

ಕೋವಿಡ್-19 ಹಿನ್ನೆಲೆಯಲ್ಲಿ ಇನ್ನೂ ಶಾಲೆಗಳು ಆರಂಭವಾಗದಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ, ಆನ್ ಲೈನ್ ತರಗತಿಗಳು ಹಳ್ಳಿಗಳ ವಿದ್ಯಾರ್ಥಿಗಳಿಗೆ ದೊರಕುವುದಿಲ್ಲ ಎಂಬ ಕಾರಣದಿಂದ ರಾಜ್ಯ ಸರ್ಕಾರ ವಿದ್ಯಾಗಮ ಕಾರ್ಯಕ್ರಮವನ್ನು ಆರಂಭಿಸಿತ್ತು.

ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಇನ್ನೂ ಶಾಲೆಗಳು ಆರಂಭವಾಗದಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ, ಆನ್ ಲೈನ್ ತರಗತಿಗಳು ಹಳ್ಳಿಗಳ ವಿದ್ಯಾರ್ಥಿಗಳಿಗೆ ದೊರಕುವುದಿಲ್ಲ ಎಂಬ ಕಾರಣದಿಂದ ರಾಜ್ಯ ಸರ್ಕಾರ ವಿದ್ಯಾಗಮ ಕಾರ್ಯಕ್ರಮವನ್ನು ಆರಂಭಿಸಿತ್ತು.

ಆದರೆ ವಿದ್ಯಾಗಮ ಕಾರ್ಯಕ್ರಮ ಆರಂಭವಾದ ನಂತರ ಹಲವು ಮಕ್ಕಳು ಮತ್ತು ಶಿಕ್ಷಕರಿಗೆ ಕೊರೋನಾ ಸೋಂಕು ತಗಲಿದೆ, ಇದರಿಂದ ಮಕ್ಕಳು ಮತ್ತು ಶಿಕ್ಷಕರ ಜೀವಕ್ಕೆ ಅಪಾಯವಾಗುತ್ತಿದೆ ಎಂದು ರಾಜ್ಯದ ಹಲವು ಜಿಲ್ಲೆಗಳಿಂದ ವ್ಯಾಪಕವಾದ ದೂರು ಬಂದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ ಮತ್ತು ಅದರ ಸಮರ್ಪಕ ವಿಶ್ಲೇಷಣೆ ಪೂರ್ಣಗೊಳ್ಳುವವರೆಗೆ ವಿದ್ಯಾಗಮ ಕಾರ್ಯಕ್ರಮವನ್ನು ಪುನರಾರಂಭಿಸುವುದಿಲ್ಲ ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಪ್ರಕಟಿಸಿದ್ದಾರೆ. (kpc)


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






