ಇದೇ ಮೊದಲು, ಛತ್ತೀಸ್ ಗಢದಲ್ಲಿ ತಮ್ಮ ನಾಯಕನನ್ನೇ ಹತ್ಯೆ ಮಾಡಿದ ನಕ್ಸಲರು

ತನ್ನ ಧ್ಯೇಯವನ್ನು ಜನಸಾಮಾನ್ಯರಿಗೆ ತಲುಪಿಸಲು ಹೆಣಗಾಡುತ್ತಿರುವ ಸಿಪಿಐ(ಮಾವೋವಾದಿ) ಕಾನೂನು ಬಾಹೀರ ಸಂಘಟನೆಗೆ ಈಗ ಆಂತರಿಕ ಭಿನ್ನಾಭಿಪ್ರಾಯ ಹತ್ತಿಕ್ಕುವ ಹೊಸ ಸವಾಲು ಎದುರಾಗಿದೆ. 

Two Maoists killed in encounter with CRPF in Andhra Pradesh

ರಾಯಪುರ್: ತನ್ನ ಕಾರ್ಯಕರ್ತರನ್ನು ಜನಸಾಮಾನ್ಯರಿಗೆ ತಲುಪಿಸಲು ಹೆಣಗಾಡುತ್ತಿರುವ ಸಿಪಿಐ(ಮಾವೋವಾದಿ) ಕಾನೂನು ಬಾಹಿರ ಸಂಘಟನೆಗೆ ಈಗ ಆಂತರಿಕ ಭಿನ್ನಾಭಿಪ್ರಾಯ ಹತ್ತಿಕ್ಕುವ ಹೊಸ ಸವಾಲು ಎದುರಿಸುತ್ತಿದೆ. 

ಮಹತ್ವದ ಬೆಳವಣಿಗೆಯೊಂದರಲ್ಲಿ, ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಗಂಗಲೂರು ಪ್ರದೇಶ ಸಮಿತಿಯ(ಬಿಜಾಪುರ) ಉಸ್ತುವಾರಿ, ಹಿರಿಯ ಮಾವೋವಾದಿ ನಾಯಕ ಮತ್ತು ವಿಭಾಗೀಯ ಸಮಿತಿ ಸದಸ್ಯ ಮೋಡಿಯಂ ವಿಜ್ಜಾ(39) ಅವರು ತಮ್ಮ ಕಾರ್ಯಕರ್ತರಿಂದಲೇ ಹತ್ಯೆಯಾಗಿದ್ದಾರೆ.

ದಕ್ಷಿಣ ಛತ್ತೀಸ್‌ಢದ ಕಲಹ ಪೀಡಿತ ಬಿಜಾಪುರ ಜಿಲ್ಲೆಯಲ್ಲಿ ಮಾವೋ ಕಾರ್ಯಕರ್ತರು ತಮ್ಮ ನಾಯಕನನ್ನೇ ಹತ್ಯೆ ಮಾಡಿದ್ದಾರೆ. 

ಸ್ಥಳೀಯ ಗುಪ್ತಚರ ಮಾಹಿತಿಯ ಪ್ರಕಾರ, ಬಂಡುಕೋರರು ಇತ್ತೀಚೆಗೆ ನಡೆಸಿದ ನಾಗರಿಕರ ಹತ್ಯೆಯ ಕಾರಣದಿಂದ ನಾಯಕನನ್ನು ಹತ್ಯೆ ಮಾಡಲಾಗಿದೆ ಎಂದು ಬಜಾರ್ ಪೊಲೀಸರು ಹೇಳಿದ್ದಾರೆ. ಈ ಮಾವೋ ನಾಯಕನ ಹತ್ಯೆಗೆ ಪೊಲೀಸರು 8 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದರು. ಆದರೆ ಈಗ ತನ್ನ ಕಾರ್ಯಕರ್ತರಿಂದಲೇ ಹತ್ಯೆಯಾಗಿದ್ದಾರೆ.

“ನಮ್ಮ ಮಾಹಿತಿಯ ಪ್ರಕಾರ, ನಾಗರಿಕ ಹತ್ಯೆಗಳು ಮತ್ತು ಬಿಜಾಪುರದಲ್ಲಿ ಗ್ರಾಮಸ್ಥರ ರ್ಯಾಲಿಗಳನ್ನು ಆಯೋಜಿಸುವುದರ ಹಿಂದೆ ವಿಜ್ಜಾ ಮಾವೋವಾದಿ ನಾಯಕನ ಕೈವಾಡ ಇತ್ತು. ಮುಗ್ಧ ಬುಡಕಟ್ಟು ಜನಾಂಗದವರ ವಿರುದ್ಧದ ಹಿಂಸಾಚಾರವನ್ನು ಮಾವೋ ಕಾರ್ಯಕರ್ತರು ವಿರೋಧಿಸಿದ್ದರು. ಈ ಸಂಬಂಧ ನಾಯಕ ಮತ್ತು ಕಾರ್ಯಕರ್ತರಲ್ಲಿ ಭಿನ್ನಾಭಿಪ್ರಾಯ ಉಂಟಾಗಿತ್ತು. ಈಗ ಅಂತಹ ಭಯೋತ್ಪಾದಕ ತಂತ್ರಗಳು ಮಾವೋವಾದಿಗಳಿಗೆ ಸಹಾಯ ಮಾಡುತ್ತಿಲ್ಲವೆಂದು ತೋರುತ್ತದೆ. ಈ ಕುರಿತು ನಾವು ತನಿಖೆ ನಡೆಸುತ್ತೇವೆ” ಎಂದು ಬಸ್ತಾರ್ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಸುಂದರ್‌ರಾಜ್ ಪಿ ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *