

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 52,050 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,55,746ಕ್ಕೆ ಏರಿಕೆಯಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಸಾಗರ ಶಾಸಕ ಹರತಾಳು ಹಾಲಪ್ಪ ರಲ್ಲಿ ಕರೋನಾ ಸೋಂಕು ದೃಢಪಟ್ಟಿರುವುದರಿಂದ ಅವರ ಪ್ರಾಥಮಿಕ ಸಂಪರ್ಕದ ವ್ಯಕ್ತಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಅವರಿಬ್ಬರೂ ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 52,050 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,55,746ಕ್ಕೆ ಏರಿಕೆಯಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಇನ್ನು ಒಂದೇ ದಿನ 803 ಮಂದಿ ಬಲಿಯಾಗಿದ್ದು, ಸಾವನ್ನಪ್ಪಿದ್ದವರ ಸಂಖ್ಯೆ ಕೂಡ 38938ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
18,55,746 ಮಂದಿ ಸೋಂಕಿತರ ಪೈಕಿ ಈ ವರೆಗೂ 1230510 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿನ್ನೂ 586298 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ಈ ನಡುವೆ ದೇಶದಲ್ಲಿ ಒಂದೇ ದಿನ ಕೊರೋನಾ ಸೋಂಕಿನ ಕಾರಣಕ್ಕೆ 6,61,182 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಹಿತಿ ನೀಡಿದೆ.
ನಿನ್ನೆ ಒಂದೇ ದಿನ ದೇಶಾದ್ಯಂತ 6,61,182 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಆಗಸ್ಟ್ 3ರವರೆಗೂ 2,08,64,750 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. (kpc)

