ಶಿವಮೊಗ್ಗದಲ್ಲಿ ಮತೀಯ ಗಲಭೆ: ಹಲವೆಡೆ ಕರ್ಫ್ಯೂ ಜಾರಿ, 62 ಮಂದಿ ಬಂಧನ

ಶಿವಮೊಗ್ಗದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮವಾಗಿ ನಗರದ ಹಲವೆಡೆ ಕರ್ಫ್ಯೂ ಹೇರಲಾಗಿದ್ದು, 62 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

arrest

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮವಾಗಿ ನಗರದ ಹಲವೆಡೆ ಕರ್ಫ್ಯೂ ಹೇರಲಾಗಿದ್ದು, 62 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ನಿನ್ನೆ ಶಿವಮೊಗ್ಗ ನಗರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ  62 ಮಂದಿಯನ್ನು ಬಂಧಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಕರ್ಫ್ಯೂ ಹೇರಲಾಗಿದೆ. ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಪೂರ್ವ ವಲಯ ಐಜಿಪಿ ಎಸ್ .ರವಿ ಅವರು, ‘ನಗರದಲ್ಲಿ ಪರಿಸ್ಥಿತಿ  ಸಂಪೂರ್ಣ ಹತೋಟಿಗೆ ಬಂದಿದೆ. ಶಾಂತಿ-ಸುವ್ಯವಸ್ಥೆ ನಿಯಂತ್ರಣದಲ್ಲಿದೆ, ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದು, ದೊಡ್ಡಪೇಟೆ ಮತ್ತು ಕೋಟೆ ಮತ್ತು ತುಂಗಾ ನಗರಠಾಣೆ ವ್ಯಾಪ್ತಿಯಲ್ಲಿ 10 ಪ್ರಕರಣಗಳು ದಾಖಲಾಗಿವೆ. ನಾಗೇಶ್ ಹಲ್ಲೆ ಪ್ರಕರಣದ ಆರೋಪಿಗಳನ್ನು ಶೀಘ್ರದಲ್ಲೇ  ಬಂಧಿಸಲಾಗುವುದು ಎಂದು ಹೇಳಿದರು.

ಕರ್ಫ್ಯೂ ಜಾರಿ: ಈಗಾಗಲೇ ಜಿಲ್ಲೆಯಲ್ಲಿ 148 ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದ್ದು, ಬೇರೆ ಜಿಲ್ಲೆಗಳಿಂದ ಬರುವ ದುಷ್ಕರ್ಮಿಗಳನ್ನು ತಡೆಯಲು 9 ಕಡೆ ಚೆಕ್ ಪೋಸ್ಟ್ ಹಾಕಲಾಗಿದೆ. 19 ಮೊಬೈಲ್ ಗಸ್ತು ವಾಹನ ಹಾಗೂ 22 ಚಿತಾ ವಾಹನಗಳು ನಗರದಾದ್ಯಂತ ಗಸ್ತು  ತಿರುಗುತ್ತಿವೆ. 3 ಪ್ಯಾಟ್ರೋಲ್ ವಾಹನ  ಗಸ್ತು ತಿರುಗುತ್ತಿವೆ. ನಗರದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ದಾವಣಗೆರೆ ಮತ್ತು ಚಿತ್ರದುರ್ಗ ವಲಯದ 1 ಸಾವಿರ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಅಂತೆಯೇ ಸಾರ್ವಜನಿಕರು ಯಾವುದೇ ರೀತಿಯ ವದಂತಿಗಳಿಗೆ  ಕಿವಿಗೊಡಬೇಡಿ ಎಂದ ಅವರು, ಪರಿಸ್ಥಿತಿ ಬಿಗಡಾಯಿಸದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳುತ್ತದೆ. ನಗರದಲ್ಲಿ ಶಾಂತಿ‌ ನೆಲೆಸಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕಾರ ನೀಡಬೇಕು ಎಂದು ಮನವಿಮಾಡಿದರು.

ಇದೇ ವೇಳೆ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಮಾತನಾಡಿ, ಡಿ.5 ರವರೆಗೆ ಕರ್ಪ್ಯೂ ಜಾರಿಯಲ್ಲಿರಲಿದ್ದು, ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ. ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ವತ್ಯಯವಾಗುವುದಿಲ್ಲ. ಅಗತ್ಯ ವಸ್ತುಗಳನ್ನು ಹೊರತು ಪಡಿಸಿ ಎಲ್ಲ ರೀತಿ ವಾಣಿಜ್ಯ  ಚಟುವಟಿಕೆಗಳು ಸ್ಥಗಿತವಾಗಿವೆ ಎಂದು ಹೇಳಿದರು.(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *