ಸೆ.28 ರಿಂದಲೇ ಜಾರಿಯಾದ ಮಾದರಿ ನೀತಿ ಸಂಹಿತೆ- ಕರ್ನಾಟಕ ಪಶ್ಚಿಮ ಪದವಿಧರರ ಚುನಾವಣೆ;

ಅಕ್ಟೋಬರ್ 28ರಂದು ಜಿಲ್ಲೆಯ 26 ಮತಗಟ್ಟೆಗಳಲ್ಲಿ ಮತದಾನ: ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ. ಕಾರವಾರ ಅಕ್ಟೋಬರ್ 1 (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವಿಧರ ಕ್ಷೇತ್ರದ ಚುನಾವಣೆ ವೇಳಾಪಟ್ಟಿ ಪ್ರಕಟಗೊಂಡಿದ್ದು, ಅಕ್ಟೋಬರ್ 28ರಂದು ಜಿಲ್ಲೆಯ 26 ಮತಗಟ್ಟೆಗಳಲ್ಲಿ ಮತದಾನ ನಡೆಸಲಾಗುವುದೆಂದು ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಕೋವಿಡ್-19ರ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರಥಮ ಬಾರಿಗೆ ಚುನಾವಣೆ ನಡೆಯುತ್ತಿರುವುದರಿಂದ 1 ಸಾವಿರ ಮತದಾರರಿಗೆ ಒಂದರಂತೆ ಮತಗಟ್ಟೆಯನ್ನು ಸ್ಥಾಪಿಸಲಾಗುತ್ತಿದ್ದು, ಜಿಲ್ಲೆಯ 23 ಮೂಲ+3 ಹೆಚ್ಚುವರಿ ಮತಗಟ್ಟೆ ಸೇರಿಸಿ ಒಟ್ಟು 26 ಮತಗಟ್ಟೆಗಳಲ್ಲಿ ಭಾರತ ಚುನಾವಣಾ ಆಯೋಗವು ಕೋವಿಡ್-19ರ ಹಿನ್ನೆಲೆಯಲ್ಲಿ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಮತದಾನ ನಡೆಸಲಾಗುವುದೆಂದು ಅವರು ಹೇಳಿದರು. ಕರ್ನಾಟಕ ಪಶ್ಚಿಮ ಪದವಿಧರ ಕ್ಷೇತ್ರದ ಚುನಾವಣೆ ಪ್ರಕ್ರಿಯೆಗೆ ಬೆಳಗಾವಿ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿದ್ದು, ಧಾರವಾಡ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಅವರು ಸಹಾಯಕ ಚುನಾವಣಾಧಿಕಾರಿಯಾಗಿರುತ್ತಾರೆ. ಅಕ್ಟೋಬರ 28ರಂದು ಮತದಾನ ನಡೆಸಿ, ನವೆಂಬರ್ 2ರಂದು ಮತ ಎಣಿಕೆ ನಡೆಸಲಾಗುವುದೆಂದರು. ಸೆಪ್ಟಂಬರ್ 29ರಿಂದಲೇ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಾದರಿ ನೀತಿಸಂಹಿತೆ ಜಾರಿಯಾಗಿದ್ದು, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿರುವಂತಹ ಮಾದರಿ ನೀತಿ ಸಂಹಿತೆ ಈಗಲೂ ಅನ್ವಯಿಸುತ್ತದೆ. ಚುನಾವಣೆಯನ್ನು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ಜರುಗಿಸಲು ಮಾದರಿ ನೀತಿಸಂಹಿತೆ ತಂಡಗಳನ್ನು ರಚಿಸಿ ಆದೇಶ ಹೊರಡಿಸಲಾಗುವುದು. ಈ ಆದೇಶದನ್ವಯ ನಿಯೋಜಿತ ಪ್ರತಿ ತಂಡಕ್ಕೆ ಓರ್ವ ವಿಡಿಯೋಗ್ರಾಪರ್ ನೇಮಿಸಿ, ನೀತಿಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ವಿಡಿಯೋಗ್ರಾಪರ್‍ನ ಸಹಾಯದಿಂದ ಚಿತ್ರೀಕರಿಸಿ, ಆಯೋಗದ ಅಧಿಕಾರಿಗಳಿಗೆ ಕಳುಹಿಸಲಾಗುವುದು ಎಂದರು. ಮಾದರಿ ನೀತಿಸಂಹಿತೆ ಎಲ್ಲ ಜನಪ್ರತಿನಿಧಿಗಳಿಗೂ ಅನ್ವಯಿಸುತ್ತಿದ್ದು, ಸರ್ಕಾರಿ ನೌಕರರು ಯಾವುದೇ ರಾಜಕೀಯ ಪಕ್ಷದೊಂದಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಗುರುತಿಸಿಕೊಂಡಲ್ಲಿ ಅಥವಾ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರದಲ್ಲಿ ತೊಡಗಿದ್ದರೆ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಎಂ.ರೋಷನ್ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *