ಹೊಸ ತಳಿಯ ಕೊರೊನಾ ವೈರಸ್ ಪತ್ತೆ, ಸೋಂಕು ಹರಡುವಿಕೆ ವೇಗ ಶೇ.70ರಷ್ಟು ಹೆಚ್ಚಳ; ತುರ್ತು ಸಭೆ ಕರೆದ ಬ್ರಿಟನ್‌ ಸರ್ಕಾರ!

ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್‌ ಪತ್ತೆಯಾಗಿದ್ದು, ಹಾಲಿ ಇರುವ ವೈರಸ್ ತಳಿಗಿಂತ ಇದು ಶೇ.70ರಷ್ಟು ಹರಡುವಿಕೆ ವೇಗವನ್ನು ಹೊಂದಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

Coronavirus

ಲಂಡನ್‌: ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್‌ ಪತ್ತೆಯಾಗಿದ್ದು, ಹಾಲಿ ಇರುವ ವೈರಸ್ ತಳಿಗಿಂತ ಇದು ಶೇ.70ರಷ್ಟು ಹರಡುವಿಕೆ ವೇಗವನ್ನು ಹೊಂದಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಹೌದು.. ಬ್ರಿಟನ್ ನಲ್ಲಿ ಕೊರೋನಾ ವೈರಸ್ ನ ಹೊಸ ತಳಿ ಪತ್ತೆಯಾಗಿದೆ. ಇದು ವಿಜ್ಞಾನಿಗಳ ನಿರೀಕ್ಷೆಯನ್ನೂ ಮೀರಿ ಅತ್ಯಂತ ವೇಗವಾಗಿ ಹರಡುತ್ತಿದ್ದು, ಪರಿಸ್ಥಿತಿ ಕೈಮೀರಿದೆ ಎಂದು ಸ್ವತಃ ಬ್ರಿಟನ್‌ ಸರ್ಕಾರ ಹೇಳಿದೆ. ಇದರ ಬೆನ್ನಲ್ಲೇ ಬ್ರಿಟನ್‌ನಿಂದ ಬರುವ ಎಲ್ಲಾ ವಿಮಾನಗಳನ್ನು  ಯೂರೋಪ್ ಹಲವು ರಾಷ್ಟ್ರಗಳು ರದ್ದುಪಡಿಸಿವೆ. 

ಬ್ರಿಟನ್‌ನ ಕೆಲವು ಭಾಗದಲ್ಲಷ್ಟೇ ಹೊಸ ಕೊರೊನಾವೈರಸ್ ಪತ್ತೆಯಾಗಿದೆ. ಹೀಗಾಗಿ ಬ್ರಿಟನ್‌ನ ನಗರ ಪ್ರದೇಶಗಳಲ್ಲಿ ಕಠಿಣ ಲಾಕ್‌ಡೌನ್‌ ಹೇರಲಾಗಿದೆ. ಹಲವು ಪ್ರದೇಶಗಳಲ್ಲಿ ಭಾನುವಾರದಿಂದಲೇ ಲಾಕ್‌ ಡೌನ್ ಜಾರಿಯಾಗಿದೆ. ಕೆಲವು ಪ್ರದೇಶಗಳಲ್ಲಿ ಡಿಸೆಂಬರ್ 26ರಿಂದ  ಜಾರಿಯಾಗಲಿದೆ. ಕ್ರಿಸ್‌ಮಸ್‌ ಮತ್ತು ಹೊಸ ವರ್ಷಾಚರಣೆಗಾಗಿ ಜನರು ಸೇರುವುದನ್ನು ನಿಷೇಧಿಸಲಾಗಿದೆ. ಈ ವಿಷಯವನ್ನು ಬ್ರಿಟನ್ ಸರ್ಕಾರ ಘೋಷಿಸಿದ ಬೆನ್ನಲ್ಲೇ ನೆರೆಯ ರಾಷ್ಟ್ರಗಳು, ಬ್ರಿಟನ್‌ಗೆ ವಿಮಾನ ಸಂಪರ್ಕವನ್ನು ರದ್ದುಪಡಿಸಿವೆ. ಬ್ರಿಟನ್‌ನಲ್ಲಿ ಪತ್ತೆಯಾದಂತಹ ವೈರಸ್‌ನ  ಪ್ರಕರಣಗಳು ಡೆನ್ಮಾರ್ಕ್‌ನಲ್ಲಿ, ನೆದರ್‌ಲೆಂಡ್ಸ್‌ನಲ್ಲಿ ಪತ್ತೆಯಾಗಿವೆ.

