

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ಫಿಕ್ಸ್ ಆಗಿದೆ.
–

ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ಫಿಕ್ಸ್ ಆಗಿದೆ.
2021ರ ಫೆಬ್ರವರಿ 26, 27 ಮತ್ತು 28ರಂದು ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಕನ್ನಡ ಸಾಹಿತ್ಯ ಪರುಷತ್ ಅಧ್ಯಕ್ಷ ಡಾ. ಮನು ಬಳಗಾರ್ ಅಧ್ಯಕ್ಷತೆಯಲ್ಲಿ, ಮಂಗಳವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತಂತೆ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದು ಮಾರ್ಗಸೂಚಿಗಳನ್ನು ಸಡಿಲಗೊಳಿಸಿ ಅಕ್ಷರ ಜಾತ್ರೆಗೆ ಅನುವು ಮಾಡಿಕೊಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗುತ್ತದೆ ಎಂದು ಮನು ಬಳಗಾರ್ ಹೇಳಿದ್ದಾರೆ. (kpc)
