new guideline of ganesha fest-ಗಣೇಶ್ ಹಬ್ಬ ಆಚರಣೆಗೆ ಅಡ್ಡಿಯಾಗಿದ್ದ ಮಾರ್ಗಸೂಚಿ ಪರಿಷ್ಕರಣೆ: ಮುಖ್ಯಮಂತ್ರಿ ಯಡಿಯೂರಪ್ಪ

ಗಣೇಶ್ ಹಬ್ಬ ಆಚರಣೆಗೆ ಅಡ್ಡಿಯಾಗಿದ್ದ ಮಾರ್ಗಸೂಚಿ ಪರಿಷ್ಕರಣೆ ಮಾಡಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

Karnataka CM BS Yeddyurappa

ಬೆಂಗಳೂರು: ಗಣೇಶ್ ಹಬ್ಬ ಆಚರಣೆಗೆ ಅಡ್ಡಿಯಾಗಿದ್ದ ಮಾರ್ಗಸೂಚಿ ಪರಿಷ್ಕರಣೆ ಮಾಡಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಕೊರೋನಾ ಹಿನ್ನೆಲೆಯಲ್ಲಿ ಗಣೇಶೋತ್ಸವ ಆಚರಣೆಗೆ ಅಡ್ಡಿಯುಂಟಾಗಲಿದೆ ಎಂದು ಸಾರ್ವಜನಿಕರಿಂದ ವ್ಯಕ್ತವಾದ ಆಕ್ಷೇಪಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ. ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಪೂಜೆ ಪುನಸ್ಕಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಅವರು, ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ,ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ. ಕೊರೋನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯ ಪೂರ್ವಕ ಮನವಿ ಮಾಡುತ್ತಿದ್ದೇನೆಂದು ಅವರು ತಿಳಿಸಿದ್ದಾರೆ.

ಪರಿಷ್ಕೃತ ಮಾರ್ಗಸೂಚಿಯಲ್ಲಿ 7 ಷರತ್ತುಗಳ ವಿಧಿಸಿ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅನುವು ಮಾಡಿಕೊಡಲಾಗಿದೆ. 
1. ಗಣೇಶ ಚತುರ್ಥಿಯನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ತಮ್ಮ ಮನೆಗಳಲ್ಲಿ/ಸರ್ಕಾರಿ/ಖಾಸಗಿ /ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯಲ್ಲಿ ಆಚರಿಸಬಹುದು.
2. ಸಾರ್ವಜನಿಕ ಸ್ಥಳದಲ್ಲಿ ಕನಿಷ್ಟ 4 ಅಡಿಗೆ ಮೀರದಂತೆ ಹಾಗೂ ಮನೆಗಳಲ್ಲಿ 2 ಅಡಿಗೆ ಮೀರದಂತೆ ಮೂರ್ತಿಯನ್ನು ಪ್ರತಿಷ್ಠಾಪಿಸುವುದು.
3. ಪಾರಂಪರಿಕ ಗಣೇಶೋತ್ಸವ,ಸಮಿತಿಗಳು,ಮಂಡಳಿಗಳು ಮೂರ್ತಿ ಪ್ರತಿಷ್ಠಾಪನೆಗೆ ಸ್ಥಳೀಯ ಆಡಳಿತ/ಕಾರ್ಪುರೇ ಷನ್/ಮುನಿಸಿಪಲ್ ಗಳಿಂದ ಪೂರ್ವಾನುಮತಿ ಪಡೆದು ಉತ್ಸವ ಆಚರಣೆಗೆ ಅವಕಾಶ ನೀಡಲಾಗಿದೆ.ಪ್ರತಿ ವಾರ್ಡ್ ಗೆ 4. ಒಂದರಂತೆ,ಗ್ರಾಮಕ್ಕೆ ಒಂದರಂತೆ ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಉತ್ಸವ ಆಚರಿಸಬಹುದು.
5. ಗಣೇಶೋತ್ಸವ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಮನೋರಂಜನೆ, ಸಾಂಸ್ಕೃತಿಕ ಕಾರ್ಯಕ್ರಮ, ಸಂಗೀತ,ನೃತ್ಯ ಕಾರ್ಯಕ್ರಮ ಆಯೋಜನೆಗೆ ನಿಷೇಧವಿದೆ.
6. ಸಾರ್ವಜನಿಕ ಸ್ಥಳದಲ್ಲಿ ಗಣೇಶ್ ಪ್ರತಿಷ್ಠಾಪನೆ ಮಾಡುವ ಸ್ಥಳದಲ್ಲಿ 20 ಜನಕ್ಕೆ ಸೀಮಿತವಾಗಿ ಆವರಣ ನಿರ್ಮಿಸುವುದು.20ಕ್ಕಿಂತ ಹೆಚ್ಚಿನ ಭಕ್ತರು,ಜನರು ಸೇರುವುದಕ್ಕೆ ಅವಕಾಶವಿಲ್ಲ.
7. ಗಣೇಶ್ ಮೂರ್ತಿ ತರುವಾಗ ಹಾಗೂ ವಿಸರ್ಜನೆ ವೇಳೆ ಮೆರವಣಿಗೆ,ಡಿಜೆ ಸೇರಿದಂತೆ ಯಾವುದೇ ರೀತಿಯ ಆಡಂಬರ,ಗದ್ದಲಕ್ಕೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ.

ಮನೆಯಲ್ಲಿ ಗಣೇಶ ಪ್ರತಿಷ್ಠ ಪೂಜಿಸಿದವರು ಮನೆಯಲ್ಲಿ ಮೂರ್ತಿಯನ್ನು ವಿಸರ್ಜಿಸಿ.ಸಾರ್ವಜನಿಕವಾಗಿ ಪ್ರತಿಷ್ಠಾಪಿಸಿದವರು ಸಮೀಪದ ಮೊಬೈಲ್ ಟ್ಯಾಂಕರ್ ಗಳು,ಕೃತಕ ವಿಸರ್ಜನಾ ಟ್ಯಾಂಕರ್ ಗಳಲ್ಲಿ ಸ್ಥಳೀಯ ಸಂಸ್ಥೆಗಳು ನಿರ್ಮಿಸಿರುವ ಹೊಂಡಗಳಲ್ಲಿ ಮೂರ್ತಿ ವಿಸರ್ಜನೆ ಮಾಡಬಹುದು ಎಂದು ಮುಖ್ಯಮಂತ್ರಿ ಅವರು ಮಾರ್ಗಸೂಚಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *