

50 ಸಾವಿರಕ್ಕಿಳಿದ ಸೋಂಕಿತರ ಸಂಖ್ಯೆ,ದೇಶದಲ್ಲಿ ಮಹಾಮಾರಿ ಕೊರೋನಾ ಮಹಾಮಾರಿ ಆರ್ಭಟ ಇಳಿಯುತ್ತಿದ್ದು, ಕಳೆದ 24 ಗಂಟೆಗಳಲ್ಲಿ 50,129 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 78,64,811ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೋನಾ ಮಹಾಮಾರಿ ಆರ್ಭಟ ಇಳಿಯುತ್ತಿದ್ದು, ಕಳೆದ 24 ಗಂಟೆಗಳಲ್ಲಿ 50,129 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 78,64,811ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇನ್ನು ದೈನಂದಿನ ಸಾವಿನ ಸಂಖ್ಯೆ ಕೂಡ ಕಡಿಮೆಯಾಗುತ್ತಿದ್ದು, ಕಳೆದ ಕೆಲ ದಿನಗಳಿಂದ 600ಕ್ಕಿಂತಲೂ ಕಡಿಮೆ ಸಾವುಗಳು ದಾಖಲಾಗುತ್ತಿವೆ. ನಿನ್ನೆ ಒಟ್ಟು 578 ಮಂದಿ ಸಾವನ್ನಪ್ಪಿದ್ದು, ಈವರೆಗೂ ಮಹಾಮಾರಿ ವೈರಸ್ ದೇಶದಲ್ಲಿ 1,18,534 ಮಂದಿಯನ್ನು ಬಲಿಪಡೆದುಕೊಂಡಿದೆ.
ಈ ನಡುವೆ ದೇಶದ ಒಟ್ಟಾರೆ 78,64,811 ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 62,077 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದರೊಂದಿಗೆ ಒಟ್ಟಾರೆ ಚೇತರಿಸಿಕೊಂಡವರ ಸಂಖ್ಯೆ 70,78,123ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿ 6,68,154 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,40,905 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 10,25,23,469 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ. (kpc)
