ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಆರೋಪ: ಶಿರಸಿ ಯುವಕ ಎಎನ್ಐ ವಶಕ್ಕೆ

ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿದ ಆರೋಪದಡಿ ಶಿರಸಿ ಮೂಲದ ಯುವಕನೋರ್ವನನ್ನು ಎಎನ್ಐ ತಂಡ ಬಂಧಿಸಿದೆ.

police arrest

ಶಿರಸಿ: ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿದ ಆರೋಪದಡಿ ಶಿರಸಿ ಮೂಲದ ಯುವಕನೋರ್ವನನ್ನು ಎಎನ್ಐ ತಂಡ ಬಂಧಿಸಿದೆ.

ಸಯ್ಯದ್ ಇದ್ರಿಸ್ ಸಾಬ್ ಮುನ್ನಾ ಬಂಧಿತ ಆರೋಪಿ. ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಪಶ್ಚಿಮ ಬಂಗಾಳ ವಿಭಾಗದ ತಂಡ ಬುಧವಾರ ನಸುಕಿನ ಜಾವ ಯುವಕನನ್ನು ಬಂಧಿಸಿ, ವಿಚಾರಣೆಗೆ ಕರೆದೊಯ್ದಿದೆ. ಬಂಧಿತ ಸಯ್ಯದ್ ಇದ್ರಿಸ್ ಸಾಬ್ ಮುನ್ನಾ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯರೊಬ್ಬರ ಮಗ ಎಂದು  ತಿಳಿದುಬಂದಿದೆ. ಈತ ಪಾಕಿಸ್ತಾನದಿಂದ ಕಾರ್ಯನಿರ್ವಹಿಸಿದ ಉಗ್ರ ಸಂಘಟನೆಯೊಂದರ ಸದಸ್ಯರೊಂದಿಗೆ ದೂರವಾಣಿ ಸಂಪರ್ಕ ಹೊಂದಿದ್ದ. ಅಲ್ಲದೆ ನಿರಂತರ ವಾಟ್ಸಾಪ್ ಚಾಟಿಂಗ್ ಕೂಡ ನಡೆಸಿದ್ದ ಎಂಬ ಆರೋಪವಿದೆ. 

ಈ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ಕಳೆದ ತಿಂಗಳು ಎರಡು ಬಾರಿ ಯುವಕನ ವಿಚಾರಣೆ ನಡೆಸಿದ್ದರು. ಕಳೆದ ಒಂದು ತಿಂಗಳ‌ ಹಿಂದಷ್ಟೆ ಎನ್.ಐ.ಎ ತಂಡ ಶಿರಸಿ ಯಲ್ಲಿ ಬೀಡು ಬಿಟ್ಟಿತ್ತು. ಇಲ್ಲಿನ ಸೈಯದ್ ನನ್ನು ಕೂಡಾ ತೀವ್ರ ವಿಚಾರಣೆ ನಡೆಸಿತ್ತು. ಕೆಲವಷ್ಟು ಸಾಕ್ಷ್ಯ ಪುರಾವೆಗಳನ್ನ ಸಂಗ್ರಹ ಮಾಡಿ  ಹೋಗಿತ್ತು. ಇದೀಗ ನಂಟು ಹೊಂದಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಂಗಳವಾರ ಶಿರಸಿಗೆ ಆಗಮಿಸಿದ್ದ ಎನ್ಐಎ ತಂಡ ಯುವಕನನ್ನು ಬಂಧಿಸಿ ಬುಧವಾರ ನಸುಕಿನ ಜಾವ ಕರೆದೊಯ್ದಿದೆ. 

ಈ ‌ಬಗ್ಗೆ ಮಾಹಿತಿ ನೀಡಿದ ಉತ್ತರ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಶಿವಪ್ರಕಾಶ್ ದೇವರಾಜು ಖಚಿತ ಪಡಿಸಿದ್ದಾರೆ. ಪಾಕಿಸ್ತಾನದ ಉಗ್ರ ಸಂಘಟನೆ ಜೊತೆ ಸೈಯದ್ ನಂಟಿರುವ ಹಿನ್ನಲೆಯಲ್ಲಿ ಬಂಧಿಸಲಾಗಿದೆ. ಇವತ್ತಿನ ಬಂಧನ ಕಾರ್ಯಾಚರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪೋಲಿಸರು ಸಹಕರಿಸಿದ್ದರು  ಎಂದು ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ...

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

Latest Posts

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ ಕುಡಿಯಾಗಿದ್ದ ರಮಾನಂದ ನಾಯಕ ಸಾಹಿತ್ಯ-ಸಾಂಸ್ಕೃತಿಕ ಮನಸ್ಸಿನ ತೂಕದ ವ್ಯಕ್ತಿಯಾಗಿದ್ದರು. ವಯೋಸಹಜ ಅನಾರೋಗ್ಯದಿಂದ ಇಂದು ಬೆಂಗಳೂರಿನಲ್ಲಿ ನಿಧನರಾದ ಅವರ ಶವ ಸಂಸ್ಕಾರ ಅವರ ಹುಟ್ಟೂರು ಹಿಚ್ಕಡದಲ್ಲಿ ಶುಕ್ರವಾರ ನಡೆಯಲಿದೆ. ಹಿರಿಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *