nation @ 14 dce- ಮುಷ್ಕರ ಅಂತ್ಯ,ಹೊಸ ಕೃಷಿ ಕಾನೂನುಗಳು ‘ರೈತ ವಿರೋಧಿ’,

ಸಾರಿಗೆ ನೌಕರರ ಮುಷ್ಕರ ಅಂತ್ಯ: ಬಸ್ ಗಳ ಸಂಚಾರ ಶುರು, ಜನತೆ ನಿರಾಳ!

ನಾಲ್ಕು ದಿನಗಳಿಂದ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಅಂತ್ಯವಾಗಿದೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಅನುಮತಿಸಿದ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆದಿರುವುದಾಗಿ ನೌಕರರ ಸಮ್ಮುಖದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ. 

Transport Employees Strike

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸಿಬ್ಬಂದಿ ಸಂಘಟನೆಗಳು ನಡೆಸುತ್ತಿದ್ದ ಮುಷ್ಕರ ಅಂತ್ಯಗೊಂಡಿದ್ದು, ನೌಕರರು ತಮ್ಮ ಕರ್ತವ್ಯಕ್ಕೆ ಹಾಜರಾಗಿದ್ದಾರೆ. 

ಹಲವು ನಾಟಕೀಯ ತಿರುವುಗಳನ್ನು ಪಡೆದ ಸಾರಿಗೆ ಸಂಸ್ಥೆ ಸಿಬ್ಬಂದಿ ಪ್ರಮುಖರ ಮುಷ್ಕರ ಕೊನೆಗೂ ಅಂತ್ಯಗೊಂಡಿದೆ. ಸರ್ಕಾರ ಹಲವು ಸುತ್ತಿನ ಮಾತುಕತೆ ನಂತರ ಅಂತಿಮವಾಗಿ ಮಷ್ಕರ ಕೈಬಿಡಲು ಸಾರಿಗೆ ಸಿಬ್ಬಂದಿ ಸಂಘಟನೆಗಳು ತೀರ್ಮಾನಿಸಿವೆ. 
ಕಳೆದ ನಾಲ್ಕು ದಿನಗಳಿಂದ ರಸ್ತೆ ಸಾರಿಗೆ ಸಂಸ್ಥೆಗಳ ನೌಕರರು ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಮುಷ್ಕರ ನಡೆಸುತ್ತಿದ್ದರು. ಇಂದು ಸರ್ಕಾರದಿಂದ ಬೇಡಿಕೆಗಳ ಈಡೇರಿಕೆಗೆ ಲಿಖಿತ ರೂಪದಲ್ಲಿ ಭರವಸೆ ದೊರೆತ ಹಿನ್ನೆಲೆಯಲ್ಲಿ ನೌಕರರು ಮುಷ್ಕರವನ್ನು ಹಿಂಪಡೆದಿದ್ದಾರೆ.

ಹತ್ತು ಬೇಡಿಕೆಗಳ ಪೈಕಿ ಒಂಬತ್ತು ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಒಪ್ಪಿರುವ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನೌಕರರು ಮುಷ್ಕರವನ್ನು ಹಿಂಪಡೆದಿದ್ದಾರೆಂದು ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. 

ಸಾರಿಗೆ ಇಲಾಖೆ ಜವಾಬ್ದಾರಿ ಹೊತ್ತಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತನಾಡಿ, ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ, ಕೋವಿಡ್ ಸೋಂಕಿನಿಂದ ಮೃತಪಟ್ವ ನೌಕರರ ಕುಟುಂಬದವರಿಗೆ 30 ಲಕ್ಷ ರೂಪಾಯಿ ಪರಿಹಾರ, ಅಂತರ್ ನಿಗಮ ವರ್ಗಾವಣೆ, ತರಬೇತಿ ಅವಧಿಯನ್ನು2 ವರ್ಷದಿಂದ 1 ವರ್ಷಕ್ಕೆ ಕಡಿತ ಮಾಡುವುದೂ ಸೇರಿದಂತೆ ಚಾಲಕರಿಗೆ ವಿಶೇಷ ಭತ್ಯೆ, ಮೇಲಾಧಿಕಾರಿಗಳ ಕಿರುಕುಳ ತಡೆ ಸೇರಿದಂತೆ ನೌಕರರ 9 ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದ್ದಾರೆ.

ರಸ್ತೆ ಸಾರಿಗೆ ನಿಗಮ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಲು ಸಾಧ್ಯವಿಲ್ಲ, ಈ ಬಗ್ಗೆ ಆರ್ಥಿಕ ಇಲಾಖೆ ಮಾಹಿತಿ ನೀಡಿದೆ. ಈಗಾಗಲೇ ನೌಕರರು ರಾಜ್ಯದ ಹಲವೆಡೆ ಕರ್ತವ್ಯಕ್ಕೆ ಹಾಜರಾಗಿದ್ದು, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆಂದು ಲಕ್ಷ್ಮಣ ಸವದಿ ಹೇಳಿದ್ದಾರೆ. 

ಮುಷ್ಕರದ ನಾಲ್ಕನೇ ದಿನವಾದ ಇಂದು ಬೆಳಿಗ್ಗೆಯಿಂದಲೇ ಬೆಂಗಳೂರು ಸೇರಿದಂತೆ ಕೆಲವೆಡೆ ಬಸ್ ಸಂಚಾರ ಆರಂಭಗೊಂಡಿತ್ತು. ಸಂಜೆ ವೇಳೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 310, ಬೆಂಗಳೂರು ಮಹಾನಗರ ಸಾರಿಗೆ ನಿಗಮ 211, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ 347 ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ 269 ಬಸ್‌ಗಳು ಸಂಚಾರ ಆರಂಭಿಸಿತ್ತು. ಮೈಸೂರು, ರಾಯಚೂರು, ಚಿಕ್ಕಮಗಳೂರು ಹಾಗೂ ಕೊಪ್ಪಳ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಧ್ಯಾಹ್ನದ ವೇಳೆಗೆ ಭಾಗಶಃ ಬಸ್ ಸಂಚಾರ ಪುನರಾರಂಭಗೊಂಡಿತ್ತು.

ಹೊಸ ಕೃಷಿ ಕಾನೂನುಗಳು ‘ರೈತ ವಿರೋಧಿ’, ಬಂಡವಾಳಶಾಹಿಗಳಿಗೆ ಲಾಭವಾಗುತ್ತದೆ: ಅರವಿಂದ್ ಕೇಜ್ರಿವಾಲ್

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು ‘ರೈತ ವಿರೋಧಿ’ಯಾಗಿದ್ದು, ಅಪಾರ ಪ್ರಮಾಣದ ಹಣದುಬ್ಬರಕ್ಕೆ ಕಾರಣವಾಗುತ್ತದೆ ಮತ್ತು ಬಂಡವಾಳಶಾಹಿಗಳಿಗೆ ಲಾಭವಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ.

arvind-k1

ನವದೆಹಲಿ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು ‘ರೈತ ವಿರೋಧಿ’ಯಾಗಿದ್ದು, ಅಪಾರ ಪ್ರಮಾಣದ ಹಣದುಬ್ಬರಕ್ಕೆ ಕಾರಣವಾಗುತ್ತದೆ ಮತ್ತು ಬಂಡವಾಳಶಾಹಿಗಳಿಗೆ ಲಾಭವಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.

ಪ್ರತಿಭಟನಾ ನಿರತ ರೈತರಿಗೆ ಬೆಂಬಲವಾಗಿ ಇಂದು ಎಎಪಿ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ಪಕ್ಷದ ಕಚೇರಿಯಲ್ಲಿ ಇಂದು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದ ದೆಹಲಿ ಸಿಎಂ, ಹೊಸ ಕೃಷಿ ಕಾನೂನುಗಳು ಹಣದುಬ್ಬರಕ್ಕೆ ಪರವಾನಗಿ ನೀಡುತ್ತವೆ ಎಂದರು.

ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್ ಅವರು, ಜನರು ಬಯಸಿದಷ್ಟು ಸಂಗ್ರಹಿಸಬಹುದು ಎಂದು ಈ ಕಾನೂನು ಹೇಳುತ್ತದೆ. ಹೀಗಾಗಿ ರೈತರ ವಿಷಯದ ಬಗ್ಗೆ ಕೊಳಕು ರಾಜಕೀಯ ಮಾಡುವುದನ್ನು ನಿಲ್ಲಿಸುವಂತೆ ನಾನು ರಾಜಕೀಯ ಪಕ್ಷಗಳಿಗೆ ಮನವಿ ಮಾಡುತ್ತೇನೆ. ಈ ಕಾನೂನುಗಳು ರೈತ ವಿರೋಧಿ ಮತ್ತು ಜನ ಸಾಮಾನ್ಯರ ವಿರೋಧಿಯಾಗಿವೆ. ಇದರಿಂದ ಕೆಲವು ಬಂಡವಾಳಶಾಹಿಗಳಿಗೆ ಮಾತ್ರ ಅನುಕೂಲವಾಗುತ್ತದೆ. ಈ ಕಾನೂನುಗಳಿಂದ ಅಪಾರ ಹಣದುಬ್ಬರಕ್ಕೆ ಕಾರಣವಾಗುತ್ತದೆ ಎಂದು ಆರೋಪಿಸಿದರು.

ಈ ಕಾನೂನುಗಳಿಂದಾಗಿ, ಮುಂದಿನ ವರ್ಷಗಳಲ್ಲಿ ಗೋಧಿ ಬೆಲೆ ನಾಲ್ಕು ಪಟ್ಟು ಹೆಚ್ಚು ದುಬಾರಿಯಾಗಲಿದೆ ಎಂದು ದೆಹಲಿ ಸಿಎಂ ಹೇಳಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *