

ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು-ಕಾಶ್ಮೀರದ ಆರು ಪಕ್ಷಗಳು ಮೈತ್ರಿಗೆ ಮುಂದಾಗಿವೆ.

ಶ್ರೀನಗರ: ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು-ಕಾಶ್ಮೀರದ ಆರು ಪಕ್ಷಗಳು ಮೈತ್ರಿಗೆ ಮುಂದಾಗಿವೆ.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರಳಿ ಸಿಗುವಂತೆ ಮಾಡುವುದು ಹಾಗೂ ರಾಜ್ಯ ಸ್ಥಾನಮಾನವನ್ನು ಮರಳಿ ನೀಡುವಂತೆ ಆಗ್ರಹಿಸುವುದು ಈ ಮೈತ್ರಿಯ ಹಿಂದಿನ ಉದ್ದೇಶವಾಗಿದೆ.
ನ್ಯಾಷನಲ್ ಕಾನ್ಫರೆನ್ಸ್, ಕಾಂಗ್ರೆಸ್, ಪಿಡಿಪಿ, ಪೀಪಲ್ಸ್ ಕಾನ್ಫರೆನ್ಸ್, ಸಿಪಿಎಂ, ಅವಾಮಿ ನ್ಯಾಷನಲ್ ಕಾನ್ಫರೆನ್ಸ್ (ಎಎನ್ ಸಿ) ಮೈತ್ರಿ ಮಾಡಿಕೊಂಡಿದ್ದು, 2019, ಆ.04 ರ ಗುಪ್ಕರ್ ಡಿಕ್ಲೆರೇಷನ್ ಗೆ ಬದ್ಧವಾಗಿ, ಆರ್ಟಿಕಲ್ 370 ಮರು ಸ್ಥಾಪನೆ, ಹಾಗೂ ರಾಜ್ಯಸ್ಥಾನಮಾನ ಮರಳಿ ತರುವುದಕ್ಕೆ ಹೋರಾಡುವುದಾಗಿ ಜಂಟಿ ಪತ್ರಿಕಾ ಹೇಳಿಕೆಯ ಮೂಲಕ 6 ಪಕ್ಷಗಳು ತಿಳಿಸಿವೆ.
ಜಂಟಿ ಹೇಳಿಕೆಯಲ್ಲಿ ಆ.05 ರ ಆರ್ಟಿಕಲ್ 370 ರದ್ಧ ತಿ ಹಾಗೂ ಕೇಂದ್ರಾಡಳಿತ ಪ್ರದೇಶವನ್ನಾಗಿಸುವ ಕ್ರಮ ದುರದೃಷ್ಟಕರ ಎಂದು ಹೇಳಿವೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
