

ದಿನ ಕಳೆದಂತೆ ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ. ಹೌದು ರಾಜ್ಯದಲ್ಲಿಂದು 4,267 ಪ್ರಕರಣಗಳು ಪತ್ತೆಯಾಗಿದ್ದು 114 ಮಂದಿ ಬಲಿಯಾಗಿದ್ದಾರೆ.

ಬೆಂಗಳೂರು: ದಿನ ಕಳೆದಂತೆ ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ. ಹೌದು ರಾಜ್ಯದಲ್ಲಿಂದು 4,267 ಪ್ರಕರಣಗಳು ಪತ್ತೆಯಾಗಿದ್ದು 114 ಮಂದಿ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 4,267 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,82,354ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು 114 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 3,312ಕ್ಕೆ ಏರಿಕೆಯಾಗಿದೆ.
ಒಟ್ಟಾರೆ 1,82,354 ಕೊರೋನಾ ಪ್ರಕರಣಗಳ ಪೈಕಿ 99,126 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 80,908 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 1,243 ಮಂದಿ ಕೊರೋನಾಗೆ ತುತ್ತಾಗಿದ್ದಾರೆ. ಇನ್ನು 36 ಮಂದಿ ಇಂದು ಮೃತಪಟ್ಟಿದ್ದು ಒಟ್ಟಾರೆ 1,276 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಒಟ್ಟಾರೆ 75,428 ಸೋಂಕಿತರ ಪೈಕಿ 41,166 ಮಂದಿ ಗುಣಮುಖರಾಗಿದ್ದಾರೆ. ಇನ್ನು 32,985 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. (kpc) ಉತ್ತರ ಕನ್ನಡ ಸಿದ್ಧಾಪುರದ ವರದಿಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಕೋವಿಡ್ ವರದಿ ಓದಿ, samajamukhi.net & samajamukhi kannesh youtube channel ನೋಡಿ.
