

ಕೊರೋನಾ ಸೋಂಕು ಕುರಿತು ಸಂದೇಶ ಸಾಧ್ಯತೆ-ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿನ ಅಬ್ಬರ ತಗ್ಗುತ್ತಿರುವಂತೆಯೇ ಇತ್ತ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿನ ಅಬ್ಬರ ತಗ್ಗುತ್ತಿರುವಂತೆಯೇ ಇತ್ತ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಬಗ್ಗೆ ಸ್ವತಃ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಇಂದು ಸಂಜೆ ಆರು ಗಂಟೆಗೆ ದೇಶದ ಜನರಿಗೆ ಸಂದೇಶವೊಂದನ್ನು ನೀಡಲಿದ್ದೇನೆ ಎಂದು ಹೇಳಿದ್ದಾರೆ.
ಕಳೆದೊಂದು ವಾರದಿಂದ ಭಾರತದಲ್ಲಿ ಹೊಸ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ತಗ್ಗಿದ್ದು, ಚೇತರಿಸಿಕೊಳ್ಳುತ್ತಿರುವವರ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದೇ ಕಾರಣಕ್ಕೆ ಕೋವಿಡ್-19 ಸೋಂಕಿಗೆ ಚಿಕಿತ್ಸೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಏನಾದರೂಘೋಷಣೆ ಮಾಡಬಹುದು ಎಂದು ಅಂದಾಜಿಸಲಾಗಿದೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
