ರೈತರ ಪ್ರತಿಭಟನೆ 7ನೇ ದಿನಕ್ಕೆ: ದೆಹಲಿ-ನೋಯ್ಡಾ ಗಡಿ ಬಂದ್, ನಾಳೆ ಮತ್ತೊಂದು ಸುತ್ತಿನ ಸಭೆಗೆ ರೈತ ಸಂಘಟನೆಗಳ ಒಪ್ಪಿಗೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ 3 ಕೃಷಿ ಸುಧಾರಣೆ ಕಾಯ್ದೆಗಳನ್ನು ರದ್ದುಪಡಿಸುವಂತೆ ಬಿಗಿಪಟ್ಟು ಹಿಡಿದು ರೈತರು ನಡೆಸುತ್ತಿರುವ ಪ್ರತಿಭಟನೆ 7ನೇ ದಿನಕ್ಕೆ ಕಾಲಿಟ್ಟಿದೆ.

farmers relax at the Delhi-UP border after lunch at Ghazipur

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ 3 ಕೃಷಿ ಸುಧಾರಣೆ ಕಾಯ್ದೆಗಳನ್ನು ರದ್ದುಪಡಿಸುವಂತೆ ಬಿಗಿಪಟ್ಟು ಹಿಡಿದು ರೈತರು ನಡೆಸುತ್ತಿರುವ ಪ್ರತಿಭಟನೆ 7ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನಾ ನಿರತ ರೈತರೊಂದಿಗೆ ಕೇಂದ್ರ ಸರ್ಕಾರ ಈ ವರೆಗೂ ನಡೆಸಿದ ಎಲ್ಲಾ ಪ್ರಯತ್ನಗಳು ವಿಫಲಗೊಂಡಿದ್ದು, ಗುರುವಾರ ಮತ್ತೊಂಂದು ಸುತ್ತಿನ ಸಭೆ ನಡೆಸಲು ಮುಂದಾಗಿದೆ. ಈ ಸಭೆಗೆ ರೈತರ ಸಂಘಟನೆಗಳೂ ಒಪ್ಪಿಗೆ ನೀಡಿವೆ. 

ನಿನ್ನೆಯಷ್ಟೇ 35 ಸಂಘಟನೆಗಳ ಪ್ರತಿನಿಧಿಗಳ ಜೊತೆಗೆ ಮಾತುಕತೆ ನಡೆಸಿದ್ದ ಕೇಂದ್ರ ಸಚಿವರು, ರೈತರ ಬೇಡಿಕೆಗಳ ಪರಿಶೀಲನೆಗೆ 5 ಸದಸ್ಯರ ಉನ್ನತ ಸಮಿತಿ ರಚಿಸುವುದಾಗಿ ಹೇಳಿದ್ದರು, ಆದರೆ, ಇದಕ್ಕೆ ರೈತ ಸಂಘಟನೆಗಳು ಒಪ್ಪಿರಲಿಲ್ಲ. ಅಲ್ಲದೆ ಪ್ರತಿಭಟನೆ ಮುಂದುವರೆಸುವುದಾಗಿ ತಿಳಿಸಿದ್ದವು. 

ಇದರಂತೆ ರೈತರ ಮನವೊಲಿಕೆ ಪ್ರಯತ್ನವನ್ನು ಮುಂದುವರೆಸಲು ನಿರ್ಧರಿಸಿರುವ ಕೇಂದ್ರ ಸರ್ಕಾರ ಡಿ.3ರ ಗುರುವಾರ ಮತ್ತೊಂದು ಸುತ್ತಿನ ಸಭೆ ನಡೆಸುವುದಾಗಿ ತಿಳಿಸಿದೆ. ಅದಕ್ಕೆ ರೈತ ಸಂಘಟನೆಗಳೂ ಒಪ್ಪಿಕೊಂಡಿವೆ. ಆದರೆ, ಕೃಷಿ ಸುಧಾರಣೆಗೆ ಸಂಬಂಧಿಸಿದ 3 ವಿವಾದಿತ ಕಾಯ್ದೆಗಳನ್ನು ರದ್ದುಪಡಿಸುವವರೆಗೂ ತಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಪುನರುಚ್ಛಾರ ಮಾಡಿವೆ. 

ಈ ನಡುವೆ ಇಂದೂ ಕೂಡ ರೈತರ ಸಂಘಟನೆಗಳು ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆಯನ್ನು ಮುಂದುವರೆಸಿದ್ದು, ಪ್ರತಿಭಟನಾನಿರತ ರೈತರು ದೆಹಲಿ ಮತ್ತು ಉತ್ತರಪ್ರದೇಶ ಸಂಪರ್ಕಿಸುವ ಪ್ರಮುಖ ಹೆದ್ದಾರಿಗಳನ್ನು ಬಂದ್ ಮಾಡಿದ್ದಾರೆಂದು ತಿಳಿದುಬಂದಿದೆ. 

ಮತ್ತಷ್ಟು ಓದು: ರೈತರ 'ದೆಹಲಿ ಚಲೋ' ಪ್ರತಿಭಟನೆಗೆ ಬೆಂಬಲ; ಹೊಸಪೇಟೆ-ಬಳ್ಳಾರಿ‌ ಹೆದ್ದಾರಿಯಲ್ಲಿ‌ ರಸ್ತೆ ತಡೆದು ಪ್ರತಿಭಟನೆ

ಪಶ್ಚಿಮ ಉತ್ತರಪ್ರದೇಶದ ವಿವಿಧ ಜಿಲ್ಲೆಗಳ ರೈತರು ದೆಹಲಿ-ನೊಯ್ಡಾ ಗಡಿ ಭಾಗದಲ್ಲಿ ಜಮಾಯಿಸಿದ್ದು, ದೆಹಲಿಯಲ್ಲಿ ಹರಿಯಾಣ-ಪಂಜಾಬ್ ರೈತರು ಆಂಭಿಸಲಿರುವ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ರಾಜಧಾನಿಯತದ್ತ ಹೊರಟಿದ್ದಾರೆ. ಇದರಿಂದ ಉತ್ತರ ಪ್ರದೇಶವನ್ನು ರಾಷ್ಟ್ರ ರಾಜಧಾನಿಯೊಂದಿಗೆ ಸಂಪರ್ಕಿಸುವ ಪ್ರಮುಖ ಮಾರ್ಗವನ್ನು ಮುಚ್ಚಲಾಗಿದೆ.

ರಾಷ್ಟ್ರ ರಾಜಧಾನಿಗೆ ಪ್ರಯಾಣಿಸುವ ಪ್ರಯಾಣಿಕರು ಚಿಲ್ಲಾ ಮಾರ್ಗ ಬಳಸದೆ ದೆಹಲಿ-ನೋಯ್ಡಾ ಡೈರೆಕ್ಟ್ (ಡಿಎನ್‌ಡಿ) ಅಥವಾ ಕಲಿಂದಿ ಕುಂಜ್ ರಸ್ತೆಯನ್ನು ಬಳಸುವಂತೆ ದೆಹಲಿ ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ.

ಗೌತಮ್ ಬುದ್ಧ ದ್ವಾರ ಬಳಿ ರೈತರು ಪ್ರತಿಭಟನೆ ನಡೆಸುತ್ತಿರುವುದರಿಂದ ನೋಯ್ಡಾ-ಲಿಂಕ್ ರಸ್ತೆಯ ಚಿಲ್ಲಾ ಗಡಿಯನ್ನು ಮುಚ್ಚಲಾಗಿದೆ. ನೋಯ್ಡಾಕ್ಕೆ ಹೋಗುವವರು ನೋಯ್ಡಾ-ಲಿಂಕ್ ರಸ್ತೆ ಬಳಸದೆ ನೋಯ್ಡಾಕ್ಕೆ ಬದಲಾಗಿ ಎನ್ ಎಚ್ -24 ಮತ್ತು ಡಿಎನ್‌ ಡಿ ಬಳಸುವಂತೆ ಜನರಿಗೆ ಸೂಚಿಸಲಾಗಿದೆ ಎಂದು ದೆಹಲಿ ಸಂಚಾರ ಪೊಲೀಸರು ಟ್ವೀಟ್ ಮೂಲಕ ತಿಳಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *