central notice-ತರಕಾರಿ-ದಿನಸಿ ವ್ಯಾಪಾರಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿ, ರಾಜ್ಯಗಳಿಗೆ ಕೇಂದ್ರದ ಹೊಸ ಸೂಚನೆ

ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೋನ ಪರೀಕ್ಷೆಗೆ ಒಳಪಡಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಶನಿವಾರ ಸೂಚನೆ ನೀಡಿದೆ.

grocery shop vendors

ನವದೆಹಲಿ: ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೋನ ಪರೀಕ್ಷೆಗೆ ಒಳಪಡಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಶನಿವಾರ ಸೂಚನೆ ನೀಡಿದೆ.

ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಯಲ್ಲಿ ಕೇಂದ್ರ ಸರ್ಕಾರ ಹೊಸ ನಿರ್ಧಾರ ತೆಗೆದುಕೊಂಡಿದ್ದು, ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೋನ ಪರೀಕ್ಷೆಗೆ ಒಳಪಡಿಸುವುದು ಸೂಕ್ತ ಎಂದೂ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ದೇಶಾದ್ಯಂತ ದಿನಬಳಕೆ ವಸ್ತುಗಳ ವ್ಯಾಪಾರಿಗಳು, ದಿನಸಿ ಮತ್ತು ತರಕಾರಿ ವ್ಯಾಪಾರಿಗಳ ಮುಖಾಂತರ ಸೋಂಕು ಪ್ರಸರಣದ ಕುರಿತು ಮಾಹಿತಿ ಲಭ್ಯವಾಗುತ್ತಿದ್ದು, ಇದೇ ಕಾರಣಕ್ಕೆ ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿದೆ.

ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳ ಮೂಲಕ ಕೋವಿಡ್ ಸೋಂಕು ಹರಡುವ ಸಂಭಾವ್ಯರಾಗಿರುವ ಕಾರಣ, ಅವರಿಗೆಲ್ಲರಿಗೂ ಕೊರೋನಾ ಟೆಸ್ಟ್ ಮಾಡಿಸಬೇಕು ಎಂದು ಸೂಚಿಸಲಾಗಿದೆ ಎಂದು ಅವರು ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದ್ದಾರೆ. 

ಪತ್ರದಲ್ಲಿ ಕೊರೋನಾ ಸೋಂಕಿತರನ್ನು ಕರೆದೊಯ್ಯಲು ಅನುಕೂಲವಾಗುವಂತೆ ಸುಸಜ್ಜಿತ ಆಂಬುಲೆನ್ಸ್ ಸೌಲಭ್ಯ ನಿಗದಿಪಡಿಸಬೇಕು. ತುರ್ತು ಕರೆಗಳಿಗೆ ತಕ್ಷಣವೇ ಸ್ಪಂದಿಸುವಂತೆ ಸೂಚಿಸಿದ್ದಾರೆ. ಕೊರೋನಾ ಈಗ ಹೊಸ ಪ್ರದೇಶಗಳಿಗೆ ಹರಡುತ್ತಿದೆ. ಹೀಗಾಗಿ ಆರಂಭದಲ್ಲಿಯೇ ಸೋಂಕಿತರನ್ನು ಪತ್ತೆಹಚ್ಚಿ ಪರೀಕ್ಷೆಗೆ ಒಳಪಡಿಸುವ ಮೂಲಕ ಕೊರೋನಾ ಸೋಂಕಿನ ಪ್ರಸರಣ ಕಡಿಮೆ ಮಾಡುವಂತೆ ಸೂಚಿಸಿದ್ದಾರೆ. 

ಇದಲ್ಲದೇ, ಆಮ್ಲಜನಕ ವ್ಯವಸ್ಥೆ ಹೊಂದಿರುವ ಅಂಬುಲೆನ್ಸ್​ ಹಾಗೂ ತುರ್ತು ಸ್ಪಂದನಾ ವ್ಯವಸ್ಥೆಯನ್ನು ಕಾರ್ಯಾಚರಣೆಗೊಳಿಸಬೇಕಾಗುತ್ತದೆ. ಅಂಬುಲೆನ್ಸ್​ ಸೇವೆ ದೊರೆಯದ ಪ್ರಕರಣಗಳನ್ನು ನಿತ್ಯವೂ ಗಮನಿಸಬೇಕು ಹಾಗೂ ಅದನ್ನು ಶೂನ್ಯಕ್ಕೆ ಇಳಿಸಬೇಕು. ಹೊಸ ಪ್ರದೇಶಗಳಲ್ಲಿ ಸಣ್ಣ ಅಥವಾ ದೊಡ್ಡ ಪ್ರಮಾಣದಲ್ಲಿ ಕರೊನಾ ಪ್ರಕರಣಗಳು ಕಂಡುಬರುತ್ತಿವೆ. ಮುಖ್ಯವಾಗಿ ಇದನ್ನು ನಿಯಂತ್ರಿಸಬೇಕಿದೆ. ಇದರ ಜೊತೆಗೆ ಜೀವ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಬೇಕಿದೆ ಎಂದು ಭೂಷಣ್​ ಹೇಳಿದ್ದಾರೆ.  ಸಾವಿನ ಸಂಖ್ಯೆಯನ್ನು ಕೂಡ ನಿಯಂತ್ರಣಕ್ಕೆ ತರಬೇಕಿದ್ದು, ಇದು ಶೇ.1ಕ್ಕಿಂತ ಕಡಿಮೆ ಇರುವಂತೆ ನೋಡಿಕೊಳ್ಳಬೇಕಿದೆ ಎಂದು ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ ರಾಜೇಶ್​ ಭೂಷಣ್​ ಪತ್ರ ಬರೆದಿದ್ದಾರೆ.(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *