: ರಾಜ್ಯ ಸರ್ಕಾರದಿಂದ ಆದೇಶ-ರಾಜ್ಯದ ವಿವಿಧ ನಿಗಮ ಮಂಡಳಿಗಳಿಗೆ 24 ಶಾಸಕರುಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಬೆಂಗಳೂರು: ರಾಜ್ಯದ ವಿವಿಧ ನಿಗಮ ಮಂಡಳಿಗಳಿಗೆ 24 ಶಾಸಕರುಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಶಿವಮೊಗ್ಗದ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಅರಗ ಜ್ಞಾನೇಂದ್ರ ಅವರನ್ನು ಕರ್ನಾಟಕ ಗೃಹ ಮಂಡಳಿಗೆ, ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು ವಿಭಾಗಕ್ಕೆ ಚಿತ್ರದುರ್ಗದ ಹೊಳಲ್ಕೆರೆ ಶಾಸಕ ಎಂ ಚಂದ್ರಪ್ಪ ಅವರನ್ನು ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಸಂಸ್ಥೆಗೆ ಯಾದಗಿರಿ ಶೋರಾಪುರ ಶಾಸಕ ನರಸಿಂಹ ನಾಯಕ್ (ರಾಜುಗೌಡ) ಅವರನ್ನು ನೇಮಕ ಮಾಡಲಾಗಿದೆ.
ಉಳಿದಂತೆ ಹೊಸದಾಗಿ ನೇಮಕ ಮಾಡಲಾಗಿರುವ ನಿಗಮ ಮಂಡಳಿಗಳ ನೇಮಕ ವಿವರ ಇಲ್ಲಿದೆ.