
ಆರ್ಥಿಕತೆ ಮತ್ತು ಪರಿಸರ ವಿಜ್ಞಾನದ ಚರ್ಚೆಯು ಪ್ರಬಲವಾಗಿರುವ ಮಲೆನಾಡು ಪ್ರದೇಶದಲ್ಲಿ, ಕಾಂಗ್ರೆಸ್ ಮತ್ತು ಬಿಜೆಪಿ ಒಂದು ಹಂತದಲ್ಲಿ ಒಂದಾಗಿ ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿವೆ.


ಚಿಕ್ಕಮಗಳೂರು: ಆರ್ಥಿಕತೆ ಮತ್ತು ಪರಿಸರ ವಿಜ್ಞಾನದ ಚರ್ಚೆಯು ಪ್ರಬಲವಾಗಿರುವ ಮಲೆನಾಡು ಪ್ರದೇಶದಲ್ಲಿ, ಕಾಂಗ್ರೆಸ್ ಮತ್ತು ಬಿಜೆಪಿ ಒಂದು ಹಂತದಲ್ಲಿ ಒಂದಾಗಿ ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿವೆ.
ಗುರುವಾರ ಎಲ್ಲಾ ಪಕ್ಷಗಳು ಸಂಗಮೇಶ್ವರಪೇಟೆಯಲ್ಲಿ ಭೇಟಿಯಾಗಿದ್ದರು. ಕಾಂಗ್ರೆಸ್ ನಾಯಕ ಬಿಎನ್ ಸಂತೋಷ್. ಬಿಜೆಪಿ ಘಟಕದ ಅಧ್ಯಕ್ಷ ರವಿಗೌಡ ಹೂಗೇರಿ ನೇತೃತ್ವದಲ್ಲಿ ಸಭೆ ಸೇರಿ, ಖಾಂಡ್ಯಾ ಹೋಬಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವದನ, ಬಿಡಾರೆ, ಹೂಯಿಗೆರೆ ಮತ್ತು ಕಡವಂತಿ ಪಂಚಾಯಿತಿ ಚುನಾವಣೆಗಳನ್ನು ಬಹಿಷ್ಕರಿಸಲು ನಿರ್ಣಯ ಕೈಗೊಂಡಿದ್ದಾರೆ.
ಆನ್‌ಲೈನ್ ಸೇರಿದಂತೆ ಯಾವುದೇ ವಿಧದಲ್ಲೂ ಯಾರೂ ಕೂಡ ನಾಮಪತ್ರ ಸಲ್ಲಿಸಬಾರದು ಎಂದು ಖಾಂಡ್ಯ ನಾಗರೀಕ ಹಿತರಕ್ಷಣಾ ವೇದಿಕೆ ಹಾಗೂ ಸರ್ವಜನಿಕರು ಸೂಚಿಸಿದ್ದಾರೆ. ಶತಮಾನಗಳ ಬದುಕೆ ಬೀದಿಗೆ ಬೀಳುವಾಗ ಚುನಾವಣೆ ಬೇಕೇ ಎಂಬ ಪ್ರಶ್ನೆ ಮಲೆನಾಡಿಗರಲ್ಲಿ ಮೂಡಿದೆ. ಈಗಾಗಲೇ ಮಲೆನಾಡಿಗರ ಬದುಕಿನ ಮೇಲೆ ಹುಲಿ ಯೋಜನೆ, ಬಫರ್
ಝೋನ್, ಕಸ್ತೂರಿ ರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯದ ತೂಗುಗತ್ತಿ ತೂಗುತ್ತಿದೆ. ಸರ್ಕಾರದ ಈ ಯೋಜನೆಗಳಿಂದ ಜಿಲ್ಲೆಯ ಮಲೆನಾಡು ಭಾಗದ ನೂರಾರು ಗ್ರಾಮಗಳೇ ಕಣ್ಮರೆಯಾಗಲಿವೆ. ಈ ಕಾರಣಕ್ಕೆ ಮಲೆನಾಡಿಗರು ಚುನಾವಣಾ ಬಹಿಷ್ಕಾರಕ್ಕೆ ಸಿದ್ಧತೆ ನಡೆಸಿದ್ದಾರೆ.
ಖಾಂಡ್ಯ ಹೋಬಳಿಯ ಕಡವಂತಿ, ಹುಯಿಗೆರೆ, ದೇವದಾನ ಹಾಗೂ ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಈಗಾಗಲೇ ಅಲ್ಲಲ್ಲಿ ಬ್ಯಾನರ್ ಕಟ್ಟಿದ್ದು, ಚುನಾವಣೆಗಿಂತ ಬದುಕು ದೊಡ್ಡದ್ದಾಗಿರುವ ಕಾರಣ ಮಲೆನಾಡಲ್ಲಿ ಚುನಾವಣೆ ಬಹಿಷ್ಕಾರದ ಕೂಗು ಜೋರಾಗಿದೆ.
ಈಗಾಗಲೇ ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತೀ ಭೂತ್ ಗೆ ಒಂದೊಂದು ಬ್ಯಾನರ್ ಕಟ್ಟಲು ಮುಂದಾಗಿದ್ದಾರೆ. ಯಾರೂ ನಾಮಪತ್ರ ಸಲ್ಲಿಸದೇ ಅಧಿಕಾರಿಗಳಿಗೆ ಎಚ್ಚರಿಕೆಯ ಸಂದೇಶ ನೀಡಲು ಮುಂದಾಗಿದ್ದಾರೆ. ಇದು ನಮ್ಮ ಅಳಿವು-ಉಳಿವಿನ ಪ್ರಶ್ನೆ. ಜೀವನವನ್ನ ಬಲಿ ಕೊಡುವ ಬದಲು ಚುನಾವಣೆ ಬಹಿಷ್ಕಾರ ಮಾಡಿ ಸಂದೇಶ ರವಾನಿಸಲು ನಿರ್ಧರಿಸಿದ್ದಾರೆ.
ಐದು ವರ್ಷಗಳ ಅವಧಿಯ ಸದಸ್ಯ ತ್ವಕ್ಕೆ ಬದುಕನ್ನ ಬಲಿ ಕೊಡುವ ಬದಲು ಸರ್ಕಾರಕ್ಕೆ ಎಚ್ಚರಿಕೆ ನೀಡೋಣ ಎಂದು ಖಾಂಡ್ಯ ನಾಗರೀಕ ಹಿತರಕ್ಷಣಾ ವೇದಿಕೆ ಮುಂದಾಗಿದೆ. ಆದ್ದರಿಂದ ಎಲ್ಲಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದೆ ಮತದಾರರು ಮತದಾನ ಮಾಡದೆ ಚುನಾವಣೆ ಬಹಿಷ್ಕಾರಕ್ಕೆ ಬೆಂಬಲ ನೀಡಬೇಕೆಂದು ಖಾಂಡ್ಯ ಹೋಬಳಿ ಹಿತರಕ್ಷಣಾ ಸಮಿತಿ ಮತದಾರರಲ್ಲಿ ಮನವಿ ಮಾಡಿದೆ
ಈ ಸಂಬಂಧ ಪ್ರತಿಕ್ರಿಯಿಸಿರುವ ಶೃಂಗೇರಿ ಶಾಸಕ ಟಿಡಿ ರಾಜೇಗೌಡ ಸಿಎಂ ಯಡಿಯೂರಪ್ಪ ಸಮಸ್ಯೆ ಬಗೆಹರಿಸಲು ವಿಫಲರಾಗಿದ್ದಾರೆ, ಹೀಗಾಗಿ ತಾವು ಜನತೆ ಪರವಾಗಿ ನಿಲ್ಲುವುದಾಗಿ ತಿಳಿಸಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
