

ಸ್ಯಾಂಡಲ್ವುಡ್ ಡ್ರಗ್ ಪ್ರಕರಣ ಸಂಬಂಧ ನ್ಯಾಯಾಲಯ ನಟಿ ರಾಗಿಣಿಯನ್ನು ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ.

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ ಪ್ರಕರಣ ಸಂಬಂಧ ನ್ಯಾಯಾಲಯ ನಟಿ ರಾಗಿಣಿಯನ್ನು ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ರಾತ್ರಿ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿದ್ದರು. ಈ ವೇಳೆ ನ್ಯಾಯಾಧೀಶರು ರಾಗಿಣಿಗೆ 3 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಆದೇಶಿಸಿದ್ದಾರೆ.
ಸದ್ಯ ರಾಗಿಣಿ ಅವರನ್ನು ಸಿಸಿಬಿ ಅಧಿಕಾರಿಗಳು ಹೆಚ್ಚಿನ ಪರೀಕ್ಷೆಗಾಗಿ ಬೋರಿಂಗ್ ಆಸ್ಪತ್ರೆಗೆ ಕರೆದೊಯ್ದಿದೆ.


ಡ್ರಗ್ಸ್ ಸೇವನೆ ಮತ್ತು ಪೆಡ್ಲರ್ ಗಳೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ ರಾಗಿಣಿಯನ್ನು ಸಿಸಿಬಿ ವಶಕ್ಕೆ ಪಡೆದಿತ್ತು.
ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ರಾಗಿಣಿ ಅವರು ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ನಟಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 7ಕ್ಕೆ ಮುಂದೂಡಿದೆ. ಇದರ ಬೆನ್ನಲ್ಲೇ ಸಿಸಿಬಿ ಪೊಲೀಸರು ರಾಗಿಣಿಯನ್ನು ಬಂಧಿಸಿದ್ದರು.
ನಟಿ ರಾಗಿಣಿ ಆಪ್ತ ರವಿಶಂಕರ್ ವಶಕ್ಕೆ ಪಡೆದ ಬಳಿಕ ನಟಿ ರಾಗಿಣಿ ವಾಟ್ಸಪ್ ಚಾಟ್ ಡಿಲೀಟ್ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ವಾಟ್ಸಪ್ ಅಪ್ ಡಿಲೀಟ್ ಮಾಡಿ ಹೊಸ ಮೊಬೈಲ್ ಖರೀದಿಸಿ ವಾಟ್ಸಾಪ್ ಇನ್ ಸ್ಟಾಲ್ ಮಾಡಿಕೊಂಡಿದ್ದಾರೆ. ವಾಟ್ಸಪ್ ಚಾಟ್ ಸಿಗದಂ ತೆ ಮಾಡಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






