

ಅಹಂಕಾರ ಬಿಟ್ಟು ಎದ್ದೇಳಿ, ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಅವರ ಹಕ್ಕುಗಳನ್ನು ನೀಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ

ನವದೆಹಲಿ: ಅಹಂಕಾರ ಬಿಟ್ಟು ಎದ್ದೇಳಿ, ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಅವರ ಹಕ್ಕುಗಳನ್ನು ನೀಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಕೇಂದ್ರದ ಹೊಸ ಕೃಷಿ-ಮಾರುಕಟ್ಟೆ ಕಾನೂನುಗಳ ವಿರುದ್ಧ ಹೆಚ್ಚಾಗಿ ಪಂಜಾಬ್ ಮತ್ತು ಹರಿಯಾಣ ಮೂಲದ ರೈತರು ರಾಷ್ಟ್ರ ರಾಜಧಾನಿಯ ಸಿಂಗು, ಟಿಕ್ರಿ ಮತ್ತು ಗಾಜಿಪುರ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ರೈತರ ಶ್ರಮಕ್ಕೆ ಎಲ್ಲರೂ ಆಭಾರಿಯಾಗಿದ್ದಾರೆ, ಹೀಗಾಗಿ ಅವರಿಗೆ ನ್ಯಾಯ ಒದಗಿಸುವ ಮೂಲಕ ನಾವು ಅವರು ಋಣವನ್ನು ತೀರಿಸಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಅನ್ನದಾತರು ರಸ್ತೆಯಲ್ಲಿ ಕುಳಿತಿದ್ದರೆ ಟಿವಿಯಲ್ಲಿ ಭಾಷಣಗಳು ಬರುತ್ತಿವೆ, ಶ್ರಮಜೀವಿಗಳ ಋಣದಲ್ಲಿದ್ದೇವೆ, ಅವರಿಗೆ ನ್ಯಾಯ ಒದಗಿಸುವ ಮೂಲಕ ಅವರ ಋಣ ತೀರಿಸಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಕುರ್ಚಿ ಬಿಟ್ಟು ಎದ್ದೇಳಿ, ರೈತರ ಮೇಲೆ ಟಿಯರ್ ಗ್ಯಾಸ್ ಮತ್ತು ಅವರ ಮೇಲೆ ದಬ್ಬಾಳಿಕೆ ನಡೆಸುವುದನ್ನು ಬಿಡಿ ಎಂದು ರಾಹುಲ್ ಟ್ವಟ್ಟರ್ ನಲ್ಲಿ ಮೋದಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. (kpc)
