ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಇನ್ನಿಲ್ಲ

ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.

Pranab Mukherjee

ನವದೆಹಲಿ: ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.

ಕಳೆದ 20 ದಿನಗಳಿಂದ ದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 84 ವರ್ಷದ ಪ್ರಣಬ್ ಮುಖರ್ಜಿ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಅವರ ಪುತ್ರ ಅಭಿಜಿತ್ ಅವರ ಟ್ವೀಟ್ ಮೂಲಕ ತಿಳಿಸಿದ್ದಾರೆ.

“ಅತ್ಯಂತ ಭಾರವಾದ ಮನಸಿನಿಂದ ಈ ವಿಷಯ ತಿಳಿಸುತ್ತಿದ್ದೇನೆ, ನನ್ನ ತಂದೆ ಶ್ರೀ ಪ್ರಣಬ್ ಮುಖರ್ಜಿ ಅವರು ಆರ್ ಆರ್ ಆಸ್ಪತ್ರೆಯ ವೈದ್ಯರ ಉತ್ತಮ ಪ್ರಯತ್ನಗಳು ಮತ್ತು ದೇಶಾದ್ಯಂತ ಜನರ ಪ್ರಾರ್ಥನೆಗಳ ಹೊರತಾಗಿಯೂ ಬದುಕುಳಿಯಲಿಲ್ಲ ಎಂದು ಅಭಿಜಿತ್ ಅವರು ಟ್ವೀಟ್ ಮಾಡಿದ್ದಾರೆ.

ಶ್ವಾಸಕೋಶದ ಸೋಂಕಿನಿಂದ ಪ್ರಣಬ್ ಮುಖರ್ಜಿ ಆಗಸ್ಟ್ 10ರಂದು ದೆಹಲಿಯ ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಮೂತ್ರಪಿಂಡದಲ್ಲೂ ಸಮಸ್ಯೆಯಾಗಿದೆ. ದಿನಕಳೆದಂತೆ ಪ್ರಣಬ್  ಮುಖರ್ಜಿ ಅವರ ಆರೋಗ್ಯ ಕ್ಷೀಣಿಸುತ್ತಾ ಹೋಗಿತ್ತು.

ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಆಪರೇಷನ್ ಮಾಡಲಾಗಿತ್ತು. ಬಳಿಕ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *