ಕೇರಳಕ್ಕೆ ಅಗ್ರ ಸ್ಥಾನ, ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ!

ಅತ್ಯುತ್ತಮ ಆಡಳಿತವಿರುವ ರಾಜ್ಯಗಳ ಪಟ್ಟಿ: ಅತ್ಯುತ್ತಮ ಆಡಳಿತವಿರುವ ರಾಜ್ಯಗಳ ಪಟ್ಟಿಯಲ್ಲಿ ಸಿಎಂ ಪಿಣರಾಯಿ ವಿಜಯನ್ ಅವರ ಕೇರಳ ಆಗ್ರಸ್ಥಾನದಲ್ಲಿದ್ದು, ಯೋಗಿ ಆದಿತ್ಯಾನಾಥ್ ಆಡಳಿತ ವಿರುವ ಉತ್ತರ ಪ್ರದೇಶ ಕೊನೆಯ ಸ್ಥಾನದಲ್ಲಿದೆ.

CM Pinarayi Vijayan

ನವದೆಹಲಿ: ದೇಶದಲ್ಲಿ ಅತ್ಯುತ್ತಮ ಆಡಳಿತವಿರುವ ರಾಜ್ಯಗಳ ಪಟ್ಟಿಯಲ್ಲಿ ಸಿಎಂ ಪಿಣರಾಯಿ ವಿಜಯನ್ ಅವರ ಕೇರಳ ಆಗ್ರಸ್ಥಾನದಲ್ಲಿದ್ದು, ಯೋಗಿ ಆದಿತ್ಯಾನಾಥ್ ಆಡಳಿತ ವಿರುವ ಉತ್ತರ ಪ್ರದೇಶ ಕೊನೆಯ ಸ್ಥಾನದಲ್ಲಿದೆ.

ಪಬ್ಲಿಕ್ ಅಫೇರ್ಸ್ ಸೆಂಟರ್ ಎಂಬ ಸಂಸ್ಥೆ ಬಿಡುಗಡೆಗೊಳಿಸಿದ ‘ಪಬ್ಲಿಕ್ ಅಫೇರ್ಸ್ ಇಂಡೆಕ್ಸ್-2020’ ಇದರಲ್ಲಿ ಕೇರಳ ದೇಶದ ಅತ್ಯುತ್ತಮ ಆಡಳಿತವಿರುವ ರಾಜ್ಯವೆಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರೆ ಉತ್ತರ ಪ್ರದೇಶ ಈ ಸೂಚ್ಯಂಕದಲ್ಲಿ ಕೊನೆಯ ಸ್ಥಾನ ಪಡೆದಿದೆ. ಕೇಂದ್ರಾಡಳಿತ ಪ್ರದೇಶಗಳ ಪೈಕಿ ಚಂಡೀಗಢ  ಮೊದಲ ಸ್ಥಾನ ಪಡೆದಿದೆ. ಸುಸ್ಥಿರ ಅಭಿವೃದ್ಧಿ ಮಾನದಂಡದ ಆಧಾರದಲ್ಲಿ ಈ ಸೂಚ್ಯಂಕದಲ್ಲಿ ರ್ಯಾಂಕಿಂಗ್ ನೀಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರಾಗಿರುವ ಇಸ್ರೋದ ಮಾಜಿ ಮುಖ್ಯಸ್ಥ ಕೆ ಕಸ್ತೂರಿರಂಗನ್ ಹೇಳಿದ್ದಾರೆ.

ಪಬ್ಲಿಕ್ ಅಫೇರ್ಸ್ ಸೆಂಟರ್ ಸಂಸ್ಥೆ ಈ ಪಟ್ಟಿ ಸಿದ್ಧ ಪಡಿಸಿದ್ದು, ಎರಡು ಕೋಟಿಗಿಂತ ಅಧಿಕ ಜನಸಂಖ್ಯೆಯಿರುವ 18 ರಾಜ್ಯಗಳ ಪೈಕಿ ಕೇರಳ (1.388 ಅಂಕ), ತಮಿಳುನಾಡು (0.912 ಅಂಕ), ಆಂಧ್ರ ಪ್ರದೇಶ (0.531 ಅಂಕ) ಹಾಗೂ ಕರ್ನಾಟಕ (0.468 ಅಂಕ) ಮೊದಲ ನಾಲ್ಕು ಸ್ಥಾನಗಳನ್ನು ಪಡೆದಿವೆ. ಆದರೆ ಉತ್ತರ  ಪ್ರದೇಶ ( -1.461), ಒಡಿಶಾ (-1.201) ಹಾಗೂ ಬಿಹಾರ (-1.158) ರಾಜ್ಯಗಳು ನಕಾರಾತ್ಮಕ ಅಂಕಗಳೊಂದಿಗೆ ಕೊನೆಯ ಸ್ಥಾನ ಪಡೆದಿವೆ. 

ಇನ್ನು ಎರಡು ಕೋಟಿಗೂ ಕಡಿಮೆ ಜನಸಂಖ್ಯೆಯ ರಾಜ್ಯಗಳ ಪೈಕಿ ಗೋವಾ (1.745) ಪ್ರಥಮ ಸ್ಥಾನ ಪಡೆದರೆ ಮೇಘಾಲಯ (0.797) ಹಾಗೂ ಹಿಮಾಚಲ ಪ್ರದೇಶ (0.725) ನಂತರದ ಸ್ಥಾನಗಳನ್ನು ಪಡೆದಿವೆ. ಮಣಿಪುರ (-0.363), ದೆಹಲಿ (-0.289) ಹಾಗೂ ಉತ್ತರಾಖಂಡ (-0.277) ಕೊನೆಯ ಸ್ಥಾನಗಳನ್ನು ಗಳಿಸಿದ  ಸಣ್ಣ ರಾಜ್ಯಗಳಾಗಿವೆ.

ಉತ್ತಮ ಆಡಳಿತ ಹೊಂದಿರುವ ಕೇಂದ್ರಾಡಳಿತ ಪ್ರದೇಶಗಳ ಪಟ್ಟಿಯಲ್ಲಿ ಚಂಡೀಘಡ (1.05) ಮೊದಲ ಸ್ಥಾನದಲ್ಲಿದ್ದು, ನಂತರದ ಸ್ಥಾನದಲ್ಲಿ ಪುದುಚೇರಿ (0.52), ಲಕ್ಷದ್ವೀಪ (0.003), ದಾದರ್ ಮತ್ತು ನಗರ ಹವೇಲಿ (-0.69), ಜಮ್ಮು ಮತ್ತು ಕಾಶ್ಮೀರ ತಲಾ (-0.50) ಅಂಡಮಾನ್ ಮತ್ತು ನಿಕೋಬಾರ್ (-0.30) ಇವೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *