
ತೈಲ ತುಂಬಿದ ಟ್ಯಾಂಕರ್ ವಾಹನ ಪಲ್ಟಿಯಾಗಿ ಜನರನ್ನು ಭಯಭೀತರನ್ನಾಗಿಸಿದ ಘಟನೆ ಉತ್ತರ ಕನ್ನಡದ ಕುಮಟಾ ಬಗ್ಗೋಣ ಬಳಿ ನಡೆದಿದೆ. ಜಿಲ್ಲಾಡಳಿತದ ಶೀಘ್ರ ಕ್ರಮದಿಂದಾಗಿ ಯಾವುದೇ ಅನಾಹುತ ಸಂಭವಿಸಿಲ್ಲ.
ಮಹಿಳೆಯೊಬ್ಬರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವಬೆದರಿಕೆ ಒಡ್ಡಿದ ಆರೋಪದ ಮೇಲೆ ಸಿದ್ಧಾಪುರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಈ ಘಟನೆ ತಂಡಾಗುಂಡಿ ಪಂಚಾಯತ್ ನ ಕುಗ್ರಾಮ ತೆಂಗಿನಸರದಲ್ಲಿ ನಡೆದಿದೆ. ಬಂಧಿತ ಆರೋಪಿ ನಿಲ್ಕುಂದದ ಅಭುಸುಫಿ ಯಾನ್ ಖಾನ್ ಎಂದು ಗುರುತಿಸಲಾಗಿದೆ. ಈತ ಸ್ಕೂಟರ್ ನಲ್ಲಿ ತೆರಳುತಿದ್ದ ಮಹಿಳೆಗೆ ಅವಾಚ್ಯವಾಗಿ ನಿಂದಿಸಿದ್ದಲ್ಲದೆ ಈ ಬಗ್ಗೆ ಬಾಯಿ ಬಿಟ್ಟರೆ ಮುಂದೆ ಇಲ್ಲಿ ಓಡಾಡಲು ಸಾಧ್ಯವಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾಗಿ ದೂರಿನಲ್ಲಿ ಆರೋಪಿಸಲಾಗಿದೆ.
