

ರೈತರಿಗೆ ಮಾರಕವಾಗುವಂತೆ ಭೂ ಸುಧಾರಣಾ ಕಾಯಿದೆ ತಿದ್ದುಪಡಿ ತಂದಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು: ರೈತರಿಗೆ ಮಾರಕವಾಗುವಂತೆ ಭೂ ಸುಧಾರಣಾ ಕಾಯಿದೆ ತಿದ್ದುಪಡಿ ತಂದಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಕಾಯ್ದೆಗೆ ಮಾಡಿರುವ ತಿದ್ದುಪಡಿಯನ್ನು ಹಿಂದಕ್ಕೆ ಪಡೆಯುವಂತೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆಯುವ ಮೂಲಕ ಆಗ್ರಹಿಸಿದ್ದಾರೆ.
1961 ಭೂಸುಧಾರಣಾ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ. ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರೈತರ ಕೃಷಿಭೂಮಿಯನ್ನು ಕೃಷಿಯೇತರ ಚಟುವಟಿಕೆಗಳಿಗೆ ಮಾರಾಟ ಮಾಡಲು ಅವಕಾಶ ಕಲ್ಪಿಸಿದೆ. ಕಾಯ್ದೆ ತಿದ್ದುಪಡಿಗೆ ರಾಜ್ಯಾಧ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
ಕೃಷಿ ಭಾರತದ ಪ್ರಧಾನ ಅಂಗವಾಗಿದ್ದು ಈ ನಿಟ್ಟಿನಲ್ಲಿ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವುದು ಅಗತ್ಯವಾಗಿದೆ. ಗ್ರಾಮೀಣ ಭಾರತದಲ್ಲಿ ಕೃಷಿ ಭೂಮಿ ರೈತರ ಪಾಲಿಗೆ ಭಾವನಾತ್ಮಕ ವಿಚಾರವಾಗಿದೆ. ಆದರೆ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರಾಜ್ಯ ಸರ್ಕಾರ ರೈತ ವಿರೋಧಿ ನಡೆಯನ್ನು ಅನುಸರಿಸಿದೆ ಎಂದಿದ್ದಾರೆ.
ಭೂಸುಧಾರಣಾ ಕಾಯ್ದೆ ತಳಸಮುದಾಯಕ್ಕೆ ಭೂಮಿ ಹೊಂದುವ ಹಕ್ಕನ್ನು ನೀಡಿತ್ತು. ಭೂಮಾಲಿಕ ಅಡಿಯಾಳಾಗಿ ಜೀವನ ಸಾಗಿಸಬೇಕಾಗದ ಪದ್ದತಿಯನ್ನು ಕೊನೆಗಾಣಿಸಿತ್ತು. ಸಾಮಾಜಿಕ ಆರ್ಥಿಕ ರಾಜಕೀಯ ಅನ್ಯಾಯದ ವಿರುದ್ಧ ಹೋರಾಟ ನಡೆಸಲು ತಳಸಮುದಾಯಕ್ಕೆ ಅವಕಾಶ ನೀಡಿತ್ತು.
ಕೆಐಎಡಿಬಿ ಈಗಾಗಲೇ 36,000 ಎಕರೆ ಅಭಿವೃದ್ಧಿಯಾಗದ ಭೂಮಿಯನ್ನು ಹೊಂದಿದ್ದು, ರೈತರ ಉತ್ಪಾದಕ ಜಮೀನುಗಳ ಬದಲು ಕೈಗಾರಿಕಾ ಅಭಿವೃದ್ಧಿಗೆ ಆ ಭೂಮಿಯನ್ನು ಬಳಸಿಕೊಳ್ಳಬಹುದು. ಈ ತಿದ್ದುಪಡಿ ಕೃಷಿಕರನ್ನು ಕೈಗಾರಿಕೋದ್ಯಮಿಗಳು ಅಥವಾ ದೊಡ್ಡ ರೈತರ ಭೂಮಿಯಲ್ಲಿ ಆರ್ಥಿಕ ಅಥವಾ ಸಾಮಾಜಿಕ ದುರ್ಬಲತೆಯಿಂದಾಗಿ ಕಾರ್ಮಿಕರಾಗಿರಲು ಒತ್ತಾಯಿಸಲ್ಪಡುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಹಿಂದುಳಿದಿರುವಿಕೆಗೆ ಮುಖ್ಯ ಕಾರಣವಾದ ಜಮೀನ್ದಾರಿ ಪದ್ಧತಿಯ ಅಭಿವ್ಯಕ್ತಿಗೆ ಹೆಚ್ಚಿನ ಸಾಧ್ಯತೆಗಳಿವೆ. ಭೂ ಸುಧಾರಣೆಯ ಪ್ರಯತ್ನವು ಬೆಂಗಳೂರು ಲ್ಯಾಂಡ್ ಮಾಫಿಯಾ ಹಿತಾಸಕ್ತಿಗಳಿಗೆ ಅನುಗುಣವಾಗಿದೆ, ಇದು ರಿಯಲ್ ಎಸ್ಟೇಟ್ ಮೂಲಕ ಅಪಾರ ಲಾಭ ಗಳಿಸಲು ಹೆಚ್ಚಿನ ಭೂಮಿಯನ್ನು ಲಭ್ಯವಾಗುವಂತೆ ಕಾಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೃಷಿ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕರ್ನಾಟಕ ಸರ್ಕಾರ ತೆಗೆದುಕೊಂಡ ನಿರ್ಧಾರ ಏಕಪಕ್ಷೀಯವಾಗಿದೆ. ಅತಿ ಹೆಚ್ಚು ಪರಿಣಾಮ ಬೀರುವ ಈ ತಿದ್ದುಪಡಿಯನ್ನು ಜಾರಿಗೆ ತರುವ ಮೊದಲು ವಿಧಾನಸಭೆಯಲ್ಲಿ ಚರ್ಚಿಸಬೇಕಾಗಿದೆ. ಲಕ್ಷಾಂತರ ರೈತರ ಹಿತದೃಷ್ಟಿಯಿಂದ ಸುಗ್ರೀವಾಜ್ಞೆಯನ್ನು ತಡೆಹಿಡಿಯುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಿರ್ದೇಶಿಸುವಂತೆ ನಾನು ನಿಮ್ಮನ್ನು ಬಲವಾಗಿ ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
