goa problem_ ಗೋವಾ ನೀತಿ ವಿರುದ್ಧ ರಕ್ಷಣಾ ವೇದಿಕೆಯ ಪ್ರತಿಭಟನೆ

ಸುಂದರ ಗೋವಾದ ಕರಾಳ ಮನಸ್ಥಿತಿಯ ವಿರುದ್ಧ ಕನ್ನಡ ಮನಸ್ಸುಗಳ ವಿರೋಧ ವ್ಯಕ್ತವಾಗಿದೆ.

ಕರ್ನಾಟಕದ ಒಂದು ಜಿಲ್ಲೆಯಂತಿರುವ ಗೋವಾದಲ್ಲಿ ಕನ್ನಡಿಗರ ಬಗ್ಗೆ ಬೆಳೆಯುತ್ತಿರುವ ಻ಅಸಹನೆ ಮತ್ತು ಕನ್ನಡಿಗರ ವಿರುದ್ಧದ ಕೆಟ್ಟ ಮನಸ್ಥಿತಿಯ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಧ್ವನಿ ಎತ್ತಿದೆ.

ಇಂದು ಕಾರವಾರ ಗೋವಾ ಗಡಿ ಪೋಲಂ ನಲ್ಲಿ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಉತ್ತರ ಕನ್ನಡ ಜಿಲ್ಲಾ ಘಟಕ ಗೋವಾದಲ್ಲಿ ಕೋವಿಡ್ ಸೇರಿದಂತೆ ಅನೇಕ ವಿಚಾರಗಳಲ್ಲಿ ಕನ್ನಡಿಗರು, ಕರ್ನಾಟಕದವರನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ.

ಈ ಮನೋಭಾವ ಬದಲಾಗದಿದ್ದರೆ ನಾವು ಉಗ್ರ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಕರವೇ ನಾರಾಯಣ ಗೌಡ ಬಣ ಎಚ್ಚರಿಸಿದೆ. ಪೊಲೆಂ ನಲ್ಲಿ ನಡೆದ ಕರವೇ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಭಾಸ್ಕರ್ ಪಟಗಾರ ಮಾತನಾಡಿ ಗೋವಾದ ಬೈನಾ ಬೀಚ್ ವಿಷಯ, ಕರೋನಾ ವಿಚಾರ ಎಲ್ಲದರಲ್ಲೂ ಗೋವಾ ಕನ್ನಡಿಗರು, ಕರ್ನಾಟಕದವರನ್ನು ಹೀನಾಯವಾಗಿ ಕಾಣುತ್ತಿದೆ. ನೆರೆಯ ನಮಗೆ ಕಿರುಕುಳ, ತೊಂದರೆ ಕೊಡುವಷ್ಟು ದೇಶದ ಯಾವ ರಾಜ್ಯಗಳಿಗೂ ತೊಂದರೆ, ರಗಳೆ ಆಗುತ್ತಿಲ್ಲ. ಕನ್ನಡಿಗರು, ಕರ್ನಾಟಕದವರ ಮೇಲೆ ಇದೇ ತಾರತಮ್ಯ, ಻ಅಸಹನೆ, ಅಮಾನವೀಯತೆ ಮುಂದುವರಿದರೆ ಗೋವಾ ರಾಜ್ಯ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕರವೇ ಕಾರ್ಯಕರ್ತರು ಮುಖಂಡರು ಪೊಲೆಂ ನಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ದಾಖಲಿಸಿದರು. ಕರೋನಾ ಕಾರಣ ಇಟ್ಟುಕೊಂಡು ಕನ್ನಡಿಗರಿಂದ ಹಣ ವಸೂಲಿ ಮಾಡುವುದು, ಅನಾವಶ್ಯಕ ಕಟ್ಟುಪಾಡುಗಳನ್ನು ಮಾಡುವುದನ್ನು ಬಿಟ್ಟು ಕನ್ನಡಿಗರು ಕರ್ನಾಟಕದ ಜನತೆಯನ್ನು ಗೌರವದಿಂದ ನಡೆಸಿಕೊಳ್ಳುವ ಬಗ್ಗೆ ಕಾರವಾರದ ಶಾಸಕಿ ಗೋವಾ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಬಗ್ಗೆ ಕರವೇ ಗಜಸೇನೆಯ ಕೃಷ್ಣಮೂರ್ತಿ ಮತ್ತು ದಿವಾಕರ ನಾಯ್ಕ ಸಹ ಻಻ಅಸಮಾಧಾನ ವ್ಯಕ್ತಪಡಿಸಿದ್ದರು. ಇಂದಿನ ಪ್ರತಿಭಟನೆ ನೇತೃ ತ್ವವನ್ನು ಕರವೇ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಭಾಸ್ಕರ್ ಪಟಗಾರ್, ಕನ್ನಡ ಸಂಘಟನೆಗಳ ಒಕ್ಕೂಟದ ರಾಘು ನಾಯ್ಕ ವಹಿಸಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *