

ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಆರ್ಭಟ ಮುಂದುವರಿದಿದೆ. ಕಳೆದ ಐದು ದಿನಗಳಿಂದ ದಿನವೊಂದರಲ್ಲಿ ಐದು ಸಾವಿರಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ.

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಆರ್ಭಟ ಮುಂದುವರಿದಿದೆ. ಕಳೆದ ಐದು ದಿನಗಳಿಂದ ದಿನವೊಂದರಲ್ಲಿ ಐದು ಸಾವಿರಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ.
ಸೋಮವಾರ ರಾಜ್ಯದಲ್ಲಿ ಒಟ್ಟು 5324 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,01,465ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮಹಾಮಾರಿಗೆ ಇಂದು 75 ಮಂದಿ ಬಲಿಯಾಗಿದ್ಧಾರೆ. ಈ ಮೂಲಕ ಇದುವರೆಗೂ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 1953ಕ್ಕೆ ಏರಿಕೆಯಾಗಿದೆ.
ಇಂದು ರಾಜಧಾನಿ ಬೆಂಗಳೂರು ನಗರದಲ್ಲಿ 1470 ಪ್ರಕರಣಗಳು ಪತ್ತೆಯಾಗಿದ್ದು, 26 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.
