

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆ ಸದಸ್ಯರಾಗಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ ಡಾ. ಕೆ. ನಾರಾಯಣ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು.

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆ ಸದಸ್ಯರಾಗಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ ಡಾ. ಕೆ. ನಾರಾಯಣ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು.

ಸೋಮವಾರ ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಬೇರೆ ಯಾವ ಪಕ್ಷದ ಅಭ್ಯರ್ಥಿಯೂ ನಾಮಪತ್ರ ಸಲ್ಲಿಸದ ಕಾರಣ ಡಾ. ಕೆ. ನಾರಾಯಣ ಅವರು ರಾಜ್ಯಸಭೆ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ಉಪ ಚುನಾವಣಾಧಿಕಾರಿ, ರಾಜ್ಯ ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷ್ಮಿ ಅವರು ಅಧಿಕೃತವಾಗಿ ಈ ಕುರಿತು ಘೋಷಣೆ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನವೆಂಬರ್ 18ರಂದು ರಾಜ್ಯಸಭೆ ಉಪ ಚುನಾವಣೆ ಅಭ್ಯರ್ಥಿ ಡಾ. ಕೆ. ನಾರಾಯಣ ಅವರಿಗೆ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಬಿ-ಫಾರಂ ವಿತರಣೆ ಮಾಡಿದ್ದರು. ಅಂದೇ ನಾಮಪತ್ರವನ್ನು ಸಲ್ಲಿಸಲಾಗಿತ್ತು.


ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾದ ಡಾ. ಕೆ. ನಾರಾಯಣ್ ಅವರನ್ನು ಉಪ ಮುಖ್ಯಮಂತ್ರಿ ಡಾ. ಸಿ. ಎನ್.ಅಶ್ವತ್ ನಾರಾಯಣ, ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಸಚಿವ ಡಾ. ಕೆ. ಸುಧಾಕರ್ ಸೇರಿದಂತೆ ಹಲವು ಮುಖಂಡರು ಅಭಿನಂದಿಸಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






