

: ಸಚಿವ ಪಾಟೀಲ್-ಮರಾಠಿ ಮಾತನಾಡುವ ಕರ್ನಾಟಕ ಗಡಿ ಪ್ರದೇಶಗಳು ಶೀಘ್ರದಲ್ಲೇ ಮಹಾರಾಷ್ಟ್ರಕ್ಕೆ ಸೇರಲಿವೆ ಎಂದು ಮಹಾರಾಷ್ಟ್ರ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್ ಹೇಳಿದ್ದಾರೆ.

ಔರಂಗಾಬಾದ್: ಮರಾಠಿ ಮಾತನಾಡುವ ಕರ್ನಾಟಕ ಗಡಿ ಪ್ರದೇಶಗಳು ಶೀಘ್ರದಲ್ಲೇ ಮಹಾರಾಷ್ಟ್ರಕ್ಕೆ ಸೇರಲಿವೆ ಎಂದು ಮಹಾರಾಷ್ಟ್ರ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್ ಹೇಳಿದ್ದಾರೆ.

ಭಾಷಾ ಸೂಕ್ಷ್ಮ ವಿಚಾರದ ಸಂಬಂಧ ಮಾತನಾಡಿದ ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷ ಪಾಟೀಲ್, “ಮರಾಠಿ ಸಹೋದರರನ್ನು ಬೆಂಬಲಿಸಿ ಎನ್‌ಸಿಪಿ ಇಂದು ಕರಾಳ ದಿನ ಆಚರಿಸುತ್ತಿದೆ. ಈ ವೇಳೆ ಪ್ರತಿಭಟನೆಯ ಕುರುಹಾಗಿ ಕಪ್ಪು ರಿಬ್ಬನ್ ಕಟ್ಟಿಕೊಳ್ಳ ಲಾಗಿದೆ” ಎಂದು ಹೇಳಿದರು.
“ಕರ್ನಾಟಕದ ಮರಾಠಿ ಗಡಿ ನಿವಾಸಿಗಳ ವಿರುದ್ಧದ ಅನ್ಯಾಯ, ದೌರ್ಜನ್ಯ ಮತ್ತು ದಬ್ಬಾಳಿಕೆ ಸಹಿಸಲಾಗದು ಈ ಸಂಬಂಧ ರಾಜ್ಯದ ಎನ್‌ಸಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಗಡಿ ಪ್ರದೇಶಗಳಲ್ಲಿ ಸಮಸ್ಯೆಯಲ್ಲಿರುವ ಜನರ ಬೆಂಬಲಕ್ಕೆ ಇಡೀ ಮಹಾರಾಷ್ಟ್ರ ಜನರಿದ್ದಾರೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. (kpc)


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






