

ದೇಶಾದ್ಯಂತ ನಡೆಯತ್ತಿರುವ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿರುವ ಕಾಂಗ್ರೆಸ್, ಕೇಂದ್ರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮೂರು ರೈತ-ವಿರೋಧಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಶುಕ್ರವಾರ ಭರವಸೆ ನೀಡಿದೆ.

ನವದೆಹಲಿ: ದೇಶಾದ್ಯಂತ ನಡೆಯತ್ತಿರುವ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿರುವ ಕಾಂಗ್ರೆಸ್, ಕೇಂದ್ರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮೂರು ರೈತ-ವಿರೋಧಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಶುಕ್ರವಾರ ಭರವಸೆ ನೀಡಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಆದ್ಯತೆ ಮೇರೆಗೆ ಮೂರು ರೈತ-ವಿರೋಧಿ ನೀತಿಗಳನ್ನು ರದ್ದುಗೊಳಿಸುವುದಾಗಿ ತಿಳಿಸಿದರು.
ನಮ್ಮ ಪಕ್ಷ ಆರಂಭದಿಂದಲೂ ಅದನ್ನು ವಿರೋಧಿಸುತ್ತಿದೆ. ಈ ಕಾಯ್ದೆ ವಿರೋಧಿಸಿದ್ದಕ್ಕೆ ಕಾಂಗ್ರೆಸ್ ಸಂಸದರನ್ನು ಅಮಾನತಿನಲ್ಲಿ ಕೂಡ ಇಡಲಾಗಿತ್ತು ಎಂದರು.
ದೇಶದಲ್ಲಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ, ಈ ಮೂರು ಕಾಯ್ದೆಗಳಿಂದ ರೈತರಿಗೆ ನಷ್ಟವಾಗುವುದನ್ನು ತಡೆಯಲು ರಾಜ್ಯ ಮಟ್ಟದಲ್ಲಿ ಹೊಸ ಕಾನೂನುಗಳನ್ನು ರಚಿಸಲಾಗುತ್ತಿದೆ ಎಂದು ಹೇಳಿದರು.
ರೈತರು ಯಾವುದೇ ನಿರ್ದಿಷ್ಟ ಪಕ್ಷಕ್ಕೆ ಸೇರಿಲ್ಲ. ಅವರು ಎಲ್ಲರ ಹೊಟ್ಟೆ ತುಂಬಿಸಲು ಶ್ರಮ ಪಡುತ್ತಾರೆ. ಕೇಂದ್ರ ಸರ್ಕಾರ ಅವರ ಧ್ವನಿಯನ್ನು ಆಲಿಸಬೇಕು ಎಂದರು. (kpc)




