ಐತಿಹಾಸಿಕ ಸಿನಿಮಾ ಮೂಲಕ ರಾಜ್ ವಂಶದ ಮತ್ತೊಂದು ಕುಡಿ ಸ್ಯಾಂಡಲ್ ವುಡ್ ಪ್ರವೇಶ

ಅಣ್ಣಾವ್ರ ಕುಟುಂಬದಿಂದ ಮತ್ತೊಂದು ಕುಡಿ ಸ್ಯಾಂಡಲ್​ವುಡ್​ಗೆ ಭರ್ಜರಿ ಎಂಟ್ರಿ ಕೊಡಲು ಸಜ್ಜಾಗಿದೆ. ಇದಕ್ಕೆ ಬೇಕಾದ ಸಕಲ ತಯಾರಿಯೊಂದಿಗೆ ಶೂಟಿಂಗ್ ಕೂಡ ಆರಂಭಿಸಿದೆ.

Yuva rajkumar

ಅಣ್ಣಾವ್ರ ಕುಟುಂಬದಿಂದ ಮತ್ತೊಂದು ಕುಡಿ ಸ್ಯಾಂಡಲ್​ವುಡ್​ಗೆ ಭರ್ಜರಿ ಎಂಟ್ರಿ ಕೊಡಲು ಸಜ್ಜಾಗಿದೆ. ಇದಕ್ಕೆ ಬೇಕಾದ ಸಕಲ ತಯಾರಿಯೊಂದಿಗೆ ಶೂಟಿಂಗ್ ಕೂಡ ಆರಂಭಿಸಿದೆ.

ಈಗಾಗಾಲೇ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿ ನಿರೀಕ್ಷೆ ಹುಟ್ಟು ಹಾಕಿದ್ದ ಯುವ-01 ಚಿತ್ರತಂಡ ಇದೀಗ ರಾಜ್ಯೋತ್ಸವದ ಪ್ರಯುಕ್ತ ಚಿತ್ರ ಟೈಟಲ್ ಅನ್ನು ಬಿಡುಗಡೆ ಮಾಡಿದೆ.  

ರಾಘವೇಂದ್ರ ರಾಜ್ ಕುಮಾರ್ ಅವರ ಎರಡನೇ ಪುತ್ರ ಯುವರಾಜ್ ಕುಮಾರ್ ಮೊದಲ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಹುಟ್ಟಿಕೊಂಡಿದೆ. ಅಣ್ಣಾವ್ರ ಮೊಮ್ಮಗನ ಚೊಚ್ಚಲ ಚಿತ್ರದ ಟೀಸರ್ ಇಂದು ಬಿಡುಗಡೆಯಾಗಿದ್ದು, ಕನ್ನಡ ಪ್ರೇಕ್ಷಕರು ಬಹುಪರಾಕ್ ಹಾಕಿದ್ದಾರೆ. 

ಯುವ ಅವರ ಮೊದಲ ಸಿನಿಮಾಗೆ ಪುನೀತ್ ರುದ್ರನಾಗ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ರವಿ ಬಸ್ರೂರ್ ಸಂಗೀತ ಟೀಸರ್‌ನಲ್ಲೇ ಸದ್ದು ಮಾಡಿದೆ. ಸಂಕೇಶ್ ಛಾಯಾಗ್ರಹಣ, ಚೇತನ್ ಡಿಸೋಜಾ ಸಾಹಸ ನಿರ್ದೇಶನವಿದೆ.

ಅದು ಕೂಡ ಯುವ ರಾಜ್​ ಕುಮಾರ್​ ಅವರ ಖಡಕ್ ಡೈಲಾಗ್​ಗಳನ್ನೊಳಗೊಂಡ ಭರ್ಜರಿ ಟೀಸರ್ ಮೂಲಕ  ರಾಘವೇಂದ್ರ ರಾಜ್​ ಕುಮಾರ್ ಅವರ ಎರಡನೇ ಮಗ ಯುವ ರಾಜ್​ಕುಮಾರ್ ಅಭಿನಯದ ಮೊದಲ ಚಿತ್ರ ಈ ಹಿಂದೆಯೇ ಸೆಟ್ಟೇರಿತ್ತು. ಆದರೆ ಚಿತ್ರದ ಟೈಟಲ್ ಮತ್ತು ಪಾತ್ರದ ಬಗ್ಗೆ ಚಿತ್ರತಂಡ ಯಾವುದೇ ಸುಳಿವು ನೀಡಿರಲಿಲ್ಲ. ಇದೀಗ 5 ನಿಮಿಷಗಳ ಟೀಸರ್ ಮೂಲಕ ‘ಯುವ ರಣಧೀರ ಕಂಠೀರವ’ನ ಎಂಟ್ರಿ ಝಲಕ್ ತೋರಿಸಿದ್ದಾರೆ.  

ಭರ್ಜರಿ ಡೈಲಾಗ್ ಮತ್ತು ಜಬರ್‌ದಸ್ತ್ ಫೈಟ್​ನ್ನು ಟೀಸರ್​ನಲ್ಲಿ ತೋರಿಸಲಾಗಿದ್ದು, ಇದರೊಂದಿಗೆ ‘ಯುವ ರಣಧೀರ ಕಂಠೀರವ’ ಚಿತ್ರವು ಐತಿಹಾಸಿಕ ಕಥಾ ಹಂದರ ಹೊಂದಿರಲಿದೆ ಎಂಬುದು ಬಹಿರಂಗವಾಗಿದೆ. ಯುವ ರಾಜ್​ಕುಮಾರ್ ಅವರ ಚೊಚ್ಚಲ ಚಿತ್ರದ ಟೀಸರ್​ ಬಿಡುಗಡೆಯನ್ನು ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್​ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ಕುಮಾರ್ ಸೇರಿದಂತೆ ಕುಟುಂಬ ವರ್ಗ ಭಾಗಿಯಾಗಿ ಹರಸಿದರು.

ಚಿತ್ರಕಥೆ ಮತ್ತು ಸಂಭಾಷಣೆ ಬರೆಯಲು ಆರು ತಿಂಗಳ ಸಮಯಾವಕಾಶ ಬೇಕಾಗಿದೆ ಎಂದು ನಿರ್ದೇಶಕ ಪುನೀತ್ ತಿಳಿಸಿದ್ದಾರೆ, 2021 ರ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಶೂಟಿಂಗ್ ಆರಂಭಿಸುವುದಾಗಿ ಚಿತ್ರತಂಡ ತಿಳಿಸಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *