನಂತರ ಸ್ವಯಂಪ್ರೇರಿತ ಲಾಕ್ಡೌನ್ ಮಾಡುವ ಬಗ್ಗೆ ರವಿವಾರದ ಒಳಗೆ ನಿರ್ಧರಿಸುವುದಾಗಿ ಪ.ಪಂ. ಸದಸ್ಯ ಕೆ.ಜಿ.ನಾಯ್ಕ ಹಣಜಿಬೈಲ್ ತಿಳಿಸಿದ್ದಾರೆ. ಸಮಾಜಮುಖಿ ಗೆ ಪ್ರತಿಕ್ರೀಯೆ ನೀಡಿದ ಻ಅವರು ಹಣ,ವ್ಯಾಪಾರಕ್ಕಿಂತ ಬದುಕು ದೊಡ್ಡದು, ಕರೋನಾ ಹಿನ್ನೆಲೆಯಲ್ಲಿ ಸಿದ್ಧಾಪುರದಲ್ಲಿ ಮುಂದಿನ ವಾರ ಮಧ್ಯಾಹ್ನದ ನಂತರ ಸ್ವಯಂಪ್ರೇರಿತ ಲಾಕ್ಡೌನ್ ಮಾಡುತ್ತೇವೆ. ಈ ಬಗ್ಗೆ ಎರಡು ದಿವಸಗಳಲ್ಲಿ ಸಾರ್ವಜನಿಕವಾಗಿ ಪ್ರಕಟಣೆ ಮಾಡುತ್ತೇವೆ ಎಂದರು.


ಮರತೆಗೆಸಿ- ಸಿದ್ಧಾಪುರ ನಗರದಲ್ಲಿ ಬೀಳಬಹುದಾದ ಹಳೆಯ ಮರಗಳನ್ನು ಕಡಿಸಲು ಜೆ.ಡಿ.ಎಸ್. ಅಲ್ಫಸಂಖ್ಯಾತರ ಘಟಕದ ಅಧ್ಯಕ್ಷ ಇಲಿಯಾಸ್ ಇಬ್ರಾಹಿಂ ಶೇಖ್ ಆಗ್ರಹಿಸಿದ್ದಾರೆ. ಈ ಬಗ್ಗೆ ಲಿಖಿತ ಮನವಿಯೊಂದನ್ನು ಸ್ಥಳಿಯ ವಲಯ ಅರಣ್ಯಾಧಿಕಾರಿಗಳಿಗೆ ನೀಡಿರುವ ಅವರು ಮಳೆಗಾಲದಲ್ಲಿ ಬೀಳಬಹುದಾದ ಈ ಮರಗಳನ್ನು ತೆರವು ಮಾಡಿ ಸಂಭಾವ್ಯ ಅನಾಹುತ ತಪ್ಪಿಸುವಂತೆ ಕೋರಿದ್ದಾರೆ.
ಆಶಾ ಕಾಳಜಿ- ಕೋವಿಡ್ ಕಾರ್ಯಕರ್ತರಾಗಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ವೇತನ, ಗೌರವ ಧನ ನೀಡಿ ಅವರ ನಿಸ್ವಾರ್ಥ ಸೇವೆ ಗೌರವಿಸಬೇಕೆಂದು ಇಲಿಯಾಸ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು ಆಶಾಕಾರ್ಯಕರ್ತೆಯರ ಗೌರವ ಧನ, ಸುರಕ್ಷತಾ ವಸ್ತುಗಳನ್ನು ನೀಡಿ ಅವರ ಶ್ರಮಕ್ಕೆ ಗೌರವಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಆಶಾ ಗೌರವ-

ಕರೋನಾ ಮತ್ತು ಮಂಗನ ಕಾಯಿಲೆ ತಡೆಗೆ ಶ್ರಮಿಸಿದ ವಾಜಗೋಡು ಭಾಗದ ಆಶಾ ಕಾರ್ಯಕರ್ತರನ್ನು ವಾಜಗೋಡು ಸೇವಾ ಸಹಕಾರಿ ಸಂಘ ಗೌರವಿಸಿದೆ. ಅವರ ಕೆಲಸವನ್ನು ಅಭಿನಂದಿಸಿದ ಸಂಘ ಆಶಾ ಕಾರ್ಯಕರ್ತೆಯರನ್ನು ಗೌರವಿಸಿ ಗೌರವ ಧನ ನೀಡುವ ಮೂಲಕ ಅವರ ಸೇವೆಯನ್ನು ಪ್ರಶಂಸಿಸಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *