

ರೈತರ ಧ್ವನಿ ಕೇಳದ ಬಿಜೆಪಿಯು ಪ್ರತಿಭಟನೆ ಹತ್ತಿಕ್ಕಲು ಜಲ ಫಿರಂಗಿ ಬಳಸುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿಜೆಪಿ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.

ನವದೆಹಲಿ: ರೈತರ ಧ್ವನಿ ಕೇಳದ ಬಿಜೆಪಿಯು ಪ್ರತಿಭಟನೆ ಹತ್ತಿಕ್ಕಲು ಜಲ ಫಿರಂಗಿ ಬಳಸುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿಜೆಪಿ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.
ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಯನ್ನು ವಿರೋಧಿಸಿ ದೆಹಲಿ ಚಲೋ ಚಳವಳಿ ಭಾಗವಾಗಿ ಪಂಜಾಬ್ ರೈತರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ವೇಳೆ ಪೊಲೀಸ್ ಬ್ಯಾರಿಕೇಡ್ ಮುರಿದು ಹರ್ಯಾಣ ರಾಜ್ಯ ಪ್ರವೇಶಿಸಲು ಮುಂದಾದ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಹಾಗೂ ಜಲ ಫಿರಂಗಿಗಳನ್ನು ಬಳಕೆ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ನೂತನ ಮಸೂದೆ ವಿರುದ್ಧ ಪ್ರತಿಭಟನೆಗೆ ಇಳಿದಿರುವ ರೈತರ ಧ್ವನಿ ಕೇಳುವ ಬದಲು ಬಿಜೆಪಿ ಸರ್ಕಾರ ಅವರ ವಿರುದ್ಧ ಜಲಫಿರಂಗಿ ಬಳಕೆ ಮಾಡುತ್ತಿದ್ದಾರೆ. ಬಂಡವಾಳಶಾಹಿಗಳಿಗೆ ಬ್ಯಾಂಕುಗಳು, ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣಗಳು ಮತ್ತು ಸಾಲ ಮನ್ನಾ ಮಾಡಲಾಗುತ್ತಿದ್ದು, ರೈತರಿನಿಂದ ಎಲ್ಲವನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. (kpc)