ಯೂರೋಪ್‌ನ ಎಲ್ಲಾ ರಾಷ್ಟ್ರಗಳಿಗೆ ಈ ವೈರಸ್ ಹರಡಿರುವ ಅಪಾಯವಿದೆ. ಹೀಗಾಗಿಯೇ ಬ್ರಿಟನ್‌ ಜತೆಗೆ ವಿಮಾನ ಸಂಪರ್ಕವನ್ನು ಇತರೆ ರಾಷ್ಟ್ರಗಳು ರದ್ದುಪಡಿಸಿವೆ. ಬೆಲ್ಜಿಯಂ, ಆಸ್ಟ್ರಿಯಾ, ನೆದರ್‌ಲೆಂಡ್ಸ್‌, ಡೆನ್ಮಾರ್ಕ್, ಸ್ಪೇನ್‌ ಈಗಾಗಲೇ ಬ್ರಿಟನ್‌ನಿಂದ ವಿಮಾನ ಸಂಚಾರವನ್ನು  ರದ್ದುಪಡಿಸಿವೆ. ಜರ್ಮನಿಯೂ ಈ ಕ್ರಮವನ್ನು ತೆಗೆದುಕೊಳ್ಳಲು ಚಿಂತನೆ ನಡೆಸುತ್ತಿದೆ.

ಹೊಸ ಸ್ವರೂಪದ ವೈರಸ್‌ ಹಾಲಿ ಇರುವ ವೈರಸ್ ಗಿಂತ ಶೇ.70ರಷ್ಟು ಹೆಚ್ಚು ಹರಡುವಿಕೆ ವೇಗ ಹೊಂದಿದೆ ಎಂದು ಹೇಳಲಾಗುತ್ತಿದ್ದು, ಸೋಂಕು ಹರಡುವುದನ್ನು ತಡೆಗಟ್ಟಲು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆಯು ಐರೋಪ್ಯ ರಾಷ್ಟ್ರಗಳಿಗೆ ಸೂಚನೆ ನೀಡಿದೆ.

ತುರ್ತು ಸಭೆ
ಬ್ರಿಟನ್‌ನಲ್ಲಿ ಕಾಣಿಸಿಕೊಂಡಿರುವ ಹೊಸ ವೈರಸ್‌ ಬಗ್ಗೆ ಚರ್ಚಿಸಲು ಕೇಂದ್ರದ ಆರೋಗ್ಯ ಸಚಿವಾಲಯವು ಸೋಮವಾರ ಜಂಟಿ ಮೇಲ್ವಿಚಾರಣಾ ಸಮಿತಿಯ ತುರ್ತು ಸಭೆಯನ್ನು ಕರೆದಿದೆ. ಆರೋಗ್ಯ ಸೇವೆಗಳ ಮಹಾನಿರ್ದೇಶಕರ ಅಧ್ಯಕ್ಷತೆಯಲ್ಲಿ ಜಂಟಿ ಮೇಲ್ವಿಚಾರಣಾ ಸಮಿತಿಯು  ಸೋಮವಾರ ಸಭೆ ಸೇರಿ ಹೊಸ ವೈರಸ್‌ ಬಗ್ಗೆ ಚರ್ಚೆ ನಡೆಸಲಿದೆ. ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಭಾರತದ ಪ್ರತಿನಿಧಿಯಾಗಿರುವ ಡಾ. ರಾಡ್ರಿಕೊ ಎಚ್‌. ಆಫ್ರಿನ್‌ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *