pop-like-bikani-ಬಿಕಿನಿ ರೂಪದರ್ಶಿ ಪೋಟೋಗೆ ‘ಲೈಕ್’ ಕೊಟ್ಟ ಪೋಪ್; ಮುಂದೇನಾಯ್ತು ನೋಡಿ!

ಧರ್ಮಾಧಿಕಾರಿಗಳು, ಪಾದ್ರಿಗಳು, ಪ್ರೀಸ್ಟ್ ಗಳಿಗೆ ಕೆಲವು ನಿರ್ಬಂಧಗಳಿವೆ. ಸಾಮಾನ್ಯ ಜನರಂತೆ ವರ್ತಿಸಬಾರದು. ಬಂಧಗಳು, ಬಾಹ್ಯ ಸುಖಗಳಿಂದ ದೂರವಿರಬೇಕು. ಯಾವುದೇ ವಾಂಛೆಗಳಿಲ್ಲದೆ ಬದುಕಬೇಕು. ಒಂದೊಮ್ಮೆ ಈ ಲಕ್ಷ್ಮಣ ರೇಖೆಗಳನ್ನು ದಾಟಿದರೆ, ತೀವ್ರರೀತಿಯ ಟೀಕೆಗಳನ್ನು ಎದುರಿಸಬೇಕಾಗುತ್ತದೆ.

ಪ್ರಸ್ತುತ ಇಂತಹ ಇಕ್ಕಟ್ಟಿನ ಪರಿಸ್ಥಿತಿಯನ್ನು ಪೋಪ್ ಫ್ರಾನ್ಸಿಸ್ ಎದುರಿಸುತ್ತಿದ್ದಾರೆ. ‘ನಿಮಗಿದು ಯೋಗ್ಯವೇ ? ಇದಕ್ಕೆ ನಿಮ್ಮ ಉತ್ತರವೇನು?’ ಎಂದು ನೆಟಿಜನ್‌ಗಳು ಪೋಪ್ ಅವರನ್ನು ಪ್ರಶ್ನಿಸುತ್ತಿದ್ದಾರೆ. ಈ ಪ್ರಮಾಣದ ಆಕ್ರೋಶಕ್ಕೆ ಕಾರಣ ಏನೆಂದರೆ? ಪೋಪ್ ಫ್ರಾನ್ಸಿಸ್ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಿಂದ… ಬಿಕಿನಿ ಧರಿಸಿದ ಬ್ರೆಜಿಲ್ ರೂಪದರ್ಶಿ ಪೋಟೋ ಮೆಚ್ಚಿ ಲೈಕ್ ಮಾಡಿರುವುದು.

ಈ ‘ಮೆಚ್ಚುಗೆ’ ಗೆ ಈ ಟೀಕೆಗಳು ವ್ಯಕ್ತವಾಗಿವೆ. ರೂಪದರ್ಶಿ ನಟಾಲಿಯೊ ಗಾರಿಬೊಟ್ಟೊ ಕಳೆದ ತಿಂಗಳು ಐದರಂದು ಬಿಕಿನಿ ಧರಿಸಿ ಶಾಲೆಯೊಂದರ ಲಾಕರ್ ಬಳಿ ನಿಂತಿರುವ ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು. ‘ನಾನು ನಿಮಗೆ ಒಂದೆರೆಡು ಎರಡು ವಿಷಯಗಳ ಕಲಿಸಬಲ್ಲೆ’ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಮಾಡಲಾದ ಈ ಪೋಟೋ 1.5 ದಶಲಕ್ಷಕ್ಕೂ ಹೆಚ್ಚು ಲೈಕ್ ಗಳನ್ನು ಪಡೆದುಕೊಂಡಿದೆ.

ಈ ಪೋಟೋವನ್ನು ಪೋಪ್ ಫ್ರಾನ್ಸಿಸ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ತಿಂಗಳ 13 ರಂದು ‘ಲೈಕ್’ ಮಾಡಿದ್ದರು ಎಂದು ವರದಿಯಾಗಿದೆ. ಇದಕ್ಕೆ ಸಂಬಂಧಿಸಿದ ಸ್ಕ್ರೀನ್‌ಶಾಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮರುದಿನ ಅನಿರೀಕ್ಷಿತವಾಗಿ ‘ಡಿಸ್ ಲೈಕ್’ ಎಂದು ಕಾಣಿಸಿಕೊಂಡು ಮತ್ತಷ್ಟು ಗೊಂದಲ ಮೂಡಿಸಿದೆ.

ಈ ಮಧ್ಯೆ, ನಟಾಲಿಯಾ ಮ್ಯಾನೇಜ್ಮೆಂಟ್ ಕಂಪನಿ ಸಿಓವೈ.ಕೋ ಈ ವಿಷಯವನ್ನು ತನ್ನ ಪ್ರಚಾರಕ್ಕಾಗಿ ಬಳಸಲು ಉದ್ದೇಶಿಸಿದೆ. ಪೋಪ್ ಫ್ರಾನ್ಸಿಸ್ ಲೈಕ್ ಮಾಡಿರುವ ಸ್ಕ್ರೀನ್‌ಶಾಟ್ ಅನ್ನು ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದೆ. ಸಿಓವೈ. ಕೋಗೆ ‘ಪೋಪ್‌ನಿಂದ ಆಶೀರ್ವಾದ ಲಭಿಸಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *