ಅಸಮಾಧಾನಗೊಂಡ ಶಾಸಕರಿಗೆ ಬಂಪರ್ ಗಿಫ್ಟ್ ನೀಡಿದ ಸಿಎಂ ಯಡಿಯೂರಪ್ಪ

ಸಂಪುಟ ವಿಸ್ತರಣೆ ವಿಳಂಬ: ಕಳೆದೊಂದು ವರ್ಷದಿಂದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಾಕಷ್ಟು ಕಸರತ್ತುಗಳನ್ನು ನಡೆಸುತ್ತಲೇ ಇದ್ದರೂ ಅದು ಸಾಧ್ಯವಾಗುತ್ತಿಲ್ಲ. ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸಿಗದ ಕಾರಣ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಸಲು ಆಗುತ್ತಿಲ್ಲ. ಹೀಗಾಗಿ ಅಸಮಾಧಾನಗೊಂಡಿರುವ  ಶಾಸಕರಿಗೆ…

CM yeddyurappa

ಬೆಂಗಳೂರು: ಕಳೆದೊಂದು ವರ್ಷದಿಂದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾಕಷ್ಟು ಕಸರತ್ತುಗಳನ್ನು ನಡೆಸುತ್ತಲೇ ಇದ್ದರೂ ಅದು ಸಾಧ್ಯವಾಗುತ್ತಿಲ್ಲ. ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸಿಗದ ಕಾರಣ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಸಲು ಆಗುತ್ತಿಲ್ಲ. ಹೀಗಾಗಿ ಅಸಮಾಧಾನಗೊಂಡಿರುವ ಶಾಸಕರಿಗೆ ಯಡಿಯೂರಪ್ಪ ಅವರು ಬಂಪರ್ ಗಿಫ್ಟ್ ನೀಡಿದ್ದಾರೆ. 

13 ಮಂದಿ ಬಿಜೆಪಿ ಶಾಸಕರಿಗೆ ಸಂಪುಟ ದರ್ಜೆಯ ನಿಗಮ ಮಂಡಳಿ ಸ್ಥಾನ ಹಾಗೂ ನಾಲ್ವರಿಗೆ ರಾಜ್ಯ ದರ್ಜೆಯ ಸ್ಥಾನಮಾನವನ್ನು ನೀಡುವಂತೆ ಆದೇಶಿಸಿದ್ದಾರೆ. 

ಸಂಪುಟ ಸಭೆಯಲ್ಲಿ ಯಾವುದೇ ಸ್ಥಾನಮಾನ ಲಭ್ಯವಾಗದ ಬಿಜೆಪಿ ಶಾಸಕರನ್ನು ಗುರುತಿಸುವ ಸಲುವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು, 13 ಶಾಸಕರನ್ನು ರಾಜ್ಯ ಆಡಳಿತ ಮಂಡಳಿಗಳು ಮತ್ತು ನಿಗಮಗಳಿಗೆ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಈ ಶ್ರೇಣಿಯು ಕ್ಯಾಬಿನೆಟ್ ಮಂತ್ರಿಯ ಸ್ಥಾನಕ್ಕೆ ಸಮನಾಗಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಈ ನಡುವೆ 14ನೇ ನೇಮಕಾತಿಯಾಗಿ ನಿವೃತ್ತ ಮಾಹಿತಿ ವಿಭಾಗದ ಅಧಿಕಾರಿಯೊಬ್ಬರನ್ನು ಸಿಎಂ ಅವರ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿರುವುದು ವಿಶೇಷ. ಕ್ಯಾಬಿನೆಟ್ ಶ್ರೇಣಿಯೊಂದಿಗೆ ಇತರ ನಾಲ್ವರು ಶಾಸಕರನ್ನು ಇತರ ಮಂಡಳಿಗಳು ಮತ್ತು ನಿಗಮಗಳಿಗೆ ನೇಮಕ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
 
ಎನ್ ಭೃಂಗೇಶ್ ಅವರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *