

ಮುಂದಿನ ಆದೇಶ ಹೊರಡಿಸುವವರೆಗೂ ಎಲ್ಲಾ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆಗಳನ್ನು ರದ್ದುಗೊಳಿಸಬೇಕು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ 8 ದಿನಗಳ ನಂತರ ಕಾಂಗ್ರೆಸ್ ಮುಖಂಡ ಎಚ್ ಕೆ ಪಾಟೀಲ್ ಸ್ಪೀಕರ್ ಗೆ ಪತ್ರ ಬರೆದಿದ್ದಾರೆ.

ಬೆಂಗಳೂರು: ಮುಂದಿನ ಆದೇಶ ಹೊರಡಿಸುವವರೆಗೂ ಎಲ್ಲಾ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆಗಳನ್ನು ರದ್ದುಗೊಳಿಸಬೇಕು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ 8 ದಿನಗಳ ನಂತರ ಕಾಂಗ್ರೆಸ್ ಮುಖಂಡ ಎಚ್ ಕೆ ಪಾಟೀಲ್ ಸ್ಪೀಕರ್ ಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಕೊರೋನಾ ಚಿಕಿತ್ಸೆಗೆ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಆಗಿದೆ ಎನ್ನಲಾಗಿರುವ ಅವ್ಯವಹಾರಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆಯನ್ನು ಆನ್‌ಲೈನ್ ಮೂಲಕ ನಡೆಸಬೇಕು ಹಾಗೂ ಇ-ತಪಾಸಣೆಗಳಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಎಚ್.ಕೆ ಪಾಟೀಲ್ ಅವರು ಸ್ಪೀಕರ್ ಗೆ ಪತ್ರದಲ್ಲಿ ತಿಳಿಸಿದ್ದಾರೆ.
ಕೊರೋನಾ ನಿರ್ವಹಣೆ ಹಾಗೂ ಪ್ರತಿಯೊಂದು ಹಂತದ ಖರೀದಿಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬರುತ್ತಿದೆ. ಚಿಕಿತ್ಸಾ ಸಾಮಗ್ರಿಗಳು ಕಳಪೆ ಗುಣಮಟ್ಟದವು ಎಂಬ ಆರೋಪವಿದೆ. ಈ ಕುರಿತಾಗಿ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಭ್ರಷ್ಟಾಚಾರ ಸಂದೇಹಗಳು ಬಲವಾಗುತ್ತಿವೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇಂತಹ ಸಂದರ್ಭದಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯಂತಹ ಮಹತ್ವದ ಸಮಿತಿಯು ತನ್ನ ಕರ್ತವ್ಯದಿಂದ ವಿಮುಖವಾಗಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಗಳನ್ನು ನಡೆಸಬೇಕು. ಅಧಿಕಾರಿಗಳಿಂದ ವಿವರಣೆ ಪಡೆಯಬೇಕು. ತಪ್ಪಿತಸ್ಥರನ್ನು ಗುರುತಿಸಬೇಕು ಹಾಗೂ ಕ್ರಮ ಜರಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಕರ್ನಾಟಕ ಸರ್ಕಾರ ಇ ಆಡಳಿತ ವ್ಯವಸ್ಥೆಯಲ್ಲಿ ಮೊಬೈಲ್ kswan ವಿದ್ಯುನ್ಮಾನಚಾಲಿತ ವ್ಯವಸ್ಥೆ ಹೊಂದಿರುವ ವಾಹನದ ಮೂಲಕ ತಪಾಸಣೆ ಕೈಗೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತಂದು ದಶಕ ಕಳೆದಿದೆ.ವಿಧಾನ ಮಂಡಲದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಇಂತಹ ವಿಶಿಷ್ಟ ಸಂದರ್ಭದಲ್ಲಿ ಈ ಸೌಲಭ್ಯವನ್ನು ಉಪಯೋಗ ಮಾಡಬೇಕು ಎಂದು ಎಚ್‌ಕೆ ಪಾಟೀಲ್ ಒತ್ತಾಯಿಸಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
