ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ನಿಗದಿ: ಡಿಸೆಂಬರ್ 22, 27ರಂದು ಎರಡು ಹಂತಗಳಲ್ಲಿ ಮತದಾನ, 30ಕ್ಕೆ ಎಣಿಕೆ

ರಾಜ್ಯದ 5,762 ಗ್ರಾಮ ಪಂಚಾಯತಿಗಳ ಚುನಾವಣೆಗೆ ಇಂದು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ.

Representatonal image

ಬೆಂಗಳೂರು: ರಾಜ್ಯದ 5,762 ಗ್ರಾಮ ಪಂಚಾಯತಿಗಳ ಚುನಾವಣೆಗೆ ಇಂದು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ.

ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಡಿಸೆಂಬರ್ 22 ಮತ್ತು 27ರಂದು ಮತದಾನ ನಡೆಯಲಿದೆ. ಡಿಸೆಂಬರ್ 30ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಡಾ.ಬಸವರಾಜು ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಮೊದಲ ಹಂತದ ಚುನಾವಣೆ ಡಿಸೆಂಬರ್ 11 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು, ಹಿಂಪಡೆಯಲು 14 ಕೊನೆಯ ದಿನಾಂಕವಾಗಿದೆ.

ಎರಡನೆ ಹಂತದ ಚುನಾವಣೆಗೆ ಡಿಸೆಂಬರ್ 16 ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಹಾಗೂ ಡಿಸೆಂಬರ್ 19 ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ. ಇಂದಿನಿಂದಲೇ ರಾಜ್ಯವ್ಯಾಪಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ ಎಂದು ಅವರು ತಿಳಿಸಿದರು.

ಡಿಸೆಂಬರ್ 7 ರಂದು ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆಗೆ ಅಧಿಸೂಚನೆ ಹೊರಬೀಳಲಿದೆ. 92121 ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 2,930 ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ. 2ನೇ ಹಂತದಲ್ಲಿ 2832 ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ ಎಂದು ಅವರು ತಿಳಿಸಿದರು.

ಡಿಸೆಂಬರ್ 11 ರಂದು ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ನಾಮಪತ್ರ ಪರಿಶೀಲನೆಗೆ ಡಿಸೆಂಬರ್ 16 ಕೊನೆ ದಿನ. ಡಿಸೆಂಬರ್ 30ಕ್ಕೆ ಪಂಚಾಯತಿ ಚುನಾವಣೆ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ. ಡಿಸೆಂಬರ್ 11 ರಂದು ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನಾಮಪತ್ರ ಪರಿಶೀಲನೆಗೆ ಡಿಸೆಂಬರ್ 16 ಕೊನೆ ದಿನ. ಡಿಸೆಂಬರ್ 30ಕ್ಕೆ ಪಂಚಾಯತಿ ಚುನಾವಣೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಡಾ.ಬಸವರಾಜು ತಿಳಿಸಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *