ಜೆಡಿಎಸ್ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ವಕ್ತಾರ ರಮೇಶ್ ಬಾಬು ಅವರು ಶನಿವಾರ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ.
ಬೆಂಗಳೂರು: ಜೆಡಿಎಸ್ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ವಕ್ತಾರ ರಮೇಶ್ ಬಾಬು ಅವರು ಶನಿವಾರ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ.
ಇಂದು ಮಧ್ಯಾಹ್ನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಮೇಶ್ ಬಾಬು ಅವರ ಕಾಂಗ್ರೆಸ್ ಸೇರ್ಪಡೆಯಾದರು.
ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ವಕ್ತಾರರು ಆಗಿದ್ದ ರಮೇಶ್ ಬಾಬು ಅವರು ವಿಧಾನ ಪರಿಷತ್ ಚುನಾವಣೆಯಲ್ಲಿ ಟಿಕೆಟ್ ನೀಡಲಿಲ್ಲ ಎಂಬ ಕಾರಣಕ್ಕೆ ಮುನಿಸಿಕೊಂಡು ಇತ್ತೀಚೆಗಷ್ಟೆ ಜೆಡಿಎಸ್ ಗೆ ರಾಜೀನಾಮೆ ನೀಡಿದ್ದರು.
ನಿನ್ನೆಯಷ್ಟೇ ಕಾಂಗ್ರೆಸ್ ಸೇರುತ್ತಿರುವುದಾಗಿ ರಮೇಶ್ ಬಾಬು ಅವರು ಘೋಷಿಸಿದ್ದರು. ಅದರಂತೆ ಈಗ ಕಾಂಗ್ರೆಸ್ ಸೇರಿದ್ದಾರೆ. (kpc)