ಸ್ಯಾಂಡಲ್ ವುಡ್ ನಟಿಯರ ಡ್ರಗ್ ಕೇಸು ವಿಚಾರಣೆ ಮಾಡುವ ನ್ಯಾಯಾಧೀಶರಿಗೇ ಬಂತು ಬೆದರಿಕೆ ಪತ್ರ!

ಡ್ರಗ್ ಕೇಸಿನಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಜೈಲಿನಲ್ಲಿರುವ ಇಬ್ಬರು ಸ್ಯಾಂಡಲ್ ವುಡ್ ನಟಿಯರನ್ನು ಕೂಡಲೇ ಬಿಡುಗಡೆ ಮಾಡಿ, ಇಲ್ಲದಿದ್ದರೆ ಬಾಂಬ್ ಸ್ಫೋಟಿಸುತ್ತೇವೆ ಎಂಬ ಬೆದರಿಕೆ ಪತ್ರ ಬಂದು ನಿನ್ನೆ ಅಪರಾಹ್ನ ಕೆಲ ಕಾಲ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.

Ragini Dwivedi and Sanjana Galrani

ಬೆಂಗಳೂರು: ಡ್ರಗ್ ಕೇಸಿನಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಜೈಲಿನಲ್ಲಿರುವ ಇಬ್ಬರು ಸ್ಯಾಂಡಲ್ ವುಡ್ ನಟಿಯರನ್ನು ಕೂಡಲೇ ಬಿಡುಗಡೆ ಮಾಡಿ, ಇಲ್ಲದಿದ್ದರೆ ಬಾಂಬ್ ಸ್ಫೋಟಿಸುತ್ತೇವೆ ಎಂಬ ಬೆದರಿಕೆ ಪತ್ರ ಬಂದು ನಿನ್ನೆ ಅಪರಾಹ್ನ ಕೆಲ ಕಾಲ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.

ಡಿಟೊನೇಟರ್ ಮಾದರಿಯ ವಸ್ತುವನ್ನು ಪತ್ರದೊಳಗಿಟ್ಟು ಡ್ರಗ್ ಮತ್ತು ನಾರ್ಕೊಟಿಕ್ ಕೇಸುಗಳಿಗೆ ಸಂಬಂಧಪಟ್ಟ ವಿಶೇಷ ಕೋರ್ಟ್ ನ ನ್ಯಾಯಾಧೀಶರಿಗೆ ಈ ಬೆದರಿಕೆ ಪತ್ರವನ್ನು ಕಳುಹಿಸಲಾಗಿದೆ. ಅದರಲ್ಲಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾಣಿಯವರನ್ನು, ಮತ್ತು ಡಿ ಜೆ ಹಳ್ಳಿ ದಂಧೆ ಗಲಭೆಕೋರರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಇಲ್ಲದಿದ್ದರೆ ಬಾಂಬ್ ಸ್ಫೋಟಿಸಿ ನಾಶ ಮಾಡಲಾಗುವುದು ಎಂದು ಬೆದರಿಕೆ ಹಾಕಲಾಗಿದೆ.

ನ್ಯಾಯಾಧೀಶ ಜಿ ಎಂ ಶೀನಪ್ಪ ಅವರ ವಿಳಾಸಕ್ಕೆ ಅಂಚೆ ಮೂಲಕ ಪತ್ರ ಬಂದಿದ್ದು, ಅದನ್ನು ಅವರು ತೆರೆದು ನೋಡಿದಾಗ, ಸಣ್ಣ ಡಿಟೊನೇಟರ್ ರೀತಿಯ ವಸ್ತುವಿನೊಂದಿಗೆ ಬೆದರಿಕೆ ಪತ್ರವನ್ನು ಕೂಡ ಬರೆಯಲಾಗಿತ್ತು. ಕೂಡಲೇ ನ್ಯಾಯಮೂರ್ತಿಗಳು ತಮ್ಮ ಸಿಬ್ಬಂದಿಗೆ ಹೇಳಿ ಪೊಲೀಸರಿಗೆ ಕರೆ ಮಾಡುವಂತೆ ಸೂಚಿಸಿದರು. ತಕ್ಷಣವೇ ಪೊಲೀಸ್ ಶ್ವಾನ ಮತ್ತು ಬಾಂಬ್ ಪತ್ತೆ ದಳ ಬಂದು ಶೋಧ ನಡೆಸಿತು. ಪೊಲೀಸರು ವಸ್ತುವನ್ನು ಪರಿಶೀಲಿಸಿದ್ದಾರೆ.

ಸ್ಫೋಟಕಗಳನ್ನು ಬಳಸಿ ನ್ಯಾಯಾಧೀಶರ ಕಾರನ್ನು ಸ್ಫೋಟಿಸಿ ಬೇಡಿಕೆ ಈಡೇರಿಸದಿದ್ದರೆ ಕೊಲ್ಲುವುದಾಗಿ ಪತ್ರದಲ್ಲಿ ಬೆದರಿಕೆ ಹಾಕಲಾಗಿದೆ. ಪೊಲೀಸ್ ಆಯುಕ್ತ ಕಮಲ್ ಪಂತ್ ಮತ್ತು ಇತರ ಹಿರಿಯ ಅಧಿಕಾರಿಗಳು ಇದೇ ರೀತಿಯ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಮಲ್ ಪಂತ್ ಮತ್ತು ಇತರ ಹಿರಿಯ ಅಧಿಕಾರಿಗಳಿಗೆ ಇದೇ ರೀತಿಯ ಪತ್ರಗಳನ್ನು ಕಳುಹಿಸಲಾಗಿದೆ ಎಂದು ಹೇಳಲಾಗಿದ್ದರೂ ಪೊಲೀಸರು ಇದನ್ನು ಖಚಿತಪಡಿಸಿಲ್ಲ. “ನಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಮತ್ತು ಇದರ ಹಿಂದೆ ಯಾರು ಇದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಬಂಧಿಸಲಾಗುವುದು. ಶೀಘ್ರದಲ್ಲೇ ದುಷ್ಕರ್ಮಿಯನ್ನು ಹಿಡಿಯಲು ನಾವು ವಿಶೇಷ ತಂಡಗಳನ್ನು ರಚಿಸಿದ್ದೇವೆ ಎಂದು ಸಿಸಿಬಿಯ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *