ನ.12 ರಂದು ಬಿಳಗಿ ಕಾಲೇಜಿಗೆ ಬೀಳಲಿದೆ ಬೀಗ,ನ. 17ರಿಂದ ಪದವಿ, ಎಂಜನೀಯರಿಂಗ್‌, ಡಿಪ್ಲೊಮೋ ಕಾಲೇಜುಗಳ ಆರಂಭ

ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಬಿಳಗಿ ಜ್ಞಾನ ಸಾಗರ ಕಾಲೇಜಿಗೆ ಬೀಗ ಜಡಿಯಲು ಹಳೆಯ ವಿದ್ಯಾರ್ಥಿಗಳು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಇತ್ತೀಚೆಗೆ ಸಿದ್ಧಾಪುರ ತಹಸಿಲ್ಧಾರರಿಗೆ ಮನವಿ ನೀಡಿರುವ ಜಿ.ಪಂ. ಮಾಜಿ ಸದಸ್ಯ ವಿ.ಎನ್.ನಾಯ್ಕ, ಪದ್ಮಾಕರ ಕಲ್ಕಣಿ, ಜಿ.ಕೆ.ನಾಯ್ಕ ಕೋಲಶಿರ್ಸಿ ಸೇರಿದ ಕೆಲವರು ಬಿಳಗಿ ಜ್ಞಾನಸಾಗರ ಕಾಲೇಜಿನ ಆಡಳಿತ ಮಂಡಳಿಯ ದುರಾಡಳಿತ,ಅವ್ಯವಸ್ಥೆ, ಅಕ್ರಮ ವ್ಯವಹಾರಗಳನ್ನು ಖಂಡಿಸಿ ಕಾಲೇಜಿಗೆ ಬೀಗ ಜಡಿಯುವ ಮೂಲಕ ಪ್ರತಿಭಟಿಸುವುದಾಗಿ ತಿಳುವಳಿಕೆ ನೀಡಲಾಗಿದೆ.

ರಾಮ ದೇವರ ಗರ್ಭಗುಡಿಗೆ ಶಿಲಾ ಬಾಗಿಲು ಸ್ಥಾಪನೆ
ಸಿದ್ದಾಪುರ. ತಾಲೂಕಿನ ಭುವನಗಿರಿ ಸಮೀಪದ ಹೊಸಳ್ಳಿಯಲ್ಲಿ ಜೀರ್ಣವಾಗಿರುವ ದೇವಸ್ಥಾನಕ್ಕೆ ಹೊಸ ಕಟ್ಟಡ ನಿರ್ಮಾಣದ ಕಾರ್ಯ ನಡೆಯುತ್ತಿದ್ದು, ಅದರ ಗರ್ಭಗುಡಿಯ ಪ್ರಧಾನ ಬಾಗಿಲನ್ನು ಇತ್ತೀಚೆಗೆ ಸ್ಥಾಪಿಸಲಾಯಿತು. ವೈದಿಕ ವಿದ್ವಾಂಸರಾದ ಶ್ರೀಧರ ಭಟ್ಟ ಬಡಾಳ ನಿರ್ದೇಶನದಲ್ಲಿ ಬಾಗಿಲಿಗೆ ಪೂಜೆ ಸಲ್ಲಿಸಿ ಸ್ಥಾಪನೆಮಾಡಲಾಯಿತು. ಶಿಲೆಯಲ್ಲಿ ಕೊರೆದ ಈ ಬಾಗಿಲನ್ನು ಈಶ್ವರ ನಾರಾಯಣ ನಾಯ್ಕ ಬೇಡ್ಕಣಿ ದಂಪತಿಗಳು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿದರು. ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ ರಾಮಾ ನಾಯ್ಕ, ಕಟ್ಟಡ ಸಮಿತಿಯ ಅಧ್ಯಕ್ಷ ಮಹಾಬಲೇಶ್ವರ ರಾಮಾ ನಾಯ್ಕ ನೀರಗುಡಿ, ಎರಡೂ ಸಮಿತಿಗಳ ಪದಾಧಿಕಾರಿಗಳು, ವಿ.ಎಂ.ಭಟ್ಟ ಡೊಂಬೆಕೈ ದಂಪತಿಗಳು, ಊರಿನ ನಾಗರಿಕರು ಉಪಸ್ಥಿತರಿದ್ದರು.

ನ. 17ರಿಂದ ಪದವಿ, ಎಂಜನೀಯರಿಂಗ್‌, ಡಿಪ್ಲೊಮೋ ಕಾಲೇಜುಗಳ ಆರಂಭ: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಪದವಿ, ಎಂಜನೀಯರಿಂಗ್‌ ಹಾಗೂ ಡಿಪ್ಲೊಮೋ ಕಾಲೇಜುಗಳ ತರಗತಿಗಳನ್ನು ಇದೇ ನವೆಂಬರ್‌ 17ರಿಂದ ಪುನರಾರಂಭಿಸಲಾಗುತ್ತಿದ್ದು…

A worker sanitises a class room at a college as authorities have allowed for the reopening of educational institutes in a graded manner.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಪದವಿ, ಎಂಜನೀಯರಿಂಗ್‌ ಹಾಗೂ ಡಿಪ್ಲೊಮೋ ಕಾಲೇಜುಗಳ ತರಗತಿಗಳನ್ನು ಇದೇ ನವೆಂಬರ್‌ 17ರಿಂದ ಪುನರಾರಂಭಿಸಲಾಗುತ್ತಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ ಸೋಮವಾರ ಕೋವಿಡ್‌ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಸರ್ಕಾರಿ, ತಾಂತ್ರಿಕ, ಡಿಪ್ಲೊಮೋ, ಅನುದಾನಿತ, ಅನುದಾನರಹಿತ ಕಾಲೇಜು, ವಿಶ್ವವಿದ್ಯಾಲಯ ಮತ್ತು ಖಾಸಗಿ ವಿಶ್ವವಿದ್ಯಾನಿಲಯಗಳಿಗೆ ಶಿಕ್ಷಣ ಇಲಾಖೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಆಫ್‌ಲೈನ್‌ ತರಗತಿಗಳ ಆರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಎಸ್‌ಒಪಿಯಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಸೂಚನೆಗಳಿದ್ದು, ಅವುಗಳ ಪ್ರಕಾರವೇ ತರಗತಿಗಳು ನಡೆಯುತ್ತವೆ. ಹಾಗೆಯೇ, ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೂ ನಿಗದಿತ ಸೂಚನೆಗಳಿವೆ ಎಂದು ತಿಳಿಸಿದ್ದಾರೆ.

ನ. 17ರಿಂದ ಭೌತಿಕ ತರಗತಿಗಳು ಆರಂಭಗೊಳ್ಳಲಿದೆ. ತರಗತಿಗಳಿಗೆ ಹಾಜರಾಗಲು ಬಯಸುವ ವಿದ್ಯಾರ್ಥಿಗಳು ಅವರ ಪೋಷಕರಿಂದ ನಿಗದಿತ ನಮೂನೆಯಲ್ಲಿ ಸಹಿ ಹಾಕಿದ ಒಪ್ಪಿಗೆ ಪತ್ರ ಸಲ್ಲಿಸಬೇಕು.

ತರಗತಿಗಳಲ್ಲಿ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ ಮತ್ತು ಕಾಲೇಜಿನಲ್ಲಿ ಲಭ್ಯವಿರುವ ಒಟ್ಟು ಕೊಠಡಿಗಳ ಅನುಸಾರ, ದೈಹಿಕ ಅಂತರ ಕಾಪಾಡಿಕೊಂಡು ತರಗತಿ ವೇಳಾಪಟ್ಟಿ ಸಿದ್ಧಪಡಿಸಬೇಕು ಎಂದು ಸೂಚಿಸಲಾಗಿದೆ.

ಬೋಧನಾ, ಪ್ರಯೋಗಾಲಯ ಮತ್ತು ಪ್ರಾಜೆಕ್ಟ್ ತರಗತಿಗಳನ್ನು ಅವಶ್ಯಕವಿದ್ದಲ್ಲಿ ಪಾಳಿ ವ್ಯವಸ್ಥೆಯ (shift system) ಮೇರೆಗೆ ನಡೆಸುವುದು.

ಭೌತಿಕ ತರಗತಿಗಳಿಗೆ ಹಾಜರಾಗಲು ಇಚ್ಛಿಸದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕವೇ ತರಗತಿಗಳನ್ನು ನಡೆಸುವುದು. ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಬಯಸಿದ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಬಗ್ಗೆ ಇರುವ ಅನುಮಾನ ಅಥವಾ ಸಮಸ್ಯೆಗಳನ್ನು ನಿವಾರಿಸುವ ಸಂಬಂಧ ಪ್ರತಿ ದಿನವು ಭೌತಿಕ ಸಂಪರ್ಕ ತರಗತಿಗಳನ್ನು (Contact Classes) ನಡೆಸುವುದು. 

ಸಂಪರ್ಕ ತರಗತಿಗಳನ್ನು ನಡೆಸುವಾಗ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಕಾಲೇಜಿನಲ್ಲಿ ಲಭ್ಯವಿರುವ ಒಟ್ಟು ತರಗತಿ ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಇಲಾಖೆಯಿಂದ ಹೊರಡಿಸಲಾಗಿರುವ ಮತ್ತು ಪ್ರಸ್ತುತ ಮಾರ್ಗಸೂಚಿಗಳ ಪ್ರಕಾರ ದೈಹಿಕ ಅಂತರವನ್ನು ಕಾಪಾಡಿಕೊಂಡು ಸುರಕ್ಷಿತವಾಗಿ ತರಗತಿಗಳನ್ನು ನಡೆಸಲು ಅವಶ್ಯಕವಿರುವಂತೆ ತರಗತಿ ವೇಳಾ ಪಟ್ಟಿಯನ್ನು ಕಾಲೇಜಿನ ಹಂತದಲ್ಲಿಯೇ  ಸಿದ್ದಪಡಿಸಿಕೊಳ್ಳುವುದು.

ಎಲ್ಲಾ ಅಧ್ಯಾಪಕರು ತಮ್ಮ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಕುರಿತು ಮುಂದಿನ ಕನಿಷ್ಠ ಒಂದು ತಿಂಗಳ  ಅಧ್ಯಯನ  ಸಾಮಗ್ರಿಗಳನ್ನು ಪ್ರತಿ Period/ Sessionಗೆ ಸಂಬಂಧಿಸಿದಂತೆ ತಯಾರಿಸಿ ವಿದ್ಯಾರ್ಥಿಗಳಿಗೆ ಟೆಲಿಗ್ರಾಂ/ವಾಟ್ಸಾಪ್/ಇ-ಮೇಲ್ ಮೂಲಕ ಕಡ್ಡಾಯವಾಗಿ ನೀಡುವುದು. ಅಧ್ಯಯನ ಸಾಮಗ್ರಿಗಳು Video Lectures, PowerPoint Presentations, E-Notes, E-Books, Audio Books ಮತ್ತು Practice Questions ಇತ್ಯಾದಿಗಳ ರೂಪದಲ್ಲಿ ಇರತಕ್ಕದ್ದು. ಸದರಿ ಅಧ್ಯಯನ ಸಾಮಗ್ರಿಗಳನ್ನು ಕಾಲೇಜಿನ ವೆಬ್‌ಸೈಟ್‌ನಲ್ಲಿ ಕಡ್ಡಾಯವಾಗಿ ಅಪ್‌ಲೋಡ್‌ ಮಾಡತಕ್ಕದ್ದು.

ಇತರೆ ಮಾರ್ಗಸೂಚಿಗಳು
ಕಾಲೇಜಿನ ಸಂಪೂರ್ಣ ಕಟ್ಟಡ, ಮುಖ್ಯದ್ವಾರ, ಶೌಚಾಲಯ ಹಾಗೂ ಎಲ್ಲಾ ಕೊಠಡಿಗಳಲ್ಲಿನ ಪೀಠೋಪಕರಣ ಮತ್ತು ಪಠ್ಯಸಾಮಾಗ್ರಿಗಳನ್ನು ಸ್ಯಾನಿಟೈಸ್ ಮಾಡಿಸುವುದು.

ಬೋಧಕರು, ವಿದ್ಯಾರ್ಥಿಗಳು ಹಾಗೂ ಇತರೆ ಸಿಬ್ಬಂದಿ ಕಡ್ಡಾಯವಾಗಿ 3 ದಿನಗಳ ಮುಂಚೆ ಕೋವಿಡ್-19 (RTPCR)‌ ಪರೀಕ್ಷೆಯನ್ನು ಮಾಡಿಕೊಂಡು Test Report Negative ಇದ್ದಲ್ಲಿ ಮಾತ್ರ ವಿ‍ಶ್ವವಿದ್ಯಾಲಯ / ಕಾಲೇಜುಗಳಿಗೆ ಹಾಜರಾಗುವುದು.

ಎಲ್ಲಾ ಕಾಲೇಜುಗಳು ತಮ್ಮ ತಮ್ಮ ಸಮೀಪವಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗೊಂದಿಗೆ  Mapping ಮಾಡಿಕೊಳ್ಳವುದು.

ಪ್ರತಿ ತರಗತಿಯಿಂದ ಒಬ್ಬ ವಿದ್ಯಾರ್ಥಿಯನ್ನು ಗುರುತಿಸಿ ತನ್ನ ಸಹಪಾಠಿಗಳಲ್ಲೇನಾದರು ಕೋವಿಡ್‌ ಗೆ ಸಂಬಂಧಿಸಿದ ಲಕ್ಷಗಳನ್ನು ಕಂಡುಬಂದಲ್ಲಿ ಅದನ್ನು ಕೋವಿಡ್‌ ಕಾರ್ಯಪಡೆ / ಸೆಲ್‌ ಗಮನಕ್ಕೆ ತರುವಂತೆ ಸೂಚಿಸುವುದು.

ಕಾಲೇಜುಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮನೆಯಿಂದಲೇ ಊಟ ಮತ್ತು ಕುಡಿಯುವ ನೀರನ್ನು ಸ್ವತ: ತಂದು ಅವರೇ ಉಪಯೋಗಿಸುವುದು.

ಉಪನ್ಯಾಸಕರು ಕಡ್ಡಾಯವಾಗಿ ಮಾಸ್ಕ್‌ ಮತ್ತು Face Shield/ Visor ಅನ್ನು ಧರಿಸುವುದು. ಕಾಲೇಜುಗಳಲ್ಲಿ ಲೈಬ್ರರಿ ಮತ್ತು ಕ್ಯಾಂಟೀನ್‌ಗಳನ್ನು ತೆರೆಯುವಂತಿಲ್ಲ. ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಎನ್‌.ಸಿ.ಸಿ ಹಾಗೂ ಎನ್‌.ಎಸ್‌.ಎಸ್‌  ಚಟುವಟಿಕೆಗಳನ್ನು ಪ್ರಾರಂಭಿಸುವಂತಿಲ್ಲ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *