ರೈತ ಸಂಘಟನೆಗಳಿಂದ ಸೋಮವಾರ ಕರ್ನಾಟಕ ಬಂದ್

ರೈತ ವಿರೋಧಿ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ರೈತಪರ ಸಂಘಟನೆಗಳು ಸೋಮವಾರ ಕರ್ನಾಟಕ ಬಂದ್ ಗೆ ಕರೆ ನೀಡಿವೆ.

band-1

ಬೆಂಗಳೂರು: ರೈತ ವಿರೋಧಿ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ರೈತಪರ ಸಂಘಟನೆಗಳು ಸೋಮವಾರ ಕರ್ನಾಟಕ ಬಂದ್ ಗೆ ಕರೆ ನೀಡಿವೆ.

ಕೇಂದ್ರ ಸರ್ಕಾರದ ರೈತ, ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸೆಪ್ಟೆಂಬರ್ 28ರಂದು ಕರ್ನಾಟಕ ಬಂದ್ ಕರೆ ನೀಡಲಾಗಿದೆ. ಅಗತ್ಯ ಸೇವೆ ಹೊರತುಪಡಿಸಿ ಸಂಪೂರ್ಣ ಬಂದ್ ಆಚರಿಸಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ಹೇಳಿದ್ದಾರೆ.

ಸೋಮವಾರ ಬಂದ್ ಗೆ ಕರೆ ನೀಡುವ ಬಗ್ಗೆ ಚರ್ಚೆ ನಡೆಯುತ್ತಿತ್ತು. ನಮ್ಮ ಒತ್ತಾಯಕ್ಕೆ ಮಣಿದು ಮಸೂದೆಯನ್ನ ತಡೆ ಹಿಡಿಯಬಹುದು ಎಂಬ ವಿಶ್ವಾಸವಿತ್ತು. ಆದರೆ ಸರ್ಕಾರದ್ದು ಮೊಸಳೆ ಕಣ್ಣೀರು ಎಂಬುವುದು ಖಚಿತವಾಗಿದೆ. ಬೀದಿಯಲ್ಲಿ ನಾವು ಪ್ರತಿಭಟನೆ ಮಾಡುತ್ತಿದ್ದರೂ ನಮ್ಮನ್ನು ಮಾತನಾಡಿಸಲು ಸರ್ಕಾರ ಮುಂದಾಗಿಲ್ಲ. ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದೊಂದು ಕಾಪೋರೇಟ್ ಸರ್ಕಾರವಾಗಿದ್ದು, ಮಸೂದೆ ಬಗ್ಗೆ ರೈತರ ಸಲಹೆ ಸಹ ಪಡೆದುಕೊಂಡಿಲ್ಲ. ಎಪಿಎಂಸಿ ಮಸೂದೆ ರೈತರ ಮರಣ ಶಾಸನವಾಗಿದೆ. ಬಂಡವಾಳ ಶಾಹಿ ಸರ್ಕಾರ ಇದಾಗಿದೆ. ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದಷ ಸಿಎಂ ಯಡಿಯೂರಪ್ಪನವರ ಮುಖವಾಡ ಬಯಲಾಗಿದೆ ಎಂದು ಕಿಡಿಕಾರಿದರು.

ಸೆಪ್ಟೆಂಬರ್ 25ರಂದು ಕರೆ ನೀಡಲಾಗಿರುವ ಭಾರತ್ ಬಂದ್ ಜೊತೆಗೆ ಕರ್ನಾಟಕಲ್ಲೂ ಬಂದ್ ಆಚರಿಸಲು ಈ ಮೊದಲು ರೈತ ಸಂಘಟನೆಗಳು ಯೋಜಿಸಿದ್ದವು. ಆದರೆ, 25ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಮಾಡಬೇಕೆಂದು ತೀರ್ಮಾನಿಸಲಾಗಿದ್ದು, ಸೆಪ್ಟೆಂಬರ್ 28ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *