ರಾಜ್ಯದಲ್ಲಿ ತೀವ್ರಗೊಂಡ ರೈತರ ಕಿಚ್ಚು: ಏರ್’ಪೋರ್ಟ್ ಗೆ ಮುತ್ತಿಗೆ, ಪ್ರತಿಭಟನಾ ನಿರತ ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

ರೈತ, ಕಾರ್ಮಿಕ ವಿರೋಧಿ ವಿಧೇಯಕಗಳನ್ನು ಜಾರಿಗೊಳಿಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ  ಸೋಮವಾರ ಕರ್ನಾಟಕ ಬಂದ್ ಮಾಡಲಾಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗತೊಡಗಿದೆ. 

Karnataka Rakshana Vedike protest

ಬೆಂಗಳೂರು: ರೈತ, ಕಾರ್ಮಿಕ ವಿರೋಧಿ ವಿಧೇಯಕಗಳನ್ನು ಜಾರಿಗೊಳಿಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ  ಸೋಮವಾರ ಕರ್ನಾಟಕ ಬಂದ್ ಮಾಡಲಾಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗತೊಡಗಿದೆ. 

ಮೆಜೆಸ್ಟಿಕ್ ಹಾಗೂ ಬೆಂಗಳೂರು ರೈಲ್ವೇ ನಿಲ್ದಾಣ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕನ್ನಡಪರ, ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರು ಕೆಂಪೇಗೌಡ ರೈಲು ನಿಲ್ದಾಣಕ್ಕೆ ರೈತ ಹಾಗೂ ಕನ್ನಡ ಪರ ಸಂಘಟನೆಗಳು ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. 

ಈ ವೇಳೆ ಇದಕ್ಕೆ ಪೊಲೀಸರು ತಡೆಯೊಡ್ಡಿದ್ದು, ಹಲವು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಈ ನಡುವೆ ವಿವಿಧ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಯುತ್ತಿರುವ ವರದಿಗಳು ಬಂದಿವೆ.

ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ಬೆಂಗಳೂರು ರೈಲ್ವೆ ನಿಲ್ದಾಣದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ರೈತ ವಿರೋಧಿ ಮಸೂದೆಗಳನ್ನು ಸರ್ಕಾರ ಹಿಂಪಡೆಯಬಹುದು ಎಂಬ ನಿರೀಕ್ಷೆಯನ್ನು ಸರ್ಕಾರ ಹುಸಿಗೊಳಿಸಿದೆ. ಈ ಧೋರಣೆಯನ್ನು ವಿರೋಧಿಸಿ, ಉಗ್ರ ಪ್ರತಿಭಟನೆ ನಡೆಸುತ್ತೇವೆ. ನಮ್ಮ ಬೇಡಿಕೆ ಈಡೇರುವ ತನಕ ಹೋರಾಟ ನಿಲ್ಲುವುದಿಲ್ಲ ತಿಳಿಸಿದ್ದಾರೆ.

ಕರವೇ ಕಾರ್ಯಕರ್ತರಿಂದ ಏರ್ ಪೋರ್ಟ್ ಗೆ ಮುತ್ತಿಗೆ, ಬಿಗಿಭದ್ರತೆ
ಕೃಷಿ ಮಸೂದೆಗಳನ್ನು ವಿರೋಧಿಸಿ ಇಂದು ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ರೈತ ಮತ್ತು ಹಲವು ಕನ್ನಡಪರ ಸಂಘಟನೆಗಳು ಸಾಥ್ ನೀಡಿವೆ.

ಪ್ರತಿಭಟನೆ ಹಿನ್ನೆಲೆ ಬೆಂಗಳೂರು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ರೈತರಿಗಾಗಿ ಜೈಲಿಗೆ ಹೋಗಲು ಸಿದ್ದ ಎಂದು ರೈತ ಮುಖಂಡರು ಹೇಳಿದ್ದಾರೆ. ಪ್ರತಿಭಟನಾಕಾರನ್ನು ಕರೆದುಕೊಂಡು ಪೊಲೀಸರು 400 ಬಿಎಂಟಿಸಿ ಬಸ್ ಸಿದ್ದ ಮಾಡಿಕೊಂಡಿದ್ದಾರೆ.

ಕರವೇ ಕಾರ್ಯಕರ್ತರು ಇಂದು ಬೆಳ್ಳಂಬೆಳಗ್ಗೆ ಏರ್ಪೋರ್ಟ್ಗೆ ಮುತ್ತಿಗೆ ಹಾಕಲು ಮುಂದಾಗಿದ್ದು ಈ ವೇಳೆ ಅವರನ್ನು ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ.

ಸಿಲಿಕಾನ್ ಸಿಟಿ ರಸ್ತೆಗಿಳಿದ 5,000 ರೈತರು: ಸರ್ಕಾರದ ವಿರುದ್ಧ ಆಕ್ರೋಶ, ಹಲವರನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರಿನಲ್ಲಿ ರೈತ ಸಂಘಟನೆಗಳು ನೀಡಿದ ಕರ್ನಾಟಕ ಬಂದ್‌ ಕರೆಗೆ ಭಾರೀ ಬೆಂಬಲ ವ್ಯಕ್ತವಾಗಿದೆ. ಟೌನ್‌ಹಾಲ್‌ ಬಳಿ ಆಯೋಜಿಸಲಾದ ಪ್ರತಿಭಟನೆಗೆ ಭಾರೀ ಸಂಖ್ಯೆಯಲ್ಲಿ ಪ್ರತಿಭನಕಾರರು ಆಗಮಿಸಿದ್ದಾರೆ. ರೈತ ಸಂಘ, ಹಸಿರು ಸೇನೆ, ಕನ್ನಡ ಪರ ಸಂಘಟನೆಗಳು ಸೇರಿ ಇನ್ನಿತರ ಸಂಘಟನೆಗಳು ಒಟ್ಟಿಗೆ ಸೇರಿಕೊಂಡು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.

ಟೌನ್‌ಹಾಲ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ವಾಹನ ಸಂಚಾರಕ್ಕೆ ಭಾರೀ ಸಮಸ್ಯೆಗಳು ಎದುರಾಗಿದ್ದು, ಹಲವೆಡೆ ಸಂಫುರ್ಣವಾಗಿ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕೆಲ ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

1 Comment

Leave a Reply

Your email address will not be published. Required fields are marked *