bunch of local news- ಉದ್ಯೋಗ ಖಾತ್ರಿ ಸದುಪಯೋಗಕ್ಕೆ ಕರೆ

ಪಟಾಕಿ ಸದ್ದಿಲ್ಲದ ದೀಪಾವಳಿ ನಡುವೆ ಸಂಭ್ರಮದಿಂದ ಬಿಂಗಿ ಆಚರಣೆ.

ಸಿದ್ದಾಪುರ: ದೀಪಾವಳಿ ಹಬ್ಬವೆಂದರೆ ದೀಪಗಳ ಹಬ್ಬ. ಅಂತೆಯೇ ಜನಪದ ಕಲೆಗಳಲ್ಲೊಂದಾದ ಬಿಂಗಿಪದಕ್ಕೂ ಕೂಡ ಅಷ್ಟೇ ಪ್ರಾಧಾನ್ಯತೆ ಇದೆ. ಮಲೆನಾಡಿನ ಕೆಲವು ಗ್ರಾಮಗಳಲ್ಲಿ ಈಗಲೂ ಕೂಡ ಬಿಂಗಿ ಹಾಡುವಿಕೆಯನ್ನು ನಡೆಸಿಕೊಂಡು ಬರಲಾಗುತ್ತಿದೆ. ಎಲೆ, ಹಣ್ಣಡಿಕೆ, ಸಿಂಗಾರ, ಪಚ್ಚತೆನೆಗಳಿಂದ ಸಿಂಗರಿಸಿದ ವಿಶೇಷವಾದ ಬಿಂಗಿ ದೀಪವನ್ನು ಹಿಡಿದು ರಾತ್ರಿಯಿಂದ ಬೆಳಗಿನ ತನಕ ಸುತ್ತಮುತ್ತಲಿನ ಗ್ರಾಮಗಳಿಗೆ ತೆರಳಿ ಬಿಂಗಿ ಪದಗಳನ್ನು ಹಾಡಿ ಜನರ ಮನತಣಿಸುತ್ತಾರೆ. ಬಲವಿಂದ್ರನ ಹಾಡು, ಗೋವಿನ ಹಾಡು, ಬಸವನ ಹಾಡು, ಎತ್ತಿಗೆ ಬಾಸಿಂಗ ಕಟ್ಟುವ ಹಾಡು ಮುಂತಾದ ಹಾಡುಗಳನ್ನು ಸೊಗಸಾಗಿ ಹಾಡಲಾಗುತ್ತದೆ.
ತಾಲೂಕಿನ ಹಾರ್ಸಿಕಟ್ಟಾ ಸಮೀಪದ ಕಿಲಾರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವಿಶೇಷ ಬಿಂಗಿ ಹಾಡುವಿಕೆಯನ್ನು ಆಚರಿಸಲಾಯಿತು. ರಾತ್ರಿಯಿಡೀ ನಿದ್ದೆಗೆಟ್ಟು ಯಾವುದೇ ಪ್ರತಿಫಲದ ಅಪೇಕ್ಷೆಯಿಲ್ಲದೇ ಹಿರಿಯರಿಂದ ಬಳುವಳಿಯಾಗಿ ಬಂದ ಈ ಕಲೆಯನ್ನು ಇಲ್ಲಿಯ ಯುವಕರು ಸಂಪ್ರದಾಯಬದ್ಧವಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ. ಇವರ ಈ ಕಲೆಯು ಹೀಗೆ ಮುಂದುವರಿಯಲಿ ಹಾಗೂ ಬಿಂಗಿಪದವನ್ನು ಉಳಿಸಿ ಬೆಳೆಸೋಣ ಎಂದು ಆಶಿಸೋಣ.

ಉದ್ಯೋಗ ಖಾತ್ರಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಕರೆ
ಸಿದ್ದಾಪುರ; ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯ ಡಿಯಲ್ಲಿ ಗ್ರಾಮೀಣ ಭಾಗದ ಜನತೆಗೆ ವರ್ಷದಲ್ಲಿ ಒಂದು ಕುಟುಂಬಕ್ಕೆ 100 ದಿನ ಉದ್ಯೋಗ ನೀಡುವುದಾಗಿದೆ. ಇದರಡಿಯಲ್ಲಿ 260 ಪ್ರಮುಖ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶಗಳಿವೆ. .ಈ ಕುರಿತು ಹೆಚ್ಚಿನ ಕಾಳಜಿಯನ್ನು ವಹಿಸಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಒಂಬುಡ್ಸ್‍ಮನ್ ಆರ್.ಜಿ.ನಾಯಕ ಹೇಳಿದರು.
ಅವರು ತಾಲೂಕಿನ ಕೋಲಶಿರ್ಸಿ ಮಾರಿಕಾಂಬಾ ಸಭಾಭವನದಲ್ಲಿ ಮನುವಿಕಾಸ ಸಂಸ್ಥೆ ಹಾಗೂ ಈಡಲ್ ಗಿವ್ ಫೌಂಡೇಶನ್ ಸಹಯೋಗದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಶ್ರಮಿಕ ಕುಟುಂಬಗಳಿಗೆ ಸಲಕರಣೆಗಳನ್ನು (ಗುದ್ದಲಿ,ಪಿಕಾಸಿ, ಬುಟ್ಟಿ)ವಿತರಿಸಿ ಮಾತನಾಡಿದರು. ಆಹಾರ ಭದ್ರತೆಯೊಂದಿಗೆ ಉದ್ಯೋಗವನ್ನು ನೀಡುವುದು ಕಾಯದೆಯ ಮುಖ್ಯ ಉದ್ದೇಶವಾಗಿದೆ.ಇದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಯಾಗಿದ್ದು ಒಂದು ಉತ್ತಮ ಕಾರ್ಯಕ್ರಮವಾಗಿದೆ. ಇದರ ಅನುಷ್ಠಾನದಲ್ಲಿ ಮನುವಿಕಾಸ ಸಂಸ್ಥೆ ಹೆಚ್ಚಿನ ಆಸಕ್ತಿ ವಹಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಉತ್ತರ ಕನ್ನಡ ಜಿಲ್ಲಾ ಗ್ರಾಮೀಣಾಭಿವೃದ್ಧಿ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, ಫೇವಾರ್ಡ ಯು.ಕೆ ಅಧ್ಯಕ್ಷ ನಾಗರಾಜ ನಾಯ್ಕ ಮಾಳ್ಕೋಡ ಮಾತನಾಡಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಮುದಾಯದ ಕಾಮಗಾರಿಗಳ ಜೊತೆಯಲ್ಲಿ ಅನೇಕ ವೈಯಕ್ತಿಕ ಕಾಮಗಾರಿಗಳನ್ನು ಮಾಡುವುದಕ್ಕೆ ಅವಕಾಶಗಳಿವೆ. ಸಾರ್ವಜನಿಕರಿಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದಾಗಿದೆ. ಕೋವಿಡ್ ಸಂದರ್ಭದಲ್ಲಿ ಉದ್ಯೋಗ ಇಲ್ಲದವರಿಗೆ ಈ ಯೋಜನೆ ಬದುಕಿಗೆ ಭರವಸೆಯನ್ನು ತುಂಬಿದೆ. ಅನೇಕರು ಕೆಲಸಗಳನ್ನು ಮಾಡಿ ಜೀವನದ ನಿರ್ವಹಣೆಯನ್ನು ಮಾಡಿಕೊಳ್ಳುವುದಕ್ಕೆ ಸಹಕಾರಿಯಾಗಿದೆ.ಸಂಸ್ಥೆಯು ಇದಕ್ಕೆ ಪೂರಕವಾದ ಅಗತ್ಯ ಸಹಕಾರವನ್ನು ನೀಡಿ ನೆರವಾಗಿದೆ ಎಂದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ತಾಲೂಕ ಸಾಮಾಜಿಕ ಲೆಕ್ಕ ಪರಿಶೋಧಕರಾದ ನಾಗರಾಜ ಹೆಗಡೆ, ಸ್ಥಳೀಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರು, ಗ್ರಾಮ ಪಂಚಾಯತ ನಿಕಟಪೂರ್ವ ಉಪಾಧ್ಯಕ್ಷ ಕೆ.ಆರ್.ವಿನಾಯಕ(ಬಾಬು ನಾಯ್ಕ), ಪಿಡಿಓ ಸುಬ್ರಹ್ಮಣ್ಯ ಹೆಗಡೆ ಮನುವಿಕಾ ಸಂಸ್ಥೆಯ ಸಿ.ಓಓ ಸಂಜೀವ ಕುಲಕರ್ಣಿ ಮಾತನಾಡಿದರು.
ಮನುವಿಕಾಸ ಸಂಸ್ಥೆಯ ಅಶ್ವತ ನಾಯ್ಕ ಸ್ವಾಗತಿಸಿದರು,ನಿರ್ದೇಶಕ ಗಣಪತಿ ಭಟ್ ಪ್ರಸ್ತಾವಿಕವಾಗಿ ಮಾತನಾಡಿದರು. ಪವನ ಬೊಮ್ಮನಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ಪುನಿತ ನಾಯ್ಕ ವಂದಿಸಿದರು.

RKMS Martial Arts Uttarakannada ಸಂಸ್ಥೆ ವತಿಯಿಂದ ಶಿರಸಿಯ ಶ್ರೀ ಮಾರಿಕಾಂಬಾ ಕ್ರೀಡಾಂಗಣದಲ್ಲಿ ಉ.ಕ. ಜಿಲ್ಲೆಯ ಹೆಮ್ಮೆಯ *ಏಕಲವ್ಯ ಪ್ರಶಸ್ತಿ ವಿಜೇತ ಹಾಗೂ ಕಾಮನ್ವೆಲ್ತ್ ಗೇಮ್ಸ್ ಜಾವೆಲಿನ್ ತ್ರೋ ವಿನ್ನರ್ ಹಾಗೂ ಪ್ರಸ್ತುತ ಸ್ಪೋರ್ಟ್ಸ್ ಕೋಚ್ ಆದಂತಹ ಕಾಶೀನಾಥ್ ನಾಯ್ಕ್ ಬೆಂಗಳೆ ರಿಗೆ ಉತ್ತರ ಕನ್ನಡ ಕರಾಟೆ ಶಿಕ್ಷಕರಾದ ಆನಂದ ಕ್ರಷ್ಣ ನಾಯ್ಕ ಮತ್ತು ಕರಾಟೆ ವಿದ್ಯಾರ್ಥಿಗಳು ಹಾಗೂ ಶಿರಸಿ ಯ ಪ್ರಶಾಂತ, ರವೀಂದ್ರ ನಾಯ್ಕ ಮತ್ತು ಶಿರಸಿ ತಾಲೂಕಿನ ನಾಗರಿಕರು ಸೇರಿ ಸನ್ಮಾನಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *