tukde gang- ಕೇಸರಿ ಪಕ್ಷವೇ ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್

ಬಿಜೆಪಿ ಸಿಖ್ಖರ ವಿರುದ್ಧ ಹಿಂದೂಗಳನ್ನು ಎತ್ತಿ ಕಟ್ಟುತ್ತಿದೆ, ಕೇಸರಿ ಪಕ್ಷವೇ ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್: ಸುಖ್ಬೀರ್ ಬಾದಲ್

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಂಗಳವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎಸ್‌ಎಡಿ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್…

Shiromani_Akali_Dal_president_Sukhbir_Singh_Badal1

ಚಂಡೀಗಢ: ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಂಗಳವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎಸ್‌ಎಡಿ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರು, ಕೇಸರಿ ಪಕ್ಷವೇ “ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್” ಎಂದು ಕರೆದಿದ್ದಾರೆ.

ಬಿಜೆಪಿ ಪಂಜಾಬ್‌ನಲ್ಲಿ ಸಿಖ್ಖರ ವಿರುದ್ಧ ಹಿಂದೂಗಳನ್ನು ಎತ್ತಿ ಕಟ್ಟುತ್ತಿದೆ ಎಂದು ಆರೋಪಿಸಿದ ಶಿರೋಮಣಿ ಅಕಾಲಿ ದಳದ ಅಧ್ಯಕ್ಷ, ಬಿಜೆಪಿ ಮೊದಲು ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಎತ್ತಿಕಟ್ಟಿತು. ಈಗ ಶಾಂತಿ ಪ್ರಿಯ ಪಂಜಾಬಿ ಹಿಂದೂಗಳನ್ನು ನಮ್ಮ ಸಿಖ್ ಸಹೋದರರ ವಿರುದ್ಧ ಎತ್ತಿಕಟ್ಟಲು ಪ್ರಯತ್ನಿಸುತ್ತಿದೆ. ದೇಶಭಕ್ತ ಪಂಜಾಬ್​ನ್ನು ಬಿಜೆಪಿ ಕೋಮು ಜ್ವಾಲೆಗೆ ತಳ್ಳಲು ಪ್ರಯತ್ನಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ನೇತೃತ್ವದ ಸರ್ಕಾರ ತನ್ನ ‘ಅಹಂ’ ಅನ್ನು ಬದಿಗಿಟ್ಟು ಪ್ರತಿಭಟನೆ ನಡೆಸುತ್ತಿರುವ ರೈತರ ಮಾತುಗಳನ್ನು ಕೇಳಬೇಕು ಎಂದು ಪಂಜಾಬ್ ಮಾಜಿ ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ.

ಯಾರಾದರು ಕೇಂದ್ರ ಸರ್ಕಾರದ ಪರವಾಗಿ ಮಾತನಾಡಿದರೆ ಅವರನ್ನು ‘ದೇಶಭಕ್ತ’ ಎಂದು ಕರೆಯಲಾಗುತ್ತದೆ ಮತ್ತು ಸರ್ಕಾರದ ವಿರುದ್ಧ ಮಾತನಾಡಿದರೆ ಅವರನ್ನು “ತುಕ್ಡೆ ತುಕ್ಡೆ ಗ್ಯಾಂಗ್” ಎಂದು ಬ್ರಾಂಡ್ ಮಾಡಲಾಗುತ್ತಿದೆ. ಆದರೆ ಬಿಜೆಪಿಯೇ ದೇಶದ ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಬಿಜೆಪಿ ರಾಷ್ಟ್ರೀಯ ಐಕ್ಯತೆಯನ್ನು ಒಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಇದೇ ಕೃಷಿ ಕಾನೂನುಗಳ ವಿಚಾರಕ್ಕೆ ಸಂಬಂಧಿಸಿದಂತೆ ಎಸ್‌ಎಡಿ ಎನ್ ಡಿಎ ಮೈತ್ರಿಕೂಟದಿಂದ ಹೊರ ಬಂದಿದ್ದು, ಮೋದಿ ಸಂಪುಟದಲ್ಲಿ ಸಚಿವೆಯಾಗಿದ್ದ ಎಸ್‌ಎಡಿ ನಾಯಕಿ ಹರ್ಸಿಮ್ರತ್ ಕೌರ್ ಬಾದಲ್ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *