ಸಿದ್ದಾಪುರ: ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದಾಪುರ ತಾಲೂಕಿನ ಬಿಳಗಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪರಮ್ ಬೀರಾ ಗೌಡ (65) ನಿಧನರಾಗಿದ್ದಾರೆ.
ಇತ್ತೀಚೆಗೆ ಕಿಡ್ನಿ ಸಮಸ್ಯೆ ಇಂದ ಬಳಲುತ್ತಿದ್ದ ಇವರಿಗೆ ಶಿರಸಿ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇತ್ತೀಚೆಗೆ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳು, ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಇವರು ಬಿಜೆಪಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರ ನಿಧನಕ್ಕೆ ಬಿಜೆಪಿ ಮುಖಂಡರು ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.