
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ಇದೀಗ ಗಂಡ ಹೆಂಡತಿ ನಟಿ ಸಂಜನಾ ಗಲ್ರಾನಿ ಅವರನ್ನು ಬಂಧಿಸಿದ್ದಾರೆ. ಈ ಬಂಧನದ ಬೆನ್ನಲ್ಲೇ ಸಂಜನಾರ ವಿಡಿಯೋವೊಂದು ವೈರಲ್ ಆಗಿದೆ.
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ಇದೀಗ ಗಂಡ ಹೆಂಡತಿ ನಟಿ ಸಂಜನಾ ಗಲ್ರಾನಿ ಅವರನ್ನು ಬಂಧಿಸಿದ್ದಾರೆ. ಈ ಬಂಧನದ ಬೆನ್ನಲ್ಲೇ ಸಂಜನಾರ ವಿಡಿಯೋವೊಂದು ವೈರಲ್ ಆಗಿದೆ.
ಡ್ರಗ್ಸ್ ದಂಧೆ ಸಂಬಂಧ ರಾಹುಲ್ ಶೆಟ್ಟಿಯನ್ನು ಸಿಸಿಬಿ ಬಂಧಿಸಿದ್ದರು. ಈ ವೇಳೆ ಸಂಜನಾ ರಾಹುಲ್ ಶೆಟ್ಟಿ ತನ್ನ ರಾಖಿ ಬ್ರದರ್ ಅಂತ ಹೇಳಿದ್ದರು. ರಾಹುಲ್ ಜೊತೆ ಹಲವು ಪಾರ್ಟಿಗಳಲ್ಲಿ ಸಹ ಸಂಜನಾ ಕಾಣಿಸಿಕೊಳ್ಳುತ್ತಿದ್ದರು. ಇದೀಗ ರಾಹುಲ್ ಸಂಜನಾ ಒಟ್ಟಾಗಿ ಕಾಣಿಸಿಕೊಂಡಿರುವ ವಿಡಿಯೋವೊಂದು ವೈರಲ್ ಆಗಿದೆ. https://platform.twitter.com/embed/index.html?creatorScreenName=Kannadaprabha&dnt=false&embedId=twitter-widget-0&frame=false&hideCard=false&hideThread=false&id=1303220264751169536&lang=en&origin
ಸಂಜನಾರನ್ನು ವಶಕ್ಕೆ ಪಡೆದಿದ್ದ ಸಿಸಿಬಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದರು. ಸತತ ವಿಚಾರಣೆ ಬಳಿಕ ಇದೀಗ ಸಿಸಿಬಿ ಅಧಿಕಾರಿಗಳು ಸಂಜನಾರನ್ನು ಬಂಧಿಸಿದ್ದರು. ಸಂಜನಾಗೆ ಕೆಸಿ ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ.
ಬೆಂಗಳೂರಿನಲ್ಲಿ ಇವೆಂಟ್ ಮ್ಯಾನೇಜ್ಮೆಂಟ್ ನಡೆಸುತ್ತಿದ್ದ ಪೃಥ್ವಿ ಶೆಟ್ಟಿ ಕಂಪನಿಯಲ್ಲಿ ಸಂಜನಾ ಸಹ ಪಾಲುದಾರೆ ಎಂಬ ಮಾಹಿತಿ ಸಿಕ್ಕಿದೆ. ಈಕೆ ಹಾಗೂ ಸಂಜನಾ ನಡುವೆ ಲಕ್ಷಾಂತರ ರೂಪಾಯಿ ವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ದಾಖಲೆಗಳನ್ನು ಕೆದಕಿದಾಗ ದೊಡ್ಡ ದೊಡ್ಡ ಹೋಟೆಲ್‌ಗಳಲ್ಲಿ ಪಾರ್ಟಿಗಳನ್ನು ಆಯೋಜನೆ ಮಾಡಿದ ಬಗ್ಗೆ ಪುರಾವೆಗಳು ದೊರೆತಿವೆ.
ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಮೂಲದ ಡ್ರಗ್ ಪೆಡ್ಲರ್ ಪೃಥ್ವಿ ಶೆಟ್ಟಿ ಹಾಗೂ ರಾಹುಲ್ ನೀಡಿದ್ದ ಹೇಳಿಕೆಯ ಆಧಾರದಲ್ಲಿ ನಟಿ ಸಂಜನಾ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. https://platform.twitter.com/embed/index.html?c (kpc)
