
ತತ್ವಜ್ಞಾನಿ, ವಿದ್ವಾಂಸ, ಭಾರತದ 2ನೇ ರಾಷ್ಟ್ರಪತಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಹಾಗೂ ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುಸಮಸ್ತರಿಗೆ ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ.

ನವದೆಹಲಿ: ತತ್ವಜ್ಞಾನಿ, ವಿದ್ವಾಂಸ, ಭಾರತದ 2ನೇ ರಾಷ್ಟ್ರಪತಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಹಾಗೂ ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುಸಮಸ್ತರಿಗೆ ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ.

ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ಡಾ.ಎಸ್.ರಾಧಾಕೃಷ್ನ್ ಅವರಿಗೆ ಗೌರವ ಸಲ್ಲಿಸುತ್ತಿದ್ದೇನೆ ಹಾಗೂ ದೇಶದ ಸರ್ವ ಶಿಕ್ಷಕರಿಗೂ ಹೃದಯಪೂರ್ವಕ ಶುಭಾಶಯಗಳನ್ನು ಹೇಳುತ್ತೇನೆಂದು ಹೇಳಿದ್ದಾರೆ.
ಮನಸ್ಸು ಮಾರ್ಪಡಿಸುವಲ್ಲಿ ಹಾಗೂ ದೇಶವನ್ನು ಕಟ್ಟುವಲ್ಲಿ ಶಿಕ್ಷಕರ ಪರಿಶ್ರಮಕ್ಕೆ ನಾವು ಅತ್ಯಂತ ಕೃತಜ್ಞರಾಗಿರುತ್ತೇವೆ. ಶಿಕ್ಷಕರ ದಿನದಂದು, ಶಿಕ್ಷಕರ ಪರಿಶ್ರಮಕ್ಕೆ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ಡಾ.ಎಸ್.ರಾಧಾಕೃಷ್ಣನ್ ಅವರ ಜನ್ಮನದಿಂದು ಅವರಿಗೆ ನಾವು ಗೌರವ ಸಲ್ಲಿಸುತ್ತೇನೆ. #ನಮ್ಮಶಿಕ್ಷಕರುನಮ್ಮಹೀರೋಗಳು ಎಂದು ತಿಳಿಸಿದ್ದಾರೆ.
ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಭಾರತದ 2ನೇ ರಾಷ್ಟ್ರಪತಿಯಾಗಿದ್ದರು. 1962ರಲ್ಲಿ ಭಾರತದ ಶಿಕ್ಷಕನೊಬ್ಬ ಮೊಟ್ಟಮೊದಲ ಉಪರಾಷ್ಟ್ರಪತಿಯಾಗಿ ನೇಮಕಕೊಂಡ ರಾಧಾಕೃಷ್ಣನ್ ಅವರು, ರಾಜ್ಯಸಭೆಯಲ್ಲಿ ಸಂಸ್ಕೃತ ಶ್ಲೋಕಗಳ ಮೂಲಕ ಎಲ್ಲಾ ಸಂಸತ್ ಸದಸ್ಯರ ಗಮನ ಸೆಳೆಯುತ್ತಿದ್ದರು. ರಾಧಾಕೃಷ್ಣನ್ ಅವರ ಅಪಾರ ಸೇವೆಯನ್ನು ಗುರ್ತಿಸಿ ಗೌರವಿಸಿದ್ದ ಭಾರತ ಸರ್ಕಾರ ಉಪರಾಷ್ಟ್ರಪತಿ ಹುದ್ದೆಯಲ್ಲಿದ್ದಾಗಲೇ ಅವರಿಗೆ 1954ರಲ್ಲಿ ಪ್ರತಿಷ್ಠಿತ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿತ್ತು. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
